Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

ಮಹಾಲಕ್ಷ್ಮೀ ಕೋ ಆಪ್‌. ಬ್ಯಾಂಕ್‌ನಿಂದ 25 ಲಕ್ಷ ರೂ. ಪ್ರತಿಭಾ ಪುರಸ್ಕಾರ ವಿತರಣೆ

Team Udayavani, Oct 2, 2023, 11:36 PM IST

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

ಉಡುಪಿ: ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ಸಲ್ಲಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಬಹುದು. ಈ ನಿಟ್ಟಿ ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ನೆರವಾಗುವುದು, ಅವರ ಪ್ರತಿಭೆಯನ್ನು ಗುರುತಿಸಿ ಆರ್ಥಿಕ ಸಹಕಾರ ನೀಡಿ ಪ್ರೋತ್ಸಾಹಿಸುವುದು ಪುಣ್ಯದ ಕೆಲಸ ಎಂದು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ ಹೇಳಿದರು.

ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಸೋಮವಾರ ಅಜ್ಜರಕಾಡು ಪುರಭವನ ದಲ್ಲಿ ನಡೆದ “ಪ್ರತಿಭಾ ಪುರಸ್ಕಾರ ವಿತರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾಲಕ್ಷ್ಮೀ ಕೋ ಆಪ್‌ ಬ್ಯಾಂಕ್‌ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ. ಸದಸ್ಯರಿಗೆ ಗರಿಷ್ಠ ಡಿವಿಡೆಂಡ್‌, ವರ್ಷದಿಂದ ವರ್ಷಕ್ಕೆ ಶಾಖೆಗಳ ವಿಸ್ತರಣೆ ಮಾಡುವ ಮೂಲಕ ಯಶ್‌ಪಾಲ್‌ ಸುವರ್ಣ ನೇತೃತ್ವದ ಈ ಬ್ಯಾಂಕ್‌ ಉತ್ತರೋತ್ತರ ಅಭಿವೃದ್ಧಿ ಕಾಣುತ್ತಿದೆ ಎಂದು ಶ್ಲಾ ಸಿದ ಅವರು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬ್ಯಾಂಕ್‌ ಸಮಾಜಮುಖಿ ಕಾರ್ಯ ದಲ್ಲಿಯೂ ಮುಂಚೂಣಿಯಲ್ಲಿದೆ ಎಂದು ಎಸ್‌ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌ ಶ್ಲಾಘಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರಸನ್ನ ಎಚ್‌., ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್‌ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಅಜಯ್‌ ಪಿ. ಶೆಟ್ಟಿ, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಸುಕನ್ಯಾ ಮಾರ್ಟಿಸ್‌ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರೂ ಆದ ಶಾಸಕ ಯಶ್‌ಪಾಲ್‌ ಎ. ಸುವರ್ಣ ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ, ವಿಜೇತಾ ಶೆಟ್ಟಿ ನಿರೂಪಿಸಿದರು.

ವೈದ್ಯರಿಗೆ ಸಮ್ಮಾನ
ವೈದ್ಯಕೀಯ ಕ್ಷೇತ್ರದ ಸೇವೆ ಗುರುತಿಸಿ ಹಿರಿಯ ವೈದ್ಯರಾದ ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್‌. ಚಂದ್ರಶೇಖರ್‌, ಡಾ| ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಶಶಿಕಿರಣ್‌ ಉಮಾಕಾಂತ್‌ ಅವರನ್ನು ಸಮ್ಮಾನಿಸಲಾಯಿತು. ಜೀವನದಲ್ಲಿ ಸೋತಾಗ ನಿರಾಶರಾಗಬಾರದು. ಗುರಿ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯವಿಲ್ಲ. ಉತ್ತಮ ಓದಿನೊಂದಿಗೆ ಸಾಧಕರಾಗುವ ಮೂಲಕ ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಸಮ್ಮಾನಿತರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

1,500 ವಿದ್ಯಾರ್ಥಿಗಳಿಗೆ ಪುರಸ್ಕಾರ
ಜಿಲ್ಲೆಯ ಎಸೆಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ವಿಭಾಗದ 1,500 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ಮೊತ್ತದ ಪ್ರತಿಭಾ ಪುರಸ್ಕಾರ ವಿತರಿಸುತ್ತಿದ್ದೇವೆ. ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ಎಲ್ಲ ಜಾತಿ, ಸಮುದಾಯದ ಪ್ರತಿಭಾವಂತರಿಗೆ ಪುರಸ್ಕಾರ ನೀಡುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಕಾರ್ಯನಿರ್ವಹಿಸುತ್ತಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಹೇಳಿದರು.

 

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.