Mangaluru ಯೋಜನೆಗಳಿಂದ ಮಹತ್ತರ ಬದಲಾವಣೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ
Team Udayavani, Aug 20, 2023, 11:10 PM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಜಾರಿಗೆ ತಂದಿರುವ ಹಲವು ಕಾರ್ಯಕ್ರಮಗಳಿಂದಾಗಿ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗಿದ್ದು, ಹಿಂದುಳಿದ ಸಮುದಾಯದವರು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎಲ್ಲರೊಂದಿಗೆ ಸರಿಸಮನಾಗಿ ನಿಲ್ಲಲು ಅವಕಾಶವಾಯಿತು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.
ದ.ಕ ಜಿಲ್ಲಾಡಳಿತ, ಜಿ. ಪಂ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿ.ಪಂ. ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲೇ ಅಧುನಿಕ, ಅರ್ಥಿಕ ಶೈಕ್ಷಣಿಕವಾಗಿ ಮುಂದುವರಿದ ರಾಜ್ಯವಾಗಿ ಕರ್ನಾಟಕ ಮೂಡಿಬರಲು ಅವರ ದೂರದೃಷ್ಟಿತ್ವವೇ ಕಾರಣ. ಹಳ್ಳಿ ಹಳ್ಳಿಗಳಲ್ಲಿ ಶಾಲೆ, ಶಿಕ್ಷಣವನ್ನು ಪರಿಣಾಮಕಾರಿಯಾಗಿ ರೂಪಿಸಲು ಹಿಂ. ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳ ನಿರ್ಮಾಣ ಇವೆಲ್ಲ ದೇವರಾಜ ಅರಸು ಅವರ ಚಿಂತನೆಯ ಫಲಗಳಾಗಿವೆ ಎಂದರು.
ಇದೇ ವೇಳೆ ಜಿಲ್ಲಾಧಿಕಾರಿಯವರು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಡಾ| ಅಣ್ಣಯ್ಯ ಕುಲಾಲ್ ಮಾತನಾಡಿ, ಅರಸು ತಮ್ಮ ಆಡಳಿತದ ವೈಖರಿ ಮೂಲಕ ನವ ಕರ್ನಾಟಕದ ನಿರ್ಮಾತೃ ಆಗಿದ್ದಾರೆ. ಅವರಿಂದ ಯೋಜನೆಯಾದ ವಿದ್ಯಾರ್ಥಿನಿಲಯದಲ್ಲಿ ಓದಿದವರು ಇಂದು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಉಳುವವನೇ ಹೊಲದೊಡೆಯ ಎನ್ನುವ ನೀತಿಯಿಂದಾಗಿ ಕರಾವಳಿಯಲ್ಲಿ ಉಳುವವರಿಗೆ ಭೂಮಿ ದೊರೆತಿರುವುದು ಮಾತ್ರವಲ್ಲದೆ, ಭೂಮಿ ಕಳೆದುಕೊಂಡ ಮೇಲ್ವರ್ಗದವರು ಬೇರೆ ಕಡೆ ಉದ್ಯೋಗಕ್ಕೆ ಹೋಗಿ ಅಲ್ಲಿ ತಮ್ಮ ಬದುಕು ಕಟ್ಟಿಕೊಂಡು ಇಂದು ಕರಾವಳಿಯ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ನೀಡುತ್ತಿದ್ದಾರೆ ಎಂದರು.
ಜಿ. ಪಂ. ಸಿಇಒ ಡಾ| ಆನಂದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು.
ಸಮ್ಮಾನ-ಗೌರವಾರ್ಪಣೆ
ಹಿಂದುಳಿದ ವರ್ಗಗಳ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಮೆಡಿಕಲ್ ಎಂಜಿನಿಯರಿಂಗ್ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.