Music Academy ಶಿಷ್ಯವೇತನಕ್ಕೆ ವೀಡಿಯೋ ಮಾಡಿ ಅರ್ಜಿ ಸಲ್ಲಿಸಿ
ಶಿಷ್ಯ ವೇತನಕ್ಕೆ 200 ಮಂದಿ ಆಯ್ಕೆ
Team Udayavani, Jul 26, 2024, 12:22 AM IST
ಬೆಂಗಳೂರು: ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಈ ಬಾರಿ ಶಿಷ್ಯ ವೇತನಕ್ಕೆ ಅಭ್ಯರ್ಥಿಗಳನ್ನು ಭಿನ್ನ ರೀತಿಯಲ್ಲಿ ಆಯ್ಕೆ ಮಾಡಲಿದೆ. ಸಂಗೀತ, ನೃತ್ಯ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆಯಾಗಬಾರದು ಎಂಬ ಉದ್ದೇಶದಲ್ಲಿ ಈ ಬಾರಿ ಅಭ್ಯರ್ಥಿಗಳು ತಾವಿರುವ ಸ್ಥಳದಲ್ಲೇ ವೀಡಿಯೋ ಚಿತ್ರೀಕರಣ ಮಾಡಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಳೆದ 2 ವರ್ಷಗಳಿಂದ ಅನೇಕ ಕಾರಣಗಳಿಂದಾಗಿ ಶಿಷ್ಯವೇತನ ನೀಡಿರಲಿಲ್ಲ. ಈಗ ಎರಡೂ ವರ್ಷದ್ದು ಸೇರಿಸಿ 200 ಮಂದಿಗೆ ತಲಾ 10 ಸಾವಿರ ರೂ. ನೀಡಲಾಗುತ್ತಿದೆ ಎಂದರು. ಈ ಹಿಂದೆ 16-24ರ ವಯೋಮಿತಿಯವರನ್ನು ಸಂದರ್ಶನ ಮಾಡಿ ಶಿಷ್ಯ ವೇತನಕ್ಕೆ ಆಯ್ಕೆ ಮಾಡಲಾಗುತ್ತಿತ್ತು.
ಆದರೆ ದೂರದೂರುಗಳಿಂದ ಬರುವವರಿಗೆ ಬಸ್ ಪ್ರಯಾಣ, ತಂಗುವ ವ್ಯವಸ್ಥೆ ಸೇರಿದಂತೆ ಹಲವು ರೀತಿಯ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಕಾಡೆಮಿ ಈ ನಿರ್ಧಾರಕ್ಕೆ ಬಂದಿದೆ. ಆಯಾ ಕಲಾ ಪ್ರಕಾರಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿ ಕೊಟ್ಟ ಪೆನ್‌ಡ್ರೈವ್ ಅನ್ನು ತೀರ್ಪುಗಾರರು ಪರಿಶೀಲಿಸಿ ಶಿಷ್ಯವೇತನಕ್ಕೆ ಆಯ್ಕೆ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.