ಮಕ್ಕಳಿಂದಲೇ ಮಲಗುಂಡಿ ಸ್ವಚ್ಛತೆ- ಮಾಲೂರು ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೃತ್ಯ
Team Udayavani, Dec 17, 2023, 11:50 PM IST
ಕೋಲಾರ: ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿಗೆ ಮಕ್ಕಳನ್ನು ಇಳಿಸಿ ಸ್ವಚ್ಛತಾ ಕಾರ್ಯ ಮಾಡಿಸಿರುವ ಪ್ರಕರಣ ಸಂಬಂಧ ಇಲಾಖಾ ತನಿಖೆ ಕಾದಿರಿಸಿ ಪ್ರಾಂಶುಪಾಲೆ ಪಿ. ಭಾರತಮ್ಮ, ಪ್ರಭಾರ ನಿಲಯಪಾಲಕ ಮಂಜುನಾಥ್, ಚಿತ್ರಕಲಾ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.
ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲಗುಂಡಿ ಸ್ವತ್ಛತೆ ಮಾಡಿಸಿರುವ ಕುರಿತ ಫೋಟೋ, ವೀಡಿಯೋಗಳು ಹರಿದಾಡಿದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅವರು ನೀಡಿದ್ದ ವರದಿ ಹಿನ್ನೆಲೆಯಲ್ಲಿ ಕ್ರೈಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ನವೀನ್ ಕುಮಾರ್ ರಾಜು ಅಮಾನತು ಮಾಡಿದ್ದಾರೆ.
ಸಮಗ್ರ ತನಿಖೆಗೆ ಆದೇಶ
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿ, ವಿಕೃತಿ ಮೆರೆದ ಪ್ರಾಂಶುಪಾಲೆ, ಶಿಕ್ಷಕ ಹಾಗೂ ವಾರ್ಡನ್ ಅವರನ್ನು ಅಮಾನತು ಮಾಡಲಾಗಿದೆ. ಸಮಗ್ರ ತನಿಖೆಗೆ ಆದೇಶ ಮಾಡಲಾಗಿದೆ. ಘಟನೆಯಲ್ಲಿ ಭಾಗಿಯಾದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು.
ಶಾಲೆಗೆ ನ್ಯಾಯಾಧೀಶರ ಭೇಟಿ
ವೀಡಿಯೋ ವೈರಲ್ ಆದ ಹಿನ್ನೆಲೆ ಯಲ್ಲಿ, ಶಾಲೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನೀಲ್ ಎಸ್. ಹೊಸಮನಿ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ಇಬ್ಬರ ಬಂಧನ, ಇಬ್ಬರು ಪರಾರಿ
ಒಟ್ಟು ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಾಂಶುಪಾಲೆ ಭಾರತಮ್ಮ ಹಾಗೂ ಸಹ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿಸಲಾಗಿದೆ. ವಾರ್ಡನ್ ಮಂಜುನಾಥ್, ಅತಿಥಿ ಶಿಕ್ಷಕ ಅಭಿಷೇಕ್ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.