ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
Team Udayavani, Mar 27, 2023, 8:35 AM IST
ಕೊಚ್ಚಿ: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ (ಮಾ.26 ರಂದು) ನಿಧನರಾಗಿದ್ದಾರೆ.
ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್ ಮೊದಲ ವಾರದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೆಂಟಿಲೇಟರ್ ನಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
1972 ರಲ್ಲಿ ʼನೃತ್ಯಶಾಲಾʼ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು 4 ದಶಕಗಳ ಕಾಲ ನೂರಾರು ಸಿನಿಮಾದಲ್ಲಿ ಹಾಸ್ಯ ಪಾತ್ರದಲ್ಲಿ ನಟಿಸಿ ಮಿಂಚಿದ್ದಾರೆ. ಇತ್ತೀಚೆಗೆ ಪೃಥ್ವಿರಾಜ್ ಸುಕುಮಾರನ್ ಅವರ ʼಕಡುವʼ, ಇನ್ನು ರಿಲೀಸ್ ಆಗಲಿರುವ ಫಾಹದ್ ಫಾಸಿಲ್ ಅವರ ʼಪಾಚುವುಂ ಅದ್ಭುತವಿಳಕ್ಕುಂʼ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದಾರೆ.
ನಟರಲ್ಲದೆ, ಇನೋಸೆಂಟ್ ಚಾಲಕುಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರೂ ಆಗಿದ್ದರು. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್, ಶಶಿ ತರೂರ್, ಖುಷ್ಬು ಸುಂದರ್ ಸೇರಿದಂತೆ ಅನೇಕ ಕಲಾವಿದರು ನಟನ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.