![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, May 18, 2024, 1:13 AM IST
ಮಲ್ಪೆ: ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಹಾಗೂ ಬೀಚ್‌ನಲ್ಲಿ ನಡೆಸುವ ಜಲಕ್ರೀಡಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಮೇ 16ರಿಂದ ಸೆ. 15ರ ವರೆಗೆ ಈ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ.
ಮಳೆಗಾಲದ ಮತ್ತು ಸಮುದ್ರದ ಅಲೆಗಳ ಒತ್ತಡದ ಹಿನ್ನಲೆಯಲ್ಲಿ ಮೇ 16ರಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಸಮುದ್ರದಲ್ಲಿ ನಡೆಸುವ ಯಾವುದೇ ಪ್ರವಾಸಿ ಬೋಟ್‌ಯಾನ, ಜಲಕ್ರೀಡೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
ಸೀವಾಕ್ ವೇ, ಉದ್ಯಾನವನ ಮತ್ತು ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರು ಸೇರಿದಂತೆ ಜನರು ವಿಹರಿಸಬಹುದಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ರಾಯಪ್ಪ ಅವರು ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.