ಬಾವಿಯಲ್ಲಿ ಮೀನು ಹಿಡಿದುಕೊಡುವ ಆಸೆ ತೋರಿಸಿ ಬಾಲಕಿಯ ಹತ್ಯೆ!
Team Udayavani, Dec 5, 2020, 11:31 AM IST
ಮಂಡ್ಯ: ಮದ್ದೂರು ತಾಲೂಕಿನ ಹುರುಗಲವಾಡಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಬಾಲಕಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ 17 ವರ್ಷದ ಬಾಲಕನನ್ನು ಬಂಧಿಸಿ ಮೈಸೂರಿನ ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ರಿಮೆಂಡ್ ರೂಂಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಹೇಳಿದರು.
ಬಳ್ಳಾರಿಯಿಂದ ಕಬ್ಬು ಕಟಾವು ಮಾಡಲು ಬಂದಿದ್ದ ಕಾರ್ಮಿಕ ಕುಟುಂಬಸ್ಥರೊಂದಿಗೆ ಬಾಲಕಿ ಬಂದಿದ್ದಳು. ಆರೋಪಿ ಮನೆ
ಪಕ್ಕದಲ್ಲಿಯೇ ಇವರು ಗುಡಿಸಲು ಹಾಕಿಕೊಂಡು ವಾಸವಾಗಿದ್ದರು. ಇದರಿಂದ ಆರೋಪಿಇವರಿಗೆತುಂಬಾ ಪರಿಚಿತನಾಗಿದ್ದ.
ಬಾಲಕಿಯ ಜತೆಗೂ ಸಲುಗೆಯಿಂದ ಇದ್ದ.
ಇದರಿಂದ ಆ ಕುಟುಂಬಸ್ಥರು ಈತನನ್ನು ಒಳ್ಳೆಯವನೆಂದು ನಂಬಿದ್ದರು. ಡಿ.2ರಂದು ಕಬ್ಬು ಕಟಾವು ಮಾಡುವಾಗ ಈತನು ಆ ಬಾಲಕಿಗೆ ಪಕ್ಕದ ಬಾವಿಯಲ್ಲಿ ಮೀನು ಹಿಡಿದುಕೊಡುವ ಆಸೆ ತೋರಿಸಿ, ಪುಸಲಾಯಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ.
ಅದನ್ನು ಕುಟುಂಬಸ್ಥರು ನೋಡಿದ್ದಾರೆ. ಪರಿಚಯಸ್ಥ ಎಂದು ಕಬ್ಬು ಕಟಾವಿನಲ್ಲಿ ನಿರತರಾಗಿದ್ದಾರೆ. ಆತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಕ್ಷಣ ಬಾಲಕಿ ಕಿರುಚಿಕೊಂಡಾಗ ಮಚ್ಚಿನಿಂದ ಆಕೆಯ ಕತ್ತು ಕುಯ್ದು ಕೊಲೆ ಮಾಡಿದ್ದಾನೆ. ಬಾಲಕಿ ಕಿರುಚಿಕೊಂಡ ಶಬ್ಧ ಕೇಳಿ ಆಕೆಯ ಪೋಷಕರು ಸ್ಥಳಕ್ಕೆ ಓಡಿ ಬಂದಾಗ ಕೊಲೆಯಾಗಿರುವುದುಕಂಡು ಬಂದಿದೆ.
ಇದನ್ನೂ ಓದಿ:ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿಬಿದ್ದ ಕಾರು: ನಾಲ್ವರಿಗೆ ಗಾಯ
ಕಥೆ ಕಟ್ಟಿದ್ದ ಆರೋಪಿ: ಪೋಷಕರು ಬರುತ್ತಿದ್ದಂತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನ ಗಾಬರಿ ಕಂಡ ಪೋಷಕರು ವಿಚಾರಿಸಿದಾಗ ಯಾರೋ ಇಬ್ಬರು ಬಂದುಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದುಕಥೆ ಕಟ್ಟಿದ್ದ. ನಂತರ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ನನ್ನೊಂದಿಗೆ ಮತ್ತಿಬ್ಬರು ಇದ್ದರು ಎಂದು ಹೆಸರು ಹೇಳಿದ್ದ. ಅವರನ್ನು ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಅವರದ್ದು ಏನೂ ಇರಲಿಲ್ಲ ಎಂದು ತಿಳಿದು ಬಂದಿದೆ ಎಂದು ಹೇಳಿದರು.
ಗ್ರಾಮದಿಂದ ದೂರ: ಆರೋಪಿ ಕುಟುಂಬಸ್ಥರಿಗೆ ಗ್ರಾಮದಲ್ಲಿ ಒಳ್ಳೆಯ ಹೆಸರು ಇರಲಿಲ್ಲ. ಆದ್ದರಿಂದ ಗ್ರಾಮಸ್ಥರು ಆರೋಪಿ
ಕುಟುಂಬಸ್ಥರನ್ನು ಗ್ರಾಮದ ಹೊರಗಿಟ್ಟಿದ್ದರು. ಆರೋಪಿ ಪ್ರಸ್ತುತ ವರ್ಷ ಎಸ್ಸೆಸ್ಸೆಲ್ಸಿ ಪಾಸಾಗಿದ್ದನು. ಕಾಲೇಜುಗಳು ಆರಂಭವಾಗದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದ. ಜತೆಗೆ ಸಣ್ಣಪುಟ್ಟ ಕಳ್ಳತನ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಆದರೆ, ನಮ್ಮ ಇಲಾಖೆಯಲ್ಲಿ ಆತನ ವಿರುದ್ಧ ಯಾವುದೇ ದೂರು ಇರಲಿಲ್ಲ. ಇದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.