ಮಂಡ್ಯ: ಮತದಾರರ ಸೆಳೆಯಲು ಭಾರೀ ಕಸರತು! ನಗದು, ಚಿನ್ನ, ಬೆಳ್ಳಿಯ ವಸ್ತುಗಳ ಉಡುಗೊರೆ?


Team Udayavani, Oct 29, 2020, 11:42 AM IST

ಮಂಡ್ಯ: ಮತದಾರರ ಸೆಳೆಯಲು ಭಾರೀ ಕಸರತು! ನಗದು, ಚಿನ್ನ, ಬೆಳ್ಳಿಯ ವಸ್ತುಗಳ ಉಡುಗೊರೆ?

ಮಂಡ್ಯ: ನ.5ರಂದು ನಡೆಯುವ ಮಂಡ್ಯ ಜಿಲ್ಲಾ ಸಹಕಾರ ಸಂಘ ಚುನಾವಣೆ ನಡೆಯಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ಮತಬೇಟೆ ಶುರು ಮಾಡಿದ್ದಾರೆ. ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಎಂಡಿಸಿಸಿ ಬ್ಯಾಂಕ್‌ನ 12
ನಿರ್ದೇಶಕ ಸ್ಥಾನಗಳಿಗೆ 47 ಮಂದಿ ಅಭ್ಯರ್ಥಿಗಳು 59 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಪೈಪೋಟಿ ಮೇಲೆ ಮತದಾರರ ಒಲೈಕೆಗೆ ಮುಂದಾಗಿದ್ದಾರೆ.

ಮತದಾರರಿಗೆ ಉಡುಗೊರೆ?: ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಅಭ್ಯರ್ಥಿಗಳು ಗೆಲುವಿಗಾಗಿ ಲಕ್ಷಾಂತರ ರೂ. ಖರ್ಚು ಮಾಡಲಿದ್ದು, ಮತದಾರ ಸದಸ್ಯರಿಗೆ ಆಮಿಷ, ವಿವಿಧ ರೀತಿಯ ಗಿಫ್ಟ್ಗಳನ್ನು ನೀಡಲು ಮುಂದಾಗಿದ್ದಾರೆ. ಈಗಾಗಲೇ ಕೆಲವು ಅಭ್ಯರ್ಥಿಗಳು ಚಿನ್ನದ ಉಂಗುರ, ಬೆಳ್ಳಿ ಪದಾರ್ಥಗಳು ಸೇರಿದಂತೆ ಲಕ್ಷಾಂತರ ರೂ. ನಗದು ನೀಡಿ ಮತದಾರರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕ ಸ್ಥಾನ ಗೆಲ್ಲಲೇಬೇಕು ಹಠಕ್ಕೆ ಬಿದ್ದಿರುವ ಅಭ್ಯರ್ಥಿಗಳು
ಕೋಟ್ಯಂತರ ರೂ. ಹಣದ ಹೊಳೆಯೇ ಹರಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಮತದಾರರಿಗೆ ಬಾಡೂಟ: ಮತದಾರರಿಗೆ ಬಾಡೂಟ, ಮದ್ಯ ಸೇವನೆಯ ಪಾರ್ಟಿಗಳನ್ನು ಏರ್ಪಡಿಸಲಾಗುತ್ತಿದೆ. ಹೆದ್ದಾರಿ ಡಾಬಾ, ತೋಟದ ಮನೆಗಳಲ್ಲಿ ಭರ್ಜರಿ ಬಾಡೂಟ ಹಾಗೂ ಮದ್ಯ ಸೇವನೆಯ ಪಾರ್ಟಿಗಳನ್ನು ನೀಡಿ ಮತದಾರರನ್ನು ಸೆಳೆಯುತ್ತಿದ್ದಾರೆ.

ಇದನ್ನೂ ಓದಿ :ಚೆನ್ನೈ ವಿಮಾನ ನಿಲ್ದಾಣದಲ್ಲಿ 23ಕೆಜಿ ಶಾರ್ಕ್ ರೆಕ್ಕೆ ವಶ: ಇದರಿಂದ ಏನು ತಯಾರಿಸುತ್ತಾರೆ?

ಕೈ ಬೆಂಬಲಿತ ಅಭ್ಯರ್ಥಿಗಳ ನಡುವೆಯೇ ಪೈಪೋಟಿ: ಡಿಸಿಸಿ ಬ್ಯಾಂಕ್‌ ಚುನಾವಣೆ ಪಕ್ಷದ ಚಿಹ್ನೆಯಡಿ ನಡೆಯದಿದ್ದರೂ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಮಂಡ್ಯ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಇಬ್ಬರು ಕಾಂಗ್ರೆಸ್‌ ಮುಖಂಡರು ನಾಮಪತ್ರ ಸಲ್ಲಿಸಿದ್ದಾರೆ. ಹಾಲಿ ಅಧ್ಯಕ್ಷ ಸಾತನೂರು ಸತೀಶ್‌ ಹಾಗೂ
ಮಾಜಿ ಅಧ್ಯಕ್ಷ ಅಮರಾವತಿ ಅಶ್ವಥ್‌ ಅಖಾಡಕ್ಕಿಳಿದಿದ್ದು, ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟಕ್ಕೆ ಧುಮುಕಿದ್ದಾರೆ. ಹಾಲಿ ಅಧ್ಯಕ್ಷ ಸಾತನೂರು ಸತೀಶ್‌, ಸಹಕಾರ ಸಂಘದ ಏಳಿಗೆಗಾಗಿ ದುಡಿದಿದ್ದೇನೆ. ಈ ಹಿನ್ನೆಲೆಯಲ್ಲಿ ಮತದಾರರು ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ. ಇತ್ತ ಅಮರಾವತಿ ಅಶ್ವಥ್‌ ತಮ್ಮ ಬೆಂಬಲಿಗರ ಮೂಲಕ ನಾಮಪತ್ರ ಸಲ್ಲಿಸಿ ಗೆಲ್ಲುವ
ವಿಶ್ವಾಸದಲ್ಲಿದ್ದಾರೆ. ಇಬ್ಬರೂ ತಮ್ಮ ಪ್ರತಿಷ್ಠೆ ಪಣಕ್ಕಿಟ್ಟು ಸ್ಪರ್ಧೆಗಿಳಿದಿದ್ದಾರೆ.

621 ಮಂದಿ ಸದಸ್ಯರಿಗೆ ಮತದಾನದ ಹಕ್ಕು:
ಜಿಲ್ಲೆಯಲ್ಲಿ ಎಂಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ 621 ಮಂದಿ ಸದಸ್ಯರು ಮತದಾನ ಹಕ್ಕು ಪಡೆದಿದ್ದಾರೆ. ಮಂಡ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 44, ಮಳವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 31, ಮದ್ದೂರು ಸಂಘಗಳ ಕ್ಷೇತ್ರದಿಂದ 43, ಪಾಂಡವಪುರ ಸಂಘಗಳ ಕ್ಷೇತ್ರದಿಂದ 24, ಶ್ರೀರಂಗಪಟ್ಟಣ ಸಹಕಾರ ಸಂಘಗಳ
ಕ್ಷೇತ್ರದಿಂದ 20, ಕೆ.ಆರ್‌.ಪೇಟೆ ಸಂಘಗಳ ಕ್ಷೇತ್ರದಿಂದ 23, ನಾಗಮಂಗಲ ಸಂಘಗಳ ಕ್ಷೇತ್ರದಿಂದ 16, ವ್ಯವಸಾ ಯೋತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 7, ಮಂಡ್ಯ ಉಪವಿಭಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ 202, ಪಾಂಡವಪುರ ಉಪವಿಭಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ 71, ಕೈಗಾರಿಕಾ ಸಹಕಾರ ಸಂಘಗಳು, ಕಾರ್ಮಿಕ ಸಹಕಾರ ಸಂಘಗಳು ಹಾಗೂ ಇನ್ನಿತರೆ ಸಹಕಾರ ಸಂಘಗಳ ಕ್ಷೇತ್ರದಿಂದ 88 ಹಾಗೂ ಬಳಕೆದಾರರ ಸಂಸ್ಕರಣ
ಸಹಕಾರ ಸಂಘಗಳು, ನಗರ ಸಹಕಾರಿ ಬ್ಯಾಂಕ್‌, ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 52 ಸದಸ್ಯರು ಮತಹಕ್ಕು ಚಲಾಯಿಸಲಿದ್ದಾರೆ.

ಇದನ್ನೂ ಓದಿ:ಲವ್‌ಜಿಹಾದ್‌ ವಿರುದ್ಧ ಹೋರಾಟ ಅಗತ್ಯ : ಲಕ್ಷ್ಮೀನರಸಿಂಹ ಶಾಸ್ತ್ರಿ

47 ಅಭ್ಯರ್ಥಿಗಳಿಂದ 59 ನಾಮಪತ್ರ ಸಲ್ಲಿಕೆ:
ಬುಧವಾರ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದರಿಂದ ವಿವಿಧ ಸಹಕಾರ ಕ್ಷೇತ್ರಗಳಿಂದ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು. ಅ.20ರಿಂದ 28ರವರೆಗೆ 47 ಅಭ್ಯರ್ಥಿಗಳು ಒಟ್ಟು 59 ನಾಮಪತ್ರ ಸಲ್ಲಿಸಿದ್ದಾರೆ. ವಿವಿಧ ಸಹಕಾರ ಕ್ಷೇತ್ರಗಳಿಂದ
ಮುಖಂಡರು ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಳೆ ನಾಮಪತ್ರ ವಾಪಸ್‌ ಪಡೆಯಲು ಕೊನೆ ದಿನವಾಗಿದೆ.

ಕೋವಿಡ್‌ ನಿಯಮ ಉಲ್ಲಂಘನೆ
ನಾಮಪತ್ರ ಸಲ್ಲಿಕೆ ವೇಳೆ ಕೇವಲ ಐದು ಮಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಕೋವಿಡ್‌-19 ಹಾವಳಿಯ ಹಿನ್ನೆಲೆಯಲ್ಲೂ ಯಾವುದೇ ಮುಂಜಾಗ್ರತ ಕ್ರಮ ಅನುಸರಿಸದೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಗುಂಪು-ಗುಂಪಾಗಿ ಬ್ಯಾಂಕ್‌ ಪ್ರವೇಶಿಸಲು ಮುಕ್ತ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ ಆವರಣ ರಾಜಕೀಯ ಪಕ್ಷಗಳ ಕಾರ್ಯಕರ್ತರಿಂದ ತುಂಬಿತ್ತು. ಇದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗಿತ್ತು. ಬ್ಯಾಂಕ್‌ ಆವರಣದೊಳಗೆ ಪ್ರವೇಶಕ್ಕೆ ಪತ್ರಕರ್ತರು ಹಾಗೂ ಬ್ಯಾಂಕ್‌ ಸಿಬ್ಬಂದಿಗಳು ಪರದಾಡಬೇಕಾಯಿತು.

– ಎಂ.ಶಿವರಾಜು

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.