Mangaladevi: ಚರ್ಚೆ ಹುಟ್ಟುಹಾಕಿದ ಸಂತೆ ವ್ಯಾಪಾರ


Team Udayavani, Oct 13, 2023, 1:01 AM IST

mangaladevi

ಮಂಗಳೂರು: ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಮಹೋತ್ಸವದಲ್ಲಿ ಸಂತೆ ವ್ಯಾಪಾರ ವಿಚಾರ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ಒಬ್ಬ ಬಿಡ್ಡುದಾರನಿಗೆ ವ್ಯಾಪಾರಕ್ಕೆ ಅವಕಾಶ ನೀಡುವ ಪದ್ಧತಿಯನ್ನು ಈ ಬಾರಿ ಕೈಬಿಟ್ಟು ಏಲಂ ಮೂಲಕ ಜಾಗವನ್ನು ಹರಾಜು ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ನವರಾತ್ರಿ ಮತ್ತು ವರ್ಷಾವಧಿ ಜಾತ್ರೆ ಸಂದರ್ಭ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಅದರಂತೆ ದೇಗುಲದ ಆಡಳಿತ ಮಂಡಳಿ ಹರಾಜು ಪ್ರಕ್ರಿಯೆ ನಡೆಸಿದೆ. ಸಂತೆ ಸ್ಥಳದಲ್ಲಿ ಜೂಜು, ಜುಗಾರಿ, ಲಕ್ಕಿಡಿಪ್‌, ಮಾಂಸದ ಹೊಟೇಲ್‌ ಮೊದಲಾದವುಗಳನ್ನು ನಡೆಸುವಂತಿಲ್ಲ. ವ್ಯಾಪಾರ ಸ್ಥಳದಲ್ಲಿ ಬಿದ್ದಿರುವ ಕಸವನ್ನೂ ವ್ಯಾಪಾರಿಗಳೇ ಹೆಕ್ಕಬೇಕು, ಧ್ವನಿ ವರ್ಧಕ ಬಳಸುವಂತಿಲ್ಲ ಎನ್ನುವ ಅಂಶಗಳೂ ಜಿಲ್ಲಾಧಿಕಾರಿಯವರ ಆದೇಶದಲ್ಲಿದೆ.

ದೇವಸ್ಥಾನದ ಆಡಳಿತ ಮಂಡಳಿ ಪ್ರಕಾರ, ದೇವಸ್ಥಾನದಿಂದ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿರ್ಬಂಧ ಹೇರಿಲ್ಲ. ಎಲ್ಲ 94 ಅಂಗಡಿಗಳಿಗೆ ಸಂಬಂಧಿಸಿದಂತೆ ದೇಗುಲ ಅಂಗಣದಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಸಾಕಷ್ಟು ಮಂದಿ ಭಾಗವಹಿಸಿದ್ದರು. ಆದರೆ ಯಾವುದೇ ಅನ್ಯಧರ್ಮೀಯರು ಭಾಗವಹಿಸಿಲ್ಲ. ಜಿಲ್ಲಾಧಿಕಾರಿಗಳ ಮಾರ್ಗಸೂಚಿ ಪ್ರಕಾರವೇ ಅಂಗಡಿಗಳನ್ನು ಹಂಚಿಕೆ ಮಾಡಲಾಗಿದೆ.

ಆದರೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ದ.ಕ. ಮತ್ತು ಉಡುಪಿ ಜಾತ್ರಾ ವ್ಯಾಪಾರಸ್ಥರ ಸಮನ್ವಯ ಸಮಿತಿ ಗೌರವಾಧ್ಯಕ್ಷ ಸುನೀಲ್‌ ಕುಮಾರ್‌ ಬಜಾಲ್‌ ಅವರು, ಏಲಂ ವೇಳೆ ಮುಸ್ಲಿಮರಿಗೆ ಅವಕಾಶ ನೀಡಿಲ್ಲ. ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಬಿತ್ತಲಾದ ಈ ಕೋಮು ವಿಷಬೀಜ ಕಾಂಗ್ರೆಸ್‌ ಅವಧಿಯಲ್ಲೂ ಮುಂದುವರಿದಿದೆ. ಮುಸ್ಲಿಂ ವ್ಯಾಪಾರಿಗಳು ದೇವಳದ ಒಳಗೆ ವ್ಯಾಪಾರಕ್ಕೆ ಅವಕಾಶ ಕೇಳುತ್ತಿಲ್ಲ. ಎದುರಿನ ಪಾಲಿಕೆಗೆ ಸಂಬಂಧಿಸಿದ ಸಾರ್ವಜನಿಕರ ಜಾಗದಲ್ಲಿ ಕೇಳುತ್ತಿದ್ದಾರೆ. ವ್ಯಾಪಾರಕ್ಕೆ ನಿರ್ಬಂಧಿಸಿದರೆ ಹೋರಾಟ ಮಾಡುತ್ತೇವೆ. ಏನಾದರೂ ಸಮಸ್ಯೆಯಾದರೆ ಅದಕ್ಕೆ ಪಾಲಿಕೆ ಮತ್ತು ಜಿಲ್ಲಾಡಳಿತ ಹೊಣೆ ಎಂದು ತಿಳಿಸಿದ್ದಾರೆ.

ಹರಾಜು ಪ್ರಕ್ರಿಯೆಯನ್ನು ವಿಹಿಂಪ ಸ್ವಾಗತಿಸಿದ್ದು, ಜಿಲ್ಲೆಯ ಎಲ್ಲ ದೇವಸ್ಥಾನಗಳ ಆಡಳಿತ ಮಂಡಳಿಗಳೂ ಇದೇ ಮಾದರಿ ಕ್ರಮವನ್ನು ಅನುಸರಿಸಬೇಕು ಎಂದು ಹಿಂದೂ ಜಾತ್ರಾ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ ನೀಡಬೇಕು ಎಂದು ಆಗ್ರಹಿಸಿದೆ.

ಇಂದು ಪ್ರತಿಭಟನೆ
ಮುಸ್ಲಿಂ ವ್ಯಾಪಾರಸ್ಥರನ್ನು ಜಾತ್ರೆ ವ್ಯಾಪಾರದಿಂದ ದೂರ ಇಟ್ಟಿರುವುದನ್ನು ಖಂಡಿಸಿ, ದ.ಕ ಮತ್ತು ಉಡುಪಿ ಜಾತ್ರಾ ವ್ಯಾಪಾರಸ್ಥರ ಸಮನ್ವಯ ಸಮಿತಿ ವತಿಯಿಂದ ಅ. 13ರಂದು ಬೆಳಗ್ಗೆ 10ಕ್ಕೆ ಮಿನಿವಿಧಾನ ಸೌಧದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.