ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ: ಹೆಚ್ಚುವರಿ ಪ್ಲಾಟ್‌ಫಾರಂ ಸೆಪ್ಟಂಬರ್‌ಗೆ ಸಿದ್ಧ
Team Udayavani, Dec 22, 2021, 7:25 AM IST
ಮಂಗಳೂರು 4 ಮತ್ತು 5ನೇ ಪ್ಲಾಟ್‌ಫಾರಂ ಸೆಪ್ಟಂಬರ್ ವೇಳೆಗೆ ಸಿದ್ಧಗೊಂಡು ರೈಲು ಸಂಚಾರಕ್ಕೆ ಲಭ್ಯವಾಗಲಿದೆ ಎಂದು ದಕ್ಷಿಣ ರೈಲ್ವೇ ಮಹಾಪ್ರಬಂಧಕ ಜಾನ್ ಥಾಮಸ್ ತಿಳಿಸಿದ್ದಾರೆ.
ಮಂಗಳೂರಿಗೆ ಮಂಗಳವಾರ ಭೇಟಿ ನೀಡಿ ರೈಲ್ವೇ ವ್ಯವಸ್ಥೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರು ಸೆಂಟ್ರಲ್‌ನಲ್ಲಿ ಪಿಟ್‌ಲೆçನ್ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಹೊಸ ಪ್ಲಾಟ್‌ಫಾರಂಗಳ ಕಾಮಗಾರಿಯನ್ನು ಕೈಗೆತ್ತಿಕೊಂಡು ಆರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಇದರ ನಿರ್ಮಾಣಕ್ಕೆ ಅನುದಾನ ಈಗಾಗಲೇ ಬಿಡುಗಡೆಯಾಗಿದ್ದು ಗುತ್ತಿಗೆ ಪ್ರಕ್ರಿಯೆ ಕೂಡ ನಡೆದಿದೆ ಎಂದರು.
ಹೆಚ್ಚುವರಿ ಪ್ಲಾಟ್‌ಫಾರಂಗಳ ನಿರ್ಮಾಣ ದಿಂದ ಜಿಲ್ಲೆಯ ಜನರ ಬೇಡಿಕೆಗೆ ಅನು ಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈಲು ಗಳನ್ನು ಓಡಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ರೈಲ್ವೇ ವಿಭಾಗೀಯ ಪ್ರಬಂಧಕ ತ್ರಿಲೋಕ್ ಕೊಠಾರಿ ಉಪಸ್ಥಿತರಿದ್ದರು.
ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯಿಂದ ಮನವಿ
ಮಂಗಳೂರು ಭಾಗದ ವಿವಿಧ ಬೇಡಿಕೆ ಗಳ ಬಗ್ಗೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು, ಜಿ.ಎಂ. ಜಾನ್ ಥಾಮಸ್ ಅವರಿಗೆ ಮನವಿ ಸಲ್ಲಿಸಿದರು.
ಅತ್ತಾವರ ಕಡೆಯಿಂದ ಎರಡನೇ ಪ್ರವೇಶ ದ್ವಾರ ಅಭಿವೃದ್ಧಿ, ಮಂಗಳೂರು ಜಂಕ್ಷನ್ (ಗೊಮ್ಮಟೇಶ್ವರ ಎಕ್ಸ್‌ಪ್ರೆಸ್) ಹಗಲು ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರು ಸೆಂಟ್ರಲ್‌ವರೆಗೆ ಪರಿಷ್ಕೃತ ಸಮಯದೊಂದಿಗೆ ಓಡಿಸಬೇಕು, ರೈಲು ಸಂಖ್ಯೆ 06484/85 ಮತ್ತು 06486/06487 ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಯವರೆಗೆ ವಿಸ್ತರಿಸಬೇಕು, ರೈಲು ಸಂಖ್ಯೆ 12133/34 ಮುಂಬಯಿ ಸಿಎಸ್‌ಟಿ ಎಕ್ಸ್‌ಪ್ರೆಸ್ ಅನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಬೇಕು, ಮತ್ಸ್ಯಗಂಧ ಎಕ್ಸ್‌ಪ್ರೆಸ್‌ಗೆ ಮಂಗಳೂರು ಜಂಕ್ಷನ್‌ನಲ್ಲಿ ನಿಲುಗಡೆ ನೀಡಬೇಕು ಮುಂತಾದ ಬೇಡಿಕೆಗಳನ್ನು ಸಲ್ಲಿಸಲಾಯಿತು. ಬೇಡಿಕೆಗಳನ್ನು ಪರಿಶೀಲಿ ಸುವುದಾಗಿ ಮಹಾಪ್ರಬಂಧಕರು ಭರವಸೆ ನೀಡಿದರು.
ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾದ ಹನುಮಂತ ಕಾಮತ್, ಅಹ್ಮದ್ ಬಾವ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ಅನಿಲ್ ಹೆಗ್ಡೆ, ಜಿ.ಕೆ. ಭಟ್ ಉಪಸ್ಥಿತರಿದ್ದರು.
ಇದನ್ನೂ ಓದಿ:ಇನ್ನು ಮೊಬೈಲ್ ಆ್ಯಪ್‌ನಲ್ಲೇ ಸಂಸತ್ ಕಲಾಪ ವೀಕ್ಷಿಸಿ!
ಮಹಾಪ್ರಬಂಧಕರಿಂದ ಪರಿಶೀಲನೆ
ಜಾನ್ ಥಾಮಸ್ ಅವರು ಸೆಂಟ್ರಲ್‌ನಲ್ಲಿ 2ನೇ ಪ್ರವೇಶದ್ವಾರ, ಹೊಸ ಪಿಆರ್‌ಎಸ್ ಕೌಂಟರ್, ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಕ್ಯಾಬಿನ್ ವ್ಯವಸ್ಥೆಗಳನ್ನು ಪರಿಶೀಲಿಸಿದರು. ರಿಕ್ರಿಯೇಶನ್ ಸೌಲಭ್ಯವನ್ನು ಉದ್ಘಾಟಿಸಿದರು. ಕುಲಶೇಖರದ ಪ್ರಸ್ತುತ ಇರುವ ಹಾಗೂ ಹೊಸದಾಗಿ ನಿರ್ಮಾಣವಾಗುತ್ತಿರುವ ಸುರಂಗ ಹಾಗೂ ಪಡೀಲ್‌ನಲ್ಲಿ ಭೂಕುಸಿತ ಪ್ರದೇಶಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ನೇತ್ರಾವತಿ ರೈಲ್ವೇ ಸೇತುವೆಯಿಂದ ಕಾಸರಗೋಡು ರೈಲುಮಾರ್ಗದಲ್ಲಿ ಸ್ಪೀಡ್ ಟ್ರಯಲ್ ನಡೆಸಿದ ಅವರು ಈ ಮಾರ್ಗದಲ್ಲಿನ ಬೃಹತ್ ಹಾಗೂ ಕಿರು ಸೇತುವೆಗಳನ್ನು ಹಾಗೂ ಲೆವೆಲ್ ಕ್ರಾಸಿಂಗ್‌ಗಳನ್ನು ಪರಿಶೀಲಿಸಿದರು. ರೈಲ್ವೇ ಆರೋಗ್ಯ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ವೈದ್ಯರು, ಸಿಬಂದಿ ಜತೆ ಸಂವಾದ ನಡೆಸಿ ಕೊರೊನಾ ಸಂದರ್ಭ ಅವರು ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.