ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರವಿವಾರ ಸಂಜೆಯಿಂದ ಸೋಮವಾರ ಮುಂಜಾನೆವರೆಗೆ ಸಾಗಿದ ಮೆರವಣಿಗೆ

Team Udayavani, Oct 14, 2024, 6:20 AM IST

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.

ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾ ಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ತುಂಬಿಕೊಂಡರು.

ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು.

ಶ್ರೀ ಕ್ಷೇತ್ರ ಕುದ್ರೋಳಿಯಿಂದ ರವಿವಾರ ಸಂಜೆ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗ ವಾಗಿ ಲೇಡಿಹಿಲ್‌, ನಾರಾಯಣ ಗುರು ವೃತ್ತ, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ನಗರದ 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿಬಂತು.

ಸೇವಾಕರ್ತರಿಗೆ ಸಮ್ಮಾನ
ದಸರಾ ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರಾದ ಪರವಾಗಿ ಜನಾರ್ದನ ಪೂಜಾರಿ ಗೌರವಿಸಿದರು.

ಶಾಸಕ ಡಿ.ವೇದವ್ಯಾಸ ಕಾಮತ್‌, ವಿ.ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌.ಸಾಯಿರಾಂ, ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್‌, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್‌ ಆರ್‌., ಪ್ರಮುಖರಾದ ಮಾಲತಿ ಜೆ.ಪೂಜಾರಿ, ಸಂತೋಷ್‌ ಕುಮಾರ್‌ ಜೆ., ರವಿಶಂಕರ ಮಿಜಾರ್‌, ಎಂ.ಶೇಖರ್‌ ಪೂಜಾರಿ, ಜಗದೀಪ್‌ ಡಿ.ಸುವರ್ಣ, ಹರಿಕೃಷ್ಣ ಬಂಟ್ವಾಳ್‌, ನವೀನ್‌ಚಂದ್ರ ಡಿ.ಸುವರ್ಣ, ಎ.ಸಿ.ಭಂಡಾರಿ, ಎಂ.ಶಶಿಧರ ಹೆಗ್ಡೆ ಸಹಿತ ಹಲವು ಗಣ್ಯರು, ಕ್ಷೇತ್ರಾಡಳಿತದ ಪ್ರಮುಖರು ಉಪಸ್ಥಿತರಿದ್ದರು.

ರಂಗು ತುಂಬಿದ ದಸರಾ ಶೋಭಾಯಾತ್ರೆ
ಅಲಂಕೃತ ಕೊಡೆಗಳು, ಜಾನಪದ ಕಲಾ ತಂಡಗಳು, ಭಜನ ತಂಡ, ವಾದ್ಯ-ಬ್ಯಾಂಡ್‌ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳು ಶೋಭಾಯಾತ್ರೆಗೆ ಹೊಸ ರಂಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಹಲವು ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಶೋಭಾಯಾತ್ರೆಯ ಚೆಲುವು ಹೆಚ್ಚಿಸಿದವು. ವಿಶೇಷವಾಗಿ ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಶೋಭಾಯಾತ್ರೆಗೆ ಮೆರುಗು ನೀಡಿದವು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೋಗ ಮತ್ತು ನಾನಾ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆಯೇ ನೆರೆದಿತ್ತು. ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಳಿಸಿದವು.

ಇದು ಜನರ ದಸರಾ
ಮಂಗಳೂರು ದಸರಾ ಜನರಿಂದಲೇ ಆಚರಿಸುವ ದಸರಾ. ಇದರ ಯಶಸ್ಸಿಗೆ ಕ್ಷೇತ್ರದಲ್ಲಿ ನೆಲೆಸಿರುವ ದೇವರು ಕಾರಣ. ಪ್ರತಿವರ್ಷ ಮಂಗಳೂರು ದಸರಾದ ವೈಭವವನ್ನು ಜಗತ್ತು ನೋಡುತ್ತದೆ. ದೇವರ ಕೃಪೆಯಿಂದ ಹೀಗೆ ವೈಭವದಿಂದ ಮುಂದುವರಿಯುತ್ತಿದೆ. ಈ ಬಾರಿ ಶಾರದೆಯ ವೀಣೆಯನ್ನು ಪುತ್ರ ಸಂತೋಷ್‌ ಅವರು ಬೆಳ್ಳಿಯಿಂದ ಮಾಡಿಸಿದ್ದಾರೆ. ಮುಂದಿನ ಬಾರಿ ದೇವರು ಅವಕಾಶ ನೀಡಿದರೆ ಚಿನ್ನದ ವೀಣೆಯನ್ನು ಪುತ್ರನ ಮೂಲಕ ಒದಗಿಸಲಾಗುವುದು.
ಜನಾರ್ದನ ಪೂಜಾರಿ , ದಸರಾ ರೂವಾರಿ

ಟಾಪ್ ನ್ಯೂಸ್

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

5

Dasara holiday: ಕರಾವಳಿಯ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

26

Mangaluru: ಬಾಂಗ್ಲಾ ಪ್ರಜೆ; ಒಂದು ವಾರ ಕಸ್ಟಡಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.