ಮಂಗಳೂರು – ಕಾಸರಗೋಡು ಪಾಸ್: ತಲಪಾಡಿಯಲ್ಲಿ 3 ಸಹಾಯಕೇಂದ್ರ
Team Udayavani, Jun 9, 2020, 8:00 AM IST
ಮಂಗಳೂರು: ಕಾಸರಗೋಡು- ಮಂಗಳೂರು ಮಧ್ಯೆ ಉದ್ಯೋಗಕ್ಕಾಗಿ ಬರುವವರಿಗೆ ಪಾಸ್ ವಿತರಣೆಯಲ್ಲಿ ಗೊಂದಲ ವಾಗಿರುವ ಬಗ್ಗೆ ಮಾಹಿತಿ ಬಂದಿರುವ ಕಾರಣ, ಇನ್ನು ಮುಂದೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರದಿಂದ ಮೂರು ಪ್ರತ್ಯೇಕ ಸಹಾಯಕೇಂದ್ರ ಆರಂಭಿಸುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸೂಚನೆ ನೀಡಿರುವುದಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವದ ತಂಡ ಸಂಸದ ನಳಿನ್ ಕುಮಾರ್ ಹಾಗೂ ನನ್ನನ್ನು ಭೇಟಿ ಯಾಗಿ ಸಮಸ್ಯೆಯ ಬಗ್ಗೆ ವಿವರಿಸಿದ್ದಾರೆ. ನಿಯಮಗಳ ಸಮಸ್ಯೆಗಳೇನೇ ಇದ್ದರೂ ದೈನಂದಿನ ಚಟುವಟಿಕೆಗಳಿಗಾಗಿ ದ.ಕ.ಗೆ ಬರುವ ಕಾಸರಗೋಡು ಕನ್ನಡಿಗರಿಗೆ ತುರ್ತು ಪಾಸ್ ನೀಡಲು ಸೂಚಿಸಲಾಗಿದೆ ಎಂದರು.
ವೆನ್ಲಾಕ್ ಒಪಿಡಿ 2 ದಿನದಲ್ಲಿ ಆರಂಭ
ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲಾ ಗಿದ್ದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ (ಒಪಿಡಿ) ಸೇವೆಯನ್ನು ಮುಂದಿನ ಎರಡು ದಿನಗಳಲ್ಲಿ ಪುನಃ ಆರಂಭಿಸಲಾಗು ವುದು. ಪ್ರಾರಂಭಿಕವಾಗಿ ಕೊರೊನಾಕ್ಕಾಗಿ ನಿಗದಿಪಡಿಸಲಾದ ಆಸ್ಪತ್ರೆ ಹೊರತುಪಡಿಸಿ ಉಳಿದ ಕಟ್ಟಡವನ್ನು ಒಪಿಡಿಗೆ ಮೀಸಲಿಡಲಾ ಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.