Mangalore: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ- ಇಬ್ಬರು ಆರೋಪಿಗಳ ಸೆರೆ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ- 120 ಕೆಜಿ ಗಾಂಜಾ ವಶ

Team Udayavani, Feb 6, 2024, 6:48 PM IST

s ch

ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರ ಹಾಗೂ ಕೇರಳಕ್ಕೆ ಮಹೇಂದ್ರ ಬೊಲೆರೋ ವಾಹನದಲ್ಲಿ ಬೃಹತ್ ಪ್ರಮಾಣದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 120 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಫೆ.06 ರಂದು ಮಂಗಳೂರು ನಗರಕ್ಕೆ ಒರಿಸ್ಸಾದಿಂದ ಬೊಲೆರೋದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ ನೇತೃತ್ವದ ತಂಡ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿದೆ.

ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ವಯನಾಡ್‌ನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರು ನಿವಾಸಿಯಾದ ಲತೀಪ್ ಕೆ.ವಿ(36) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಶದಲ್ಲಿದ್ದ ಸಿಲ್ವರ್ ಬಣ್ಣದ ಮಹೇಂದ್ರ ಬೊಲೆರೋ ಕಾರು, ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ, 3 ಮೊಬೈಲ್ ಫೋನ್, ರೂ. 4020 ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಬೊಲೆರೋ ಜೀಪು,  ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 35,14,520 ಎಂದು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇದನ್ನೂ ಓದಿ: ತಂಬಾಕು ಉತ್ಪನ್ನ ಮಾರಾಟಕ್ಕೆ “ಲೈಸೆನ್ಸ್‌ ಕಡ್ಡಾಯ’

ಆರೋಪಿಗಳಿಬ್ಬರೂ ಕೇರಳದ ರಾಜ್ಯದವರಾಗಿದ್ದು, ಕರ್ನಾಟಕ, ಕೇರಳ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾ ರಾಜ್ಯದಿಂದ ಗಾಂಜಾವನ್ನು ಖರೀದಿಸಿ ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಗಾಂಜಾವನ್ನು ಕಳ್ಳ ಸಾಗಾಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೋಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ನ್ನು ಮಾಡಿ ಈ ಬಾಕ್ಸ್ ನಲ್ಲಿ ಗಾಂಜಾವನ್ನು ಬಚ್ಚಿಟ್ಟಿದ್ದರು.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಸದ್ಯ ಬಂಧಿಸಲ್ಪಟ್ಟಿರುವ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.