Literature: ಇಂದಿನಿಂದ ಮಂಗಳೂರು ಲಿಟ್ ಫೆಸ್ಟ್
Team Udayavani, Jan 19, 2024, 1:11 AM IST
ಮಂಗಳೂರು: ಭಾರತ್ ಫೌಂಡೇಶನ್ ವತಿಯಿಂದ ಮಿಥಿಕ್ ಸೊಸೈಟಿ ಸಹಯೋಗದಲ್ಲಿ “ಮಂಗಳೂರು ಲಿಟ್ ಫೆಸ್ಟ್’ನ ಆರನೇ ಆವೃತ್ತಿ ಜ. 19, 20 ಮತ್ತು 21ರಂದು ಇಲ್ಲಿನ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ. 29 ಕಲಾಪಗಳನ್ನೊಳಗೊಂಡ ವಿಚಾರ ಸಂಕಿರಣದಲ್ಲಿ 60ಕ್ಕೂ ಅಧಿಕ ಮಂದಿ ಸಾಹಿತಿ, ವಾಗ್ಮಿಗಳು ಭಾಗವಹಿಸಲಿದ್ದಾರೆ ಎಂದು ಭಾರತ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜ. 19ರಂದು ಸಂಜೆ 5ಕ್ಕೆ ಉದ್ಘಾಟನೆ ನಡೆಯಲಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ, ಕಲಾವಿದೆ ರಾಧೆ ಜಗ್ಗಿ, ನಿಟ್ಟೆ ವಿ.ವಿ.ಯ ವಿನಯ ಹೆಗ್ಡೆ, ಮಿಥಿಕ್ ಸೊಸೈಟಿಯ ಕಾರ್ಯದರ್ಶಿ ರವಿ ಮತ್ತು ವನಿತಾ ಸೇವಾ ಸಮಾಜ ಧಾರವಾಡದ ಕಾರ್ಯದರ್ಶಿ ಮಧುರಾ ಹೆಗಡೆ, ಭಾರತೀಯ ಸಮಾಜ ವಿಜ್ಞಾನ ಸಂಶೋಧನ ಸಂಸ್ಥೆ (ಐಸಿಎಸ್‌ಎಸ್‌ಆರ್) ಸದಸ್ಯ ಕಾರ್ಯದರ್ಶಿ ಡಾ| ಧನಂಜಯ ಸಿಂಗ್, ರಕ್ಷಣಾ ಸಚಿವರ ಸಲಹೆಗಾರ ಲೆ| ಜ| ವಿನೋದ ಖಂಡಾರೆ ಭಾಗವಹಿಸಲಿದ್ದಾರೆ ಎಂದರು.
ವನಿತಾ ಸೇವಾ ಸಮಾಜಕ್ಕೆ ಪ್ರಶಸ್ತಿ
ಈ ಬಾರಿಯ “ದಿ ಐಡಿಯಾ ಆಫ್ ಭಾರತ್’ ಪ್ರಶಸ್ತಿಗೆ ವನಿತಾ ಸೇವಾ ಸಮಾಜ ಧಾರವಾಡ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ. ಭರತನಾಟ್ಯ ಕಲಾವಿದೆ ರಾಧೆ ಜಗ್ಗಿ (ಜ. 19) ಮತ್ತು ಶಾಸ್ತ್ರೀಯ ಸಂಗೀತ ಕಲಾವಿದ ಸಂದೀಪ್ ನಾರಾಯಣ್ (ಜ. 20) ಅವರಿಂದ ಸಂಜೆ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಪ್ರದರ್ಶನ, ಕಾರ್ಕಳದ ವಂದನಾ ರೈ ಅವರಿಂದ ಮಕ್ಕಳಿಗಾಗಿ ಚಿಣ್ಣರ ಅಂಗಳ ನಡೆಯಲಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಕ್ಲೇ ಮಾಡಲಿಂಗ್, ದೇಸಿ ಆಟಗಳು ಸೇರಿದಂತೆ ಲೇಖಕರು ಮತ್ತು ಪ್ರಮುಖರೊಂದಿಗೆ ಸಂವಾದ (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆ ಎಂದು ಶ್ರೀರಾಜ್ ಗುಡಿ ಮಾಹಿತಿ ನೀಡಿದರು.
ಜ. 20 ಮತ್ತು 21ರಂದು ವಿವಿಧ ಗೋಷ್ಠಿಗಳು ನಡೆಯಲಿವೆ. ಕಾರ್ಯಕ್ರಮಗಳ ವಿವರಗಳನ್ನು https://mlrlitfest.org/event-schedule-2024/ ಲಿಂಕ್‌ನಲ್ಲಿ ನೋಡಬಹುದು ಎಂದರು.
ಆಯೋಜಕರಾದ ದುರ್ಗಾ ಪ್ರಸಾದ್ ಕಟೀಲು, ಸುಜಿತ್ ಪ್ರತಾಪ್, ಈಶ್ವರ್ ಶೆಟ್ಟಿ, ದಿಶಾ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.