ಮಂಗಳೂರು: ಚುನಾವಣೆ ರಾಜಕೀಯದಿಂದ ತುಳುಚಿತ್ರರಂಗ ಬಲುದೂರ !

ಕಲಾವಿದನಿಗೆ ಕಲೆಯೇ ಮೊದಲು ಎನ್ನುವುದು ಹಿರಿಯ ನಟರೊಬ್ಬರ ಮಾತು

Team Udayavani, Apr 4, 2023, 1:20 PM IST

ಮಂಗಳೂರು: ಚುನಾವಣೆ ರಾಜಕೀಯದಿಂದ ತುಳುಚಿತ್ರರಂಗ ಬಲುದೂರ !

ಮಂಗಳೂರು: ಚಲನಚಿತ್ರ ರಂಗಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳ.. ಹೀಗೆ ಎಲ್ಲ ಚಿತ್ರರಂಗದ ನಟ-ನಟಿಯರು ರಾಜಕೀಯದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಶಾಸಕ, ಸಂಸದ, ಸಚಿವರಾಗಿಯೂ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಚುನಾವಣೆ ಬರುತ್ತಿದ್ದಂತೆ ಸ್ಟಾರ್‌ ನಟ-ನಟಿಯರಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ.

ರಾಜಕೀಯ ವಿಚಾರ ಬಂದಾಗ ತುಳು ಚಿತ್ರರಂಗ ತುಸು ಭಿನ್ನ. ರಾಜಕೀಯದಿಂದ ತುಂಬಾ ಅಂತರವನ್ನೇ ಕಾಯ್ದುಕೊಂಡಿದೆ. ಇಲ್ಲವೆಂದಲ್ಲ, ಚಲನಚಿತ್ರ ರಂಗದ ಕೆಲವು ನಟರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವರು ರಾಜಕೀಯ ದಲ್ಲಿದ್ದು, ಒಂದೆರಡು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದನ್ನು ಹೊರತುಪಡಿಸಿ ಸದ್ಯ ತುಳುವಿನ ಸ್ಟಾರ್‌ ನಟರು ಎನಿಸಿಕೊಳ್ಳುವವರು ಯಾವುದಾದರೂ ಒಂದು ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ.

ಕಾರಣವೂ ಇದೆ
ತುಳುಚಿತ್ರರಂಗ ಸೀಮಿತ ವ್ಯಾಪ್ತಿಯನ್ನು ಹೊಂದಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಸ್ವಲ್ಪ ಭಾಗವನ್ನು ಒಳಗೊಂಡಿದೆ. ಹೀಗೆ ಸಣ್ಣ ಪ್ರದೇಶವನ್ನು ಹೊಂದಿರುವಾಗ ಯಾವುದಾದರೂ ಒಂದು ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳುವುದು ಚಿತ್ರಗಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ನಟರದ್ದು. ಜತೆಗೆ ಕಲಾವಿದನಾದವ ಜಾತಿ, ಧರ್ಮ, ಪಕ್ಷ ಎಂದು ಗುರುತಿಸಿಕೊಳ್ಳಬಾರದು. ಎಲ್ಲ ಜಾತಿ ಧರ್ಮ ಪಕ್ಷದಲ್ಲಿಯೂ ಅಭಿಮಾನಿಗಳು ಇರುತ್ತಾರೆ. ಕಲಾವಿದನಿಗೆ ಕಲೆಯೇ ಮೊದಲು ಎನ್ನುವುದು ಹಿರಿಯ ನಟರೊಬ್ಬರ ಮಾತು.

ಪ್ರಚಾರವೂ ಇಲ್ಲ
ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಚಲನ ಚಿತ್ರ ನಟರನ್ನು ಸ್ಟಾರ್‌ ಕ್ಯಾಂಪೇನರ್‌ ಆಗಿ ಬಳಸಿ ಕೊಳ್ಳುತ್ತವೆ. ಆದರೆ ತುಳುಚಿತ್ರರಂಗಕ್ಕೆ ಸಂಬಂಧಿಸಿ ದಂತೆ ರಾಜಕೀಯ ಪ್ರಚಾರಕ್ಕೆ ಯಾರನ್ನೂ ಕರೆಯುವುದೂ ಇಲ್ಲ, ನಟರು ಹೋಗುವುದೂ ಇಲ್ಲ. ಎಲ್ಲ ಪಕ್ಷದ ಮುಖಂಡರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಆದರೆ ಪಕ್ಷದ ಜತೆಗೆ ಗುರುತಿಸಿಕೊಳ್ಳಲು ಬಯಸುವುದಿಲ್ಲ. ತಟಸ್ಥವಾಗಿರುವುದೇ ಉತ್ತಮ ಎನ್ನುವ ಅಭಿಪ್ರಾಯವಿದೆ.

ಶಾಸಕರಾಗಿದ್ದರು !
ರಾಜಕೀಯ ಅಂತರದ ಹೊರತಾಗಿಯೂ ಚಿತ್ರ ರಂಗದ ಕೆಲವರು ಶಾಸಕರಾಗಿದ್ದಾರೆ. ಓರ್ವ ನಿರ್ಮಾಪಕರೂ ಶಾಸಕರಾಗಿದ್ದಾರೆ. 1971ರಲ್ಲಿ ಬಿಡುಗಡೆ ಯಾಗಿದ್ದ “ಎನ್ನ ತಂಗಡಿ’ ಚಿತ್ರದಲ್ಲಿ ನಟಿಸಿದ್ದ ಲೋಕಯ್ಯ ಶೆಟ್ಟಿ ಅವರು ಸುರತ್ಕಲ್‌ ಶಾಸಕರಾಗಿದ್ದರು. 2014ರಲ್ಲಿ ಬಿಡುಗಡೆಯಾದ “ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ’ ಮತ್ತು 2015ರಲ್ಲಿ ತೆರೆಕಂಡ “ಎಕ್ಕಸಕ’ ತುಳು ಸಿನೆಮಾದಲ್ಲಿ ನಟಿಸಿದ್ದ ಉಮಾನಾಥ ಕೋಟ್ಯಾನ್‌ ಅವರು ಮೂಡುಬಿದಿರೆಯ ಶಾಸಕರಾಗಿದ್ದಾರೆ. ಉಳಿದಂತೆ 1978ರಲ್ಲಿ ಬಿಡುಗಡೆಯಾಗಿದ್ದ ಸಂಗಮ ಸಾಕ್ಷಿ ಚಲನಚಿತ್ರದ ನಿರ್ಮಾಪಕ ವಸಂತ ಬಂಗೇರ ಅವರು ಬೆಳ್ತಂಗಡಿ ಶಾಸಕರಾಗಿದ್ದರು. ಇನ್ನೊಂದೆಡೆ ಪುತ್ತೂರು ಶಾಸಕಿಯಾಗಿದ್ದ ಶಕುಂತಳಾ ಶೆಟ್ಟಿ ಅವರು 2011ರಲ್ಲಿ ಬಿಡುಗಡೆಯಾದ “ಕಂಚಿಲ್ದ ಬಾಲೆ’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಉಳಿದಂತೆ ಪಕ್ಷದಲ್ಲಿ ಪ್ರಮುಖರಾಗಿದ್ದು, ಚಲನಚಿತ್ರ ನಿರ್ಮಾಣ ಮಾಡಿದವರಿದ್ದಾರೆ.

* ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.