Mangaluru ಸಂಭಾವ್ಯ ಭೂಕುಸಿತ ಪ್ರದೇಶಗಳ ತಾಂತ್ರಿಕ ಅಧ್ಯಯನಕ್ಕೆ ಜಿಲ್ಲಾಧಿಕಾರಿ ಸೂಚನೆ

Team Udayavani, Aug 10, 2024, 6:38 AM IST

Mangaluru ಸಂಭಾವ್ಯ ಭೂಕುಸಿತ ಪ್ರದೇಶಗಳ ತಾಂತ್ರಿಕ ಅಧ್ಯಯನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಭೂ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ತಾಲೂಕುವಾರು ತಂಡಗಳು ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಆ.16ರಿಂದ 21ರೊಳಗೆ ಸ್ಥಳ ಪರಿಶೀಲಿಸಿ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ತಾಂತ್ರಿಕವಾಗಿ ಅಧ್ಯಯನ ಮಾಡಿ ಭೂಕುಸಿತ ತಡೆಯಲು ಸೂಕ್ತ ರಚನೆಗಳನ್ನು ತಯಾರಿಸಲು ಕ್ರಿಯಾ ಯೋಜನೆ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದ್ದಾರೆ.

ದಿಲ್ಲಿಯ ಎನ್‌ಡಿಎಂಎ ನೀಡಿರುವ ಮಾರ್ಗಸೂಚಿ ಅನುಸಾರ ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆ ಯನ್ನು ಸಿದ್ಧಪಡಿಸಲು ವಿವಿಧ ಇಲಾಖೆ ಅಧಿಕಾರಿಗಳು/ಸದಸ್ಯರನ್ನೊಳಗೊಂಡ ಸಮಿತಿಯ ಸಭೆ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಜರಗಿದ್ದು, ಈ ವೇಳೆ ಕೆಲವು ನಿರ್ಣಯವನ್ನು ಕೈಗೊಳ್ಳಲಾಯಿತು.

ಭೂಕುಸಿತ ತಡೆಗಟ್ಟಲು ಪಿಡಬ್ಲ್ಯುಡಿ, ಪಿಆರ್‌ಇಡಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ರಸ್ತೆ ಬದಿಗಳಲ್ಲಿ ಈಗಾಗಲೇ ಗುಡ್ಡಗಳನ್ನು ಕತ್ತರಿಸಿರುವ ಪ್ರದೇಶಗಳನ್ನು ಜಿಯೋ- ಟ್ಯಾಗ್ಡ್ ಛಾಯಾಚಿತ್ರಗಳನ್ನು ಹಾಗೂ ಆ ಪ್ರದೇಶಗಳಲ್ಲಿರುವ ಮನೆಗಳ/ಜನಸಂಖ್ಯೆ ಮಾಹಿತಿಯನ್ನು ವೆಬ್‌ ಪೋರ್ಟಲ್‌ನಲ್ಲಿ ಆ.15 ರೊಳಗೆ ದಾಖ ಲಿಸುವಂತೆ ನಿರ್ದೇಶಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಗುರುತಿಸುವ ಸಲುವಾಗಿ ಗಮನಿಸ ಬೇಕಾದ ತಾಂತ್ರಿಕ ಅಂಶಗಳನ್ನು ತಿಳಿದುಕೊಳ್ಳಲು ಹಾಗೂ ತುರ್ತಾಗಿ ಭೂಕುಸಿತ ತಡೆಗಟ್ಟಲು ರಚಿಸ ಬಹುದಾದ ರಚನೆಗಳನ್ನು ತಿಳಿಯಲು ಜಿಯೋಲಾಜಿಕಲ್‌ ಸರ್ವೇ ಆಫ್‌ ಇಂಡಿಯ ಮತ್ತು ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ರಾಕ್‌ ಮೆಕನಿಸಮ್‌ ಬೆಂಗಳೂರು ವಿಜ್ಞಾನಿಗಳೊಂದಿಗೆ ಚರ್ಚಿಸಲಾಯಿತು.

ಜಿಯೋಲಾಜಿಕಲ್‌ ಸರ್ವೇ ಆಫ್‌ ಇಂಡಿಯ ಗುರುತಿಸಲಾದ 28 ಸಂಭಾವ್ಯ ಭೂಕುಸಿತ ಪ್ರದೇಶಗಳ ನಕಾಶೆ ಗಳು 1:50000 ಸ್ಕೇಲ್‌ನಲ್ಲಿದ್ದು, ಇವುಗಳ ವಿವರವಾದ ಅಧ್ಯಯನಕ್ಕೆ ಹಾಗೂ ತಾಂತ್ರಿಕ ಶಿಫಾರಸಿಗಾಗಿ 1:10000 ಅಥವಾ 1:1000 ಸ್ಕೇಲ್‌ನಲ್ಲಿ ನಕಾಶೆ ಸಿದ್ಧಪ‌ಡಿಸಲು ತೀರ್ಮಾನಿಸಲಾಯಿತು.

ಪ್ರಸ್ತುತ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿ ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕ್ರಮ ಕೈಗೊಳ್ಳುವಂತೆ ಹಾಗೂ ಅಧ್ಯಯನದ ಬಳಿಕ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳುವಂತೆ ಎನ್‌ಐಆರ್‌ಎಂನ ನಿರ್ದೇಶಕರು ಅಭಿಪ್ರಾಯಿಸಿದರು.

ಕಟ್ಟಡ ನಿರ್ಮಾಣ ಸಮಯದಲ್ಲಿ ಭೂಕುಸಿತವಾಗದಂತೆ ತಡೆಗಟ್ಟಲು ಆವಶ್ಯಕ ಕ್ರಮ ಕೈಗೊಳ್ಳುವ ಕುರಿತು ನಗರ ಯೋಜನೆ ಜಂಟಿ ನಿರ್ದೇಶಕರು, ಮುಡಾ ಆಯುಕ್ತರು, ಕ್ರೆಡಾಯ್‌ ಸದಸ್ಯರು ಸಮಾಲೋಚಿಸಿ ಮಾರ್ಗಸೂಚಿಯನ್ನು ಸಿದ್ಧಪಡಿಸುವ ಉಸ್ತುವಾರಿಯನ್ನು ಜಿ.ಪಂ. ಸಿಇಒಗೆ ವಹಿಸಲಾಯಿತು.

ಸೇತುವೆ ಸುಸ್ಥಿರತೆಗೆ ಕ್ರಮ
ಜಿಲ್ಲೆಯ ಎಲ್ಲ ಸೇತುವೆಗಳ ಸುಸ್ಥಿರತೆ ಬಗ್ಗೆ ಪರಿಶೀಲಿಸಿ, ದೃಢೀಕರಣವನ್ನು ನೀಡುವಂತೆ ಪಿಡಬ್ಲೂ Âಡಿ, ಪಿಆರ್‌ಇಡಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆಗಳ ಇಲಾಖೆಯ ಕಾರ್ಯಪಾಲಕ ಅಭಿಯಂತರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.