Mangaluru ಮಾದಕ ವಸ್ತು ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ
Team Udayavani, Nov 18, 2023, 9:51 PM IST
ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಸೆನ್ ಠಾಣಾ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಉರ್ವಸ್ಟೋರ್ ಸುಂಕದ ಕಟ್ಟೆಯ ಗುರು ಮಾರುತಿ ವ್ಯಾಯಾಮ ಶಾಲೆಯ ಬಳಿ ಮಾದಕ ವಸ್ತು ಸೇವಿಸಿದ್ದ ಕಲ್ಲಿಕೋಟೆಯ ನಿವಾಸಿ ಶಾಹಿಲ್ (22) ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕವಸ್ತು ಸೇವನೆ ದೃಢಪಟ್ಟಿದೆ.
ಇನ್ನೊಂದು ಪ್ರಕರಣದಲ್ಲಿ ಬಿಜೈ ಕೆಎಸ್ಸಾರ್ಟಿಸಿ ಬಳಿ ಮಾದಕ ವಸ್ತು ಸೇವಿಸಿದ್ದ ಕೇರಳ ಮಲಪ್ಪುರಂ ಜಿಲ್ಲೆಯ ಚೆಲ್ಮಂಬ್ರಾ ಪುಲಿಕುಂನ್ನು ನಿವಾಸಿ ಸಾದಿಕ್ (23) ನನ್ನು ವಶಕ್ಕೆ ಪಡೆದಿದ್ದಾರೆ.
ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಸೆನ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.