![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 3, 2023, 9:27 PM IST
ಮಂಗಳೂರು: ಪರಿಶಿಷ್ಟ ಪಂಗಡದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ(ಎಫ್ಟಿಎಸ್‌ಸಿ-1)(ಪೋಕೊÕ) ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು 20 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.
ಬಾಗಲಕೋಟೆ ಹಾರ್ದೊಳ್ಳಿಯ ಶ್ರೀಕಾಂತ್ ಹನುಮಂತ ಶಿಕ್ಷೆಗೊಳಗಾದಾತ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಗ್ರಾಮದ ಬಾಕ್ಸ್ ಕಂಪೆನಿಯೊಂದರ ಶೆಡ್‌ನಲ್ಲಿ ಬಾಲಕಿ ತನ್ನ ಪಾಲಕರ ಜತೆ ವಾಸವಾಗಿದ್ದಳು. ಅಲ್ಲಿಯೇ ಪಕ್ಕದ ಶೆಡ್‌ನಲ್ಲಿ ಆರೋಪಿ ಕೂಡ ವಾಸವಾಗಿದ್ದ. ಬಾಲಕಿಯ ಪಾಲಕರು ಮನೆಯಲ್ಲಿ ಇಲ್ಲದ ಸಂದರ್ಭ ಆರೋಪಿ ಆಕೆಯ ಬಳಿ ಬಂದು ಪ್ರೀತಿಸುವುದಾಗಿ ನಂಬಿಸಿ 2019ರ ಎ. 12ರಿಂದ ಹಲವು ಬಾರಿ ಅತ್ಯಾಚಾರವೆಸಗಿದ್ದ. ಅಲ್ಲದೆ ತನ್ನ ಮೊಬೈಲ್‌ನಲ್ಲಿ ಫೋಟೋಗಳನ್ನು ತೆಗೆದು ಅತ್ಯಾಚಾರದ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಮಗುವಿಗೆ ಜನ್ಮ ನೀಡಿದ್ದಳು
ಫೋಟೋಗಳ ಮೂಲಕ ಅಪಚಾರ ಮಾಡುವುದಾಗಿಯೂ ಬೆದರಿಸಿದ್ದ. ಒಮ್ಮೆ ಶಾಲೆಗೆ ಹೋಗಿದ್ದ ಬಾಲಕಿ ಅನಾರೋಗ್ಯಕ್ಕೀಡಾದಾಗ ಪರೀಕ್ಷಿಸಿದ ವೇಳೆ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿತ್ತು. ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಎಸಿಪಿ ಶ್ರೀನಿವಾಸ ಗೌಡ ಆರ್. ಪ್ರಾಥಮಿಕ ತನಿಖೆ ನಡೆಸಿದ್ದರು. ಎಸಿಪಿ ಬೆಳ್ಳಿಯಪ್ಪ ಕೆ.ಯು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಬಾಲಕಿಗೆ 10.50 ಲಕ್ಷ ರೂ. ಪರಿಹಾರಕ್ಕೆ ಆದೇಶ
ವಿಚಾರಣೆ ನಡೆಸಿದ ನ್ಯಾಯಾಧೀಶರು ಭಾರತೀಯ ದಂಡಸಂಹಿತೆ ಕಲಂ 376 (2)(ಎನ್) ಅಡಿಯಲ್ಲಿ 10 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳು ಕಠಿನ ಸಜೆ, ಕಲಂ 376(3) ಅಡಿಯಲ್ಲಿ 20 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಕಠಿನ ಸಜೆ, ಕಲಂ 506ರ ಅಡಿಯಲ್ಲಿ 1 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ 10.50 ಲ.ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಆದೇಶ ನೀಡಿದ್ದಾರೆ.
ಆರಂಭದಲ್ಲಿ ಅಭಿಯೋಜನೆಯ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಅವರು ವಾದಿಸಿದ್ದರು. ಮುಂದಿನ ವಿಚಾರಣೆ ಮತ್ತು ವಾದವನ್ನು ವಿಶೇಷ ಸರಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ಮಂಡಿಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.