Mangaluru: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧ ಸಾಬೀತು; 20 ವರ್ಷ ಜೈಲು, ದಂಡ

ಸಂತ್ರಸ್ತೆಗೆ 6.50 ಲಕ್ಷ ರೂ. ಪರಿಹಾರ ವಿತರಿಸಲು ಆದೇಶ

Team Udayavani, Jan 29, 2025, 7:17 AM IST

cOurt

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಮೊಹಮ್ಮದ್‌ ಸಾದಿಕ್‌(24)ನ ವಿರುದ್ಧದ ಆರೋಪ ಸಾಬೀತಾಗಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ.-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.

ಪ್ರಕರಣದ ವಿವರ
ಬಂಟ್ವಾಳ ಸಜಿಪ ಮುನ್ನೂರು ನಂದಾವರ ಕೋಟೆಮನೆ ಮೂಲದ ಬಂಟ್ವಾಳ ಬಿ. ಮೂಡ ಗ್ರಾಮದ ಗೂಡಿನಬಳಿಯಲ್ಲಿ ವಾಸವಿದ್ದ ಮಹಮ್ಮದ್‌ ಸಾದಿಕ್‌ ಬಾಲಕಿಯನ್ನು ಮೊಬೈಲ್‌ನಲ್ಲಿ ಪರಿಚಯ ಮಾಡಿಕೊಂಡು ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. 2023ರಲ್ಲಿ ಬಾಲಕಿಯ ತಾಯಿ ಅನಾರೋಗ್ಯದಲ್ಲಿದ್ದಾಗ ಮನೆಗೆ ಹೋದ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಅನಂತರವೂ ಮನೆಯಲ್ಲಿ ಯಾರೂ ಇಲ್ಲದಿರುವ ಸಮಯದಲ್ಲಿ ಮನೆಗೆ ಹೋಗಿ ಅತ್ಯಾಚಾರ ನಡೆಸುತ್ತಿದ್ದ. ಇದರಿಂದಾಗಿ ಬಾಲಕಿ ಗರ್ಭವತಿಯಾಗಿದ್ದು, ಈ ಬಗ್ಗೆ ಬಾಲಕಿಯ ತಾಯಿ ಬಂಟ್ವಾಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

6.50 ಲಕ್ಷ ರೂ. ಪರಿಹಾರಕ್ಕೆ ನ್ಯಾಯಾಲಯದ ಆದೇಶ
ಜ. 25ರಂದು ನ್ಯಾಯಾಧೀಶರಾದ ಮಾನು ಕೆ.ಎಸ್‌. ಅವರು ಪೋಕ್ಸೋ ಕಾಯ್ದೆಯಂತೆ 20 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ: 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 6.50 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶನ ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದಾರೆ.

ಪ್ರಬಲ ಸಾಕ್ಷ್ಯವಾದ ಡಿಎನ್‌ಎ
ಪೊಲೀಸ್‌ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರು ತನಿಖೆ ಪೂರ್ಣಗೊಳಿಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ನಡುವೆ ನೊಂದ ಬಾಲಕಿ ಗಂಡು ಮಗುವಿಗೆ ಜನ್ಮವನ್ನೂ ನೀಡಿದ್ದಳು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಅಭಿಯೋಜನೆ ಪರ ಒಟ್ಟು 20 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿದೆ. ಆರೋಪಿಯು ತನ್ನ ಮೇಲಿನ ಆರೋಪವನ್ನು ನಿರಾಕರಿಸುತ್ತಾ ಬಂದಿದ್ದು, ಅನಂತರ ಮಗುವಿನ ಡಿ.ಎನ್‌.ಎ. ಪರೀಕ್ಷಾ ವರದಿಯಲ್ಲಿ ಸಾದಿಕ್‌ ಮಗುವಿನ ಜೈವಿಕ ತಂದೆ ಎಂದು ವರದಿ ಬಂದಿತ್ತು.

ಟಾಪ್ ನ್ಯೂಸ್

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

8

Hosanagar: ಶ್ರೀಗಂಧ ಚೋರರ ಬಂಧನ; 18 ಕೆ.ಜಿ ಶ್ರೀಗಂಧ ವಶ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

4

Editorial: ನೀರಿನ ಸಂರಕ್ಷಣೆಗಾಗಿ ಈಗಿನಿಂದಲೇ ಎಚ್ಚರ ಅಗತ್ಯ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

Udupi: ಗೀತಾರ್ಥ ಚಿಂತನೆ-188: ವೇದಾಂತ-ವ್ಯವಹಾರ ಮಿಶ್ರಣವಾದರೆ ಗೊಂದಲ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.