Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು
Team Udayavani, May 21, 2024, 9:35 PM IST
ಮಂಗಳೂರು: ಮನೆಯ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕುಲಶೇಖರ ಜ್ಯೋತಿ ನಗರದಲ್ಲಿ ನಡೆದಿದೆ.
ಮನೆಯವರು ಮೇ 17ರಂದು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದರು. ಮೇ 20ರಂದು ನೋಡಿದಾಗ ಎದುರು ಬಾಗಿಲಿನ ಬೀಗ ಮುರಿದಿತ್ತು. ಒಳಗೆ ಹೋಗಿ ನೋಡಿದಾಗ ಯಾರೋ ಕಳ್ಳರು ಕಪಾಟಿನ ಬಾಗಿಲನ್ನು ಮುರಿದು ಅದರೊಳಗಿದ್ದ 1.3 ಗ್ರಾಂ ತೂಕದ ಚಿನ್ನದ ಒಂದು ಪೆಂಡೆಂಟ್, 5 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್, 3 ಸಣ್ಣ ಉಂಗುರಗಳು, ಬೆಳ್ಳಿಯ ಪೆಂಡೆಂಟ್, ಕಾಲುಗೆಜ್ಜೆ, 3 ಬೆಳ್ಳಿಯ ಉಂಗುರಗಳು, ವಾಚ್ ಸೇರಿದಂತೆ ಅಂದಾಜು 66,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ ಅಂದಾಜು 1,000 ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಕಳವು ಮಾಡಿರುವುದು ಗೊತ್ತಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಿಂದ ಹಣ ಕಳವು
ಮಂಗಳೂರು: ನಗರದ ಕಣ್ಣಿನ ಆಸ್ಪತ್ರೆಯ ಬೀಗ ಮುರಿದು ನಗದು ಹಣ ಕಳವು ಮಾಡಲಾಗಿದೆ.
ಆಸ್ಪತ್ರೆಯ ಆಡಳಿತ ಅಧಿಕಾರಿ ಮೇ 18ರಂದು ರಾತ್ರಿ 9ಕ್ಕೆ ಲಾಕ್ ಮಾಡಿ ತೆರಳಿದ್ದರು. ಮೇ 19ರಂದು ಬೆಳಗ್ಗೆ 8 ಗಂಟೆಗೆ ಬಂದು ನೋಡಿದಾಗ ಯಾರೋ ಕಳ್ಳರು ಬೀಗವನ್ನು ಒಡೆದು ಒಳಗಡೆ ಡ್ರಾವರ್‌ಗಳಲ್ಲಿದ್ದ 74,000 ರೂ.ಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಲಿಂಬಿ: ಬೈಕ್ ಕಳವು
ಮಂಗಳೂರು: ಚಿಲಿಂಬಿಯ ಕ್ಲಿನಿಕ್‌ವೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವಾಗಿದೆ.
ರವಿಶಂಕರ್ ಎಂ.ಕೆ. ಅವರು ಬೈಕ್ ಅನ್ನು ಮೇ 19ರಂದು ಮಧ್ಯಾಹ್ನ 1 ಗಂಟೆಗೆ ಕ್ಲಿನಿಕ್‌ನ ಹಿಂಭಾಗದಲ್ಲಿ ತಮ್ಮ ಮನೆಯ ಬಳಿ ನಿಲ್ಲಿಸಿದ್ದರು. ಮೇ 20ರಂದು ಬೆಳಗ್ಗೆ 6 ಗಂಟೆಗೆ ನೋಡಿದಾಗ ಬೈಕ್ ಕಳವಾಗಿತ್ತು. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.