Mangaluru ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ
Team Udayavani, Aug 27, 2023, 12:33 AM IST
ಮಂಗಳೂರು: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ಬಿಜೈ ಬಸ್ ನಿಲ್ದಾಣದ ಎದುರು ಇರುವ ಹೊಟೇಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಪ್ಲಾಸ್ಟಿಕ್ ಚೀಲದಲ್ಲಿ ಮದ್ಯದ ಪ್ಯಾಕೆಟ್ಗಳನ್ನಿಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉರ್ವ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರನ್ನು ಚಿದಾನಂದ (35) ಮತ್ತು ಸ್ವಾಮಿಗೌಡ (56) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 5,760 ರೂ. ಮೌಲ್ಯದ 90 ಎಂಎಲ್ನ 128 ಸಾರಾಯಿ ಟೆಟ್ರಾ ಪ್ಯಾಕೆಟ್ಗಳನ್ನು, ಸಾರಾಯಿ ಮಾರಾಟದಿಂದ ಗಳಿಸಿದ 2,500 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿಗಳು ಬಾರ್ನಿಂದ ತಂದು ಮಾರಾಟ ಮಾಡುತ್ತಿದ್ದರೆನ್ನಲಾಗಿದ್ದು ಬಾರ್ ಮಾಲಕ ಬಾಲಕೃಷ್ಣ ಪೂಂಜಾ ವಿರುದ್ಧ ಅಬಕಾರಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.