Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ
ಮಗಳು, ಅಳಿಯನ ಖಾತೆಯಿಂದಲೂ ಹೂಡಿಕೆ!
Team Udayavani, Nov 18, 2024, 9:15 PM IST
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ಪಡೆಯುವ ಬಗ್ಗೆ ನಂಬಿಸಿ ವ್ಯಕ್ತಿಯೋರ್ವರಿಗೆ ಅಪರಿಚಿತರು 21 ಲಕ್ಷ ರೂಪಾಯಿಗಳಿಗೂ ಅಧಿಕ ಹಣ ವಂಚನೆ ಮಾಡಿರುವ ಘಟನೆ ನಡೆದಿದೆ.
ದೂರುದಾರರಿಗೆ ಅಪರಿಚಿತರು ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿದ್ದರು. ಅದರಲ್ಲಿ ಹೆಚ್ಚಿನ ಲಾಭ ಬರುವ ಹೂಡಿಕೆಯ ಕುರಿತ ಮಾಹಿತಿ ಇತ್ತು. ಅನಂತರ ದೂರುದಾರರ ಖಾತೆಗೆ ಲಿಂಕ್ ಬಂದಿದ್ದು ಅದರ ಮೂಲಕ ಅವರ ನೋಂದಣಿ ಮಾಡಿಸಿಕೊಳ್ಳಲಾಗಿತ್ತು. ಅನಂತರ ಆ ಗ್ರೂಪ್ನಲ್ಲಿ ಬಂದ ಸೂಚನೆಗಳನ್ನು ನಂಬಿ ಹಣ ಹೂಡಿಕೆ ಮಾಡಿದ್ದರು. ಅವರಿಗೆ ಕಳುಹಿಸಲಾಗಿದ್ದ ಆ್ಯಪ್ನಲ್ಲಿ ಅವರ ಹೂಡಿಕೆಯ ವ್ಯವಹಾರ, ಲಾಭಾಂಶದ ವಿವರಗಳು ಗೋಚರಿಸುತ್ತಿತ್ತು. ಇದರಿಂದಾಗಿ ವಿಶ್ವಾಸ ಮೂಡಿ ಮತ್ತಷ್ಟು ಹೂಡಿಕೆಗೆ ಆಸಕ್ತಿ ವಹಿಸಿದ್ದರು. ಅಲ್ಲದೆ ಗ್ರೂಪ್ನಲ್ಲಿ ಇನ್ನಷ್ಟು ಹೊಸ ಹೂಡಿಕೆಯ ಬಗ್ಗೆ ಸಂದೇಶಗಳನ್ನು ಕಳುಹಿಸಲಾಗುತ್ತಿತ್ತು. ಹಾಗಾಗಿ ಅವರು ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದರು. ಹೀಗೆ ತನ್ನ ಖಾತೆಯಿಂದ, ಮಗಳ ಖಾತೆಯಿಂದ ಮತ್ತು ಅಳಿಯನ ಖಾತೆಯಿಂದ ಒಟ್ಟು 21 ಲ.ರೂ.ಗಳಿಗೂ ಅಧಿಕ ಹಣವನ್ನು ಹೂಡಿಕೆ ಮಾಡಿದ್ದರು.
ನ. 7ರಂದು ಹೂಡಿಕೆ ಮಾಡಿದ ಮೊತ್ತ ಹಾಗೂ ಲಾಭಾಂಶವನ್ನು ನಗದೀಕರಿಸಲು ಯತ್ನಿಸಿದಾಗ ಇನ್ನಷ್ಟು ಹೂಡಿಕೆ ಮಾಡಿದರೆ ಮಾತ್ರ ಹಣ ಪಡೆಯಲು ಸಾಧ್ಯ ಎಂದು ಅವರಿಗೆ ಗ್ರೂಪ್ನವರು ಸೂಚಿಸಿದರು. ಆಗ ಇದೊಂದು ವಂಚನೆಯ ಜಾಲವೆಂಬುದು ಗೊತ್ತಾಯಿತು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.