ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ: ವೃಥಾ ವಿವಾದ ಸೃಷ್ಟಿ
ಜನಾರ್ದನ ಪೂಜಾರಿಗೆ ಮನವರಿಕೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ
Team Udayavani, Jan 23, 2022, 5:40 AM IST
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರಕ್ಕೆ ಸಂಬಂಧಿಸಿ ಎಲ್ಲ ವಿಚಾರ ಗಳನ್ನು ಹಿರಿಯ ನಾಯಕ ಜನಾರ್ದನ ಪೂಜಾರಿಯವರಿಗೆ ಮನವರಿಕೆ ಮಾಡ ಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ದರುಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ದರು. ಶ್ರೇಷ್ಠ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಗಳ ಬಗ್ಗೆ, ಅವರ ಶ್ರೇಷ್ಠತೆ ಬಗ್ಗೆ ಪ್ರಧಾನಿ, ಕೇಂದ್ರ ಸರಕಾರ, ರಾಜ್ಯ ಸರಕಾರ, ಮುಖ್ಯಮಂತ್ರಿ ಹಾಗೂ ನಮ್ಮ ಪಕ್ಷ ಗೌರವಯುತವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ರಾಜಕೀಯ ಮೀರಿ ಪ್ರೀತಿಸುವ ನಾಯಕ ಪೂಜಾರಿಯವರಿಗೆ ಮನವರಿಕೆ ಮಾಡುವ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
ಕೇರಳದಲ್ಲಿ ಕಮ್ಯೂನಿಸ್ಟ್ ಪಕ್ಷ ಈ ವಿವಾದ ಹುಟ್ಟು ಹಾಕಿದೆ. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಬೆಳೆಸುತ್ತಿದೆ ಎಂದರು.
ಜಾಗೃತಿಗಾಗಿ ಗುರುಗಳ ಸ್ತಬ್ಧ ಚಿತ್ರದ ಮೆರವಣಿಗೆ ಜ. 26ರಂದು ನಡೆಯಲಿದೆ ಎಂದು ಕೇಳಿದ್ದೇನೆ. ನಾನು, ಪಕ್ಷದ ರಾಜ್ಯಾಧ್ಯಕ್ಷ ನಳಿನ್, ಸುನಿಲ್ ಕುಮಾರ್ ಈಗಾಗಲೇ ಚರ್ಚೆ ಮಾಡಿದ್ದೇವೆ. ಗುರುಗಳ ಹೆಸರಿನಲ್ಲಿ ಯಾವುದೇ ಒಳ್ಳೆಯ ಕೆಲಸಕ್ಕೆ ನಮ್ಮ ಸರಕಾರ, ಪಕ್ಷ, ನಾಯಕರ, ಸಮಾಜದ ಪೂರ್ಣ ಬೆಂಬಲವಿದೆ. ಆದರೆ ತಪ್ಪು ಮಾಹಿತಿ ನೀಡಿ, ಪ್ರಧಾನಿ, ಕೇಂದ್ರ ಸರಕಾರದ ಮೇಲೆ ದೋಷಾರೋಪಣೆ ಮಾಡುವ ವ್ಯವಸ್ಥಿತ ಕುತಂತ್ರ, ಷಡ್ಯಂತ್ರಗಳನ್ನು ಜನತೆ ಜಾಗೃತರಾಗಿ ಗಮನಿಸಬೇಕು ಎಂದು ವಿನಂತಿ ನನ್ನದು ಎಂದರು.
ಇದನ್ನೂ ಓದಿ:ಕೋವಿಡ್ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್
ಗುರುಗಳ ಬಗ್ಗೆ ಪ್ರಧಾನಿ ಮೋದಿ ಯವರಿಗೆ ವಿಶೇಷ ಗೌರವವಿದೆ. ಅವರು ಪ್ರಧಾನಿಯಾದ ಸ್ವಲ್ಪವೇ ಸಮಯದಲ್ಲಿ ಗುರುಗಳ ಆಶ್ರಮ ಶಿವಗಿರಿಗೆ ಭೇಟಿ ನೀಡಿ ಗುರುಗಳ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು.
ಮಂಗಳೂರು ದಸರಾ ಉದ್ಘಾಟನೆಗೆ ಆಗ ಮುಖ್ಯಮಂತ್ರಿ ಯಾಗಿದ್ದ ಸಿದ್ದರಾಮಯ್ಯನವರನ್ನು ಜನಾರ್ದನ ಪೂಜಾರಿ ಆಹ್ವಾನಿಸಿ ದ್ದರು. ಆದರೆ ಸಿದ್ದರಾಮಯ್ಯ ಮಂಗಳೂರಿಗೆ ಬಂದಿದ್ದರೂ ದಸರಾ ಉದ್ಘಾಟನೆಗೆ ಬರದಂತೆ ತಡೆದಿರುವಲ್ಲಿ ಯಾರ ಕೈವಾಡ ಇದೆ ಎಂಬುದನ್ನು ಐವನ್ ಡಿ’ಸೋಜಾ ಹೇಳಬೇಕಾಗಿದೆ ಎಂದರು.
ಸಚಿವರನ್ನು ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿ ರವಿಶಂಕರ ಮಿಜಾರ್ ಸ್ವಾಗತಿ ಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಸತೀಶ್ ಕುಂಪಲ, ರಾಧಾಕೃಷ್ಣ ಇದ್ದರು.
ನಿಲ್ಲಿಸದಿದ್ದರೆ ಸುಮ್ಮನಿರೆವು: ಹರಿಕೃಷ್ಣ ಬಂಟ್ವಾಳ್
ಮಂಗಳೂರು: ಗಣ ರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವ ಕಾಶ ಸಿಕ್ಕಿಲ್ಲ ಎಂಬುದನ್ನು ವಿವಾದ ವಾಗಿ ಮಾಡಿರುವುದು ಕಮ್ಯೂನಿಸ್ಟ್ ಮತ್ತು ಕಾಂಗ್ರೆಸ್ ಕುತಂತ್ರ, ಇದನ್ನು ನಿಲ್ಲಿಸದಿದ್ದರೆ ನಾವು ಸುಮ್ಮನಿರುವು ದಿಲ್ಲ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
ಗುರುಗಳ ಕೇಂದ್ರ ಸ್ಥಳ ಶಿವಗಿರಿ ಯಿಂದ ಈ ವಿವಾದ ಸೃಷ್ಟಿಯಾಗಿಲ್ಲ. ಬದಲಾಗಿ ಕಮ್ಯೂನಿಸ್ಟರ ಕುತಂತ್ರ ಮತ್ತು ಅತಂತ್ರ ಸ್ಥಿತಿಯಲ್ಲಿರುವ ರಾಜ್ಯ ಕಾಂಗ್ರೆಸ್‌ನ ಷಡ್ಯಂತ್ರದಿಂದ ಇದನ್ನು ವಿವಾದವಾಗಿ ಮಾಡಲಾಗಿದೆ ಎಂದು ನಗರದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದರು.
ಗುರುಗಳ ಸ್ತಬ್ಧ ಚಿತ್ರದ ಬದಲಿಗೆ ಶಂಕಾರಾಚಾರ್ಯರ ಸ್ತಬ್ಧಚಿತ್ರವನ್ನು ರಚಿಸುವಂತೆ ಕೇಂದ್ರ ಸರಕಾರ ಹೇಳಿದೆ ಎಂದು ಅಪಪ್ರಚಾರ ಮಾಡ ಲಾಗುತ್ತಿದೆ. ಈ ಬಗ್ಗೆ ಲಿಖೀತ ದಾಖಲೆ ಅಥವಾ ಸುತ್ತೋಲೆ ಇದ್ದರೆ ಕಾಂಗ್ರೆಸ್ ತೋರಿಸಬೇಕು ಎಂದರು.
2016ರಲ್ಲಿ ಮುಖ್ಯಮಂತ್ರಿ ಯಾಗಿದ್ದ ಸಿದ್ದ ರಾಮಯ್ಯ ಮಂಗಳೂರಿಗೆ ಭೇಟಿ ನೀಡಿದಾಗ ಸಿದ್ದ ರಾಮಯ್ಯ ಅವರು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡದೆ ತೆರಳಿದ್ದರು. ಲೇಡಿಹಿಲ್ ವೃತ್ತಕ್ಕೆ ಗುರುಗಳ ಹೆಸರನ್ನು ಇಡುವಂತೆ ಮನಪಾ ಸಭೆಯಲ್ಲಿ ನಿರ್ಣಯಿಸಿದಾಗ ಕಾಂಗ್ರೆಸ್‌ನ ನಾಯಕರು ಆಕ್ಷೇಪಿಸಿದ್ದರು. ಇದು ಗುರುಗಳಿಗೆ ಮಾಡಿದ ಅಗೌರವ ಅಲ್ಲವೇ ಎಂದು ಪ್ರಶ್ನಿಸಿದರು.
ಜನಾರ್ದನ ಪೂಜಾರಿಯವರ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ಅಲ್ಲಿ ಯಾವುದೇ ಪಕ್ಷಗಳ ಧ್ವಜ ಇರಬಾರದು. ಪೂಜಾರಿಯವರು 40 ವರ್ಷ ರಾಜಕೀಯದಲ್ಲಿದ್ದವರು. ಗಣರಾಜ್ಯೋತ್ಸವ ಪರೇಡ್‌ಗೆ ಸ್ತಬ್ಧಚಿತ್ರಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದು ಅವರಿಗೂ ಗೊತ್ತಿದೆ. ಈಗ ಯಾರೋ ಕುಮ್ಮಕ್ಕು ನೀಡಿ ಈ ಮೆರವಣಿಗೆಗೆ ಪ್ರೇರೇಪಿಸಿದ್ದಾರೆ. ಕಾಂಗ್ರೆಸ್‌ನ ಅಸ್ತಿತ್ವ ಮುಗಿಯುತ್ತ ಬಂದಿರುವ ಕಾರಣ ಈಗ ಗುರುಗಳನ್ನು ಮುಂದಿಟ್ಟು ರಾಜಕೀಯ ಮಾಡಿ ಮತ ಗಿಟ್ಟಿಸುವ ಯತ್ನವನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರು, ಜಗದೀಶ ಶೇಣವ, ರಾಧಾಕೃಷ್ಣ, ವಿಜಯ ಕುಮಾರ್, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.
2023ರ ಪರೇಡ್‌ನಲ್ಲಿ ಗುರುಗಳ ಸ್ತಬ್ಧಚಿತ್ರ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಈಗಾಗಲೇ ಮಾತುಕತೆ ನಡೆಸಿದ್ದು, 2023ರ ಹೊಸದಿಲ್ಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ರಾಜ್ಯದಿಂದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.