![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2024, 1:02 AM IST
ಮಂಗಳೂರು: ಹಿರಿಯ ರಂಗಭೂಮಿ ಕಲಾವಿದ, ರಂಗಕರ್ಮಿ, ಸಂಘಟಕ ವಿ.ಜಿ. ಪಾಲ್ (ವೇಣುಗೋಪಾಲ್ ಟಿ. ಕೋಟ್ಯಾನ್ – 82) ಅವರು ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಬೊಕ್ಕಪಟ್ಣ ಶಾಲೆಯಲ್ಲಿ ಶಿಕ್ಷಣ, ಬಳಿಕ ಐಟಿಐ ಶಿಕ್ಷಣ ಪಡೆದ ಅವರು ಸ್ವಲ್ಪ ಕಾಲ ಮುಂಬಯಿಯಲ್ಲಿ, ಬಳಿಕ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಿಯಾಗಿದ್ದರು.
1961ರಲ್ಲಿ “ಕಲ್ಜಿಗದ ಕುರುಕ್ಷೇತ್ರ’ ತುಳುನಾಟಕದ ಮೂಲಕ ಮೊದಲ ರಂಗಪ್ರವೇಶ ಮಾಡಿದರು. ಸುಮಾರು 2 ಸಾವಿರ ಸಾಮಾಜಿಕ, ಐತಿಹಾಸಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. 50 ಧ್ವನಿ ಸುರುಳಿಗಳಿಗೆ ಕಂಠದಾನ ಮಾಡಿದ್ದಾರೆ. ಪೂ ಪನ್ನೀರ್ ತುಳು ವೀಡಿಯೋ ಚಿತ್ರ, ಹಲವು ಕಿರುತೆರೆ ಚಿತ್ರಗಳಲ್ಲಿ ಅಭಿನಯಿಸಿದ್ದು ಕೇಂದ್ರ ಸರಕಾರದ ಕರಾವಳಿ ಮತ್ತು ತೆರೆಗಳು ಸಾಕ್ಷ್ಯಚಿತ್ರಗಳಲ್ಲೂ ಪಾತ್ರ ಮಾಡಿದ್ದಾರೆ. ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.
ನಾಟಕ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದ.ಕ. ರಾಜ್ಯೋತ್ಸವ ಪ್ರಶಸ್ತಿ, ರಂಗ ಚಾವಡಿ ಪ್ರಶಸ್ತಿ, ಮೊಗವೀರಸಾಧನಾ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.