Rain ಮಾನಿ ಅಣೆಕಟ್ಟು ಭರ್ತಿ; ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ
Team Udayavani, Aug 5, 2024, 11:17 PM IST
ಕುಂದಾಪುರ: ಮಾನಿ ಅಣೆಕಟ್ಟಿನಲ್ಲಿ ನೀರಿನ ಒಳಹರಿವು ಹೆಚ್ಚಾಗಿದ್ದು, ಭರ್ತಿಯಾದಲ್ಲಿ ನೀರು ಹೊರಬಿಡಲಾಗುವುದು. ಕಾಲುವೆ ತೀರದ ಜನರು ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.
ವಾರಾಹಿ ಯೋಜನೆಯ ಮಾನಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ.
ಮಾನಿ ಜಲಾಶಯದ ಗರಿಷ್ಠ ಮಟ್ಟವು 594.36 ಮೀ. ಆಗಿದ್ದು ಮತ್ತು ಈಗಿನ ಜಲಾಶಯದ ಮಟ್ಟವು ಆ.5ರಂದು ಬೆಳಗ್ಗೆ 8 ಗಂಟೆಗೆ 588.15 ಮೀಟರ್‌ಗಳಾಗಿದೆ. ಈ ದಿನದ ಮಾನಿ ಜಲಾಶಯದ ಒಳಹರಿವು ಸುಮಾರು 3,393 ಕ್ಯುಸೆಕ್ಸ್ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರೆದ ಪಕ್ಷದಲ್ಲಿ, ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ.
ಅಣೆಕಟ್ಟಿನ ಸುರಕ್ಷೆ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ಹಾಲಾಡಿ ನದಿಯ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂ ತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರೈಲು ಬಡಿದು ವ್ಯಕ್ತಿ ಸಾವು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.