Vitla: ಮಾಣಿಗುತ್ತು ಧರ್ಮಚಾವಡಿ: ಪುನಃ ಪ್ರತಿಷ್ಠೆ, ಬ್ರಹ್ಮಕಲಶ


Team Udayavani, Jan 19, 2024, 1:19 AM IST

mani ch

ವಿಟ್ಲ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರದಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್‌, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರ ಪೂರ್ಣವಾಗಿದ್ದು, ಬ್ರಹ್ಮಕಲಶಕ್ಕೆ ಸಿದ್ಧತೆ ನಡೆಯುತ್ತಿದೆ.

ಜ. 20ರಿಂದ 25ರ ವರೆಗೆ ಮಾಣಿ ಶ್ರೀ ಉಳ್ಳಾಲ್ತಿ ಮಾಡದಲ್ಲಿ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವ, ಕೂಡುಕಟ್ಟಿನ ಯಜಮಾನತ್ವದಲ್ಲಿ ದೈವಗಳ ಧರ್ಮಚಾವಡಿಯಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ಫೆ. 5ರಂದು ಭಂಡಾರಯೇರಿ ಫೆ. 6ರಂದು ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ.

ಜ. 20ರಂದು ಬೆಳಗ್ಗೆ 10ಕ್ಕೆ ಭಜನೆ, 11ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಗಂಟೆ 1.30ರಿಂದ ಅರೆಬೆಟ್ಟು, ಕಲ್ಲಡ್ಕ, ಸೂರಿಕುಮೇರು, ಮಾಣಿ, ಕೊಡಾಜೆ ಮಾರ್ಗವಾಗಿ ಹಸುರುವಾಣಿ ಹೊರೆಕಾಣಿಕೆ ಮೆರವಣಿಗೆ ಧರ್ಮಚಾವಡಿಗೆ ತಲುಪಲಿದೆ.

ಜ. 21ರಂದು ಗಣಪತಿ ಹೋಮ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಭಜನೆ, ನೃತ್ಯಾಂಜಲಿ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಜ. 22ರಂದು ಚಂಡಿಕಾ ಹೋಮ, ಜ. 23ರಂದು ಧಾರ್ಮಿಕ ವಿಧಿ, ಶ್ರೀ ಉಳ್ಳಾಲ್ತಿ ಮಾಡದಲ್ಲಿ ಬ್ರಹ್ಮಕಲಶ, ಮಹಾಪೂಜೆ, ಜ. 24ರಂದು ಧಾರ್ಮಿಕ ವಿಧಿ ನಡೆಯಲಿದೆ. ಜ. 25ರಂದು ಮಾಣಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ಅನ್ನಸಂತರ್ಪಣೆ, ಸಂಜೆ 5.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರೂ ಆಡಳಿತ ಮೊಕ್ತೇಸರರೂ ಆಗಿರುವ ಎಂ. ಸಚಿನ್‌ ರೈ ಮಾಣಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರು, ಮಹೇಶ್‌ ಮುನಿಯಂಗಳ, ಅನಂತ ಭಟ್‌ ಪಳನೀರು ಉಪಸ್ಥಿತರಿರುತ್ತಾರೆ.

ಇತಿಹಾಸ
ತುಳುನಾಡಿನ ಪುಣ್ಯಭೂಮಿ ಯಾದ ಸುಳ್ಳಮಲೆ, ಬಳ್ಳಮಲೆ ಬೆಟ್ಟದ ತೀರ್ಥಸ್ನಾನ ಬಹಳ ಪ್ರಸಿದ್ಧಿ ಪಡೆದಿದೆ. ಇದೇ ಸುಳ್ಳಮಲೆ ಬೆಟ್ಟದ ತಪ್ಪಲಿನಲ್ಲಿ ಕಂಬಳ ಮತ್ತು ಬಾಕಿಮಾರು ಗದ್ದೆಗಳ ಪ್ರಾಕೃತಿಕ ಪರಿಸರದಲ್ಲಿ ಧರ್ಮ ಚಾವಡಿ ಕಂಗೊಳಿಸುತ್ತದೆ. ಈ ಧರ್ಮ ಚಾವಡಿಗೆ ಅನೇಕ ವರ್ಷಗಳ ಇತಿಹಾಸವಿದ್ದು ಶ್ರೀ ಉಳ್ಳಾಲ್ತಿ, ಬೆಮ್ಮೆರ್‌, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ನೆಲೆಯಾಗಿದೆ.

ಚಾವಡಿ ಜೀರ್ಣಾವಸ್ಥೆ ಯಲ್ಲಿರುವುದನ್ನು ಮನಗಂಡು 20 ವರ್ಷಗಳ ಹಿಂದೆ ಹಳೆಯದನ್ನು ಕೆಡವಿ ನೂತನ ಚಾವಡಿ ನಿರ್ಮಿಸಿ, ಬ್ರಹ್ಮಕಲಶ ನಡೆಸಲಾಗಿತ್ತು. ಮತ್ತೆ ನಡೆದ ಪ್ರಶ್ನೆ ಚಿಂತನೆಯಲ್ಲಿ ದೈವಗಳ ನುಡಿಯ ಪ್ರಕಾರ ಗತಕಾಲದ ವೈಭವದಂತೆ ಚಾವಡಿಯನ್ನು ಮರು ನಿರ್ಮಾಣ ಮಾಡಬೇಕು ಎನ್ನುವ ಸಂಕಲ್ಪದಂತೆ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅನುಜ್ಞಾ ಕಲಶ, ಭೂಮಿ ಪೂಜೆ, ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿತ್ತು. ವಾಸ್ತುಶಿಲ್ಪಿ ಮಹೇಶ್‌ ಮುನಿಯಂಗಳ ನಿರ್ದೇಶನದಂತೆ ಭಕ್ತರ ಧನಸಹಾಯ ಮತ್ತು ಶ್ರಮ ಸೇವೆಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಇದೀಗ ಧರ್ಮ ಚಾವಡಿ ಎದ್ದು ನಿಂತಿದೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.