![UDP-DC](https://www.udayavani.com/wp-content/uploads/2024/12/UDP-DC-415x249.jpg)
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Team Udayavani, Nov 18, 2024, 5:39 PM IST
![Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ](https://www.udayavani.com/wp-content/uploads/2024/11/ya-1-620x395.jpg)
ಮಣಿಪಾಲ: ಸರಳೇಬೆಟ್ಟು ಬಾಲಮಿತ್ರ ಯಕ್ಷಗಾನ ಮಂಡಳಿಯ ಸಂಚಾಲಕ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು (59) ನ. 18ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನ ಹೊಂದಿದರು.
ಮಕ್ಕಳಲ್ಲಿ ಯಕ್ಷಗಾನ ಅಭಿರುಚಿ ಮೂಡಿಸಲು ಬಾಲ ಮಿತ್ರ ಯಕ್ಷಗಾನ ಮಂಡಳಿಯನ್ನು ಸರಳೇಬೆಟ್ಟುವಿನಲ್ಲಿ ಸ್ಥಾಪಿಸಿ. ದಕ್ಷಿಣ ಆಫ್ರಿಕಾ, ದುಬಾೖ ಮೊದಲಾದ ಹೊರದೇಶಗಳಲ್ಲಿ, ದಿಲ್ಲಿ, ಮುಂಬಯಿ, ಬೆಂಗಳೂರು ಮೊದಲಾದ ಕಡೆಗಳಲ್ಲೂ ಮಕ್ಕಳ ಯಕ್ಷಗಾನ ಪ್ರದರ್ಶನ ನೀಡಿದ್ದರು.
ಇತ್ತೀಚೆಗೆ ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಮೊದಲ ಬಾರಿಗೆ ಯಕ್ಷಗಾನ ತಂಡ ಕರೆದೊಯ್ದು ಪ್ರದರ್ಶನ ನೀಡಿದ್ದು, ಪೇಜಾವರ ಶ್ರೀಪಾದರಿಂದ ಅಲ್ಲಿ ಸಮ್ಮಾನಿಸಲ್ಪಟ್ಟಿದ್ದರು.
ಕೆಎಂಸಿಯ ಆಸ್ಪತ್ರೆಯ ಕಣ್ಣಿನ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.