Manipal: ವೈದ್ಯರ ಲ್ಯಾಪ್‌ಟಾಪ್ ಕಳವು; ದೂರು ದಾಖಲು
Team Udayavani, May 12, 2024, 9:46 PM IST
ಮಣಿಪಾಲ: ಬ್ಯಾಗ್‌ನಲ್ಲಿ ಇಟ್ಟಿದ್ದ ಲ್ಯಾಪ್‌ಟಾಪ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.
ಮಣಿಪಾಲದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಧವ ನಗರದ ನಿವಾಸಿ ಡಾ| ಪ್ರಾಂಜಲಿ ಬಿ. ಶಿರ್ಸಾಟ್ ಅವರು ಮೇ 10ರಂದು ಹೊರರೋಗಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ತನ್ನ ಎಚ್‌ಪಿ ಪೆವಿಲಿಯನ್ 15 – ಇಜಿ 2000 ಲ್ಯಾಪ್‌ಟಾಪ್ ಅನ್ನು ಬ್ಯಾಗ್‌ನಲ್ಲಿ ಇಟ್ಟು ಹೋಗಿದ್ದರು. ಮಧ್ಯಾಹ್ನ ಬಂದು ನೋಡಿದಾಗ ಸುಮಾರು 75,000 ರೂ. ಮೌಲ್ಯದ ಲ್ಯಾಪ್‌ಟಾಪ್ ಕಳವಾಗಿತ್ತು ಎಂದು ಡಾ| ಪ್ರಾಂಜಲಿ ಅವರು ಮಣಿಪಾಲ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪಿಜಿಯಿಂದ ಲ್ಯಾಪ್‌ಟಾಪ್ ಕಳವು
ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದ ಪಿಜಿಯೊಂದರಿಂದ ಲ್ಯಾಪ್‌ಟಾಪ್ ಸಹಿತ ಸೊತ್ತುಗಳನ್ನು ಕಳವು ಮಾಡಲಾಗಿದೆ.
ಪಿಜಿಯಲ್ಲಿದ್ದವರು ಮೇ 9ರಂದು ಸಂಜೆ 5.45ಕ್ಕೆ ಹೊರಗೆ ಹೋಗಿ ರಾತ್ರಿ 7.20ಕ್ಕೆ ವಾಪಸ್ ಬಂದು ನೋಡಿದಾಗ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಸೇರಿದಂತೆ ಅಂದಾಜು 65,350 ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.