Manipal: ಮಾದಕ ವಸ್ತು ಸೇವನೆ ವ್ಯಕ್ತಿ ಪೊಲೀಸ್ ವಶಕ್ಕೆ
Team Udayavani, Nov 10, 2024, 10:57 PM IST
ಮಣಿಪಾಲ: ಮಾದಕ ವಸ್ತು ಗಾಂಜಾ ಸೇವಿಸಿದ ವ್ಯಕ್ತಿಯನ್ನು ಮಣಿಪಾಲ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಮಣಿಪಾಲ ಠಾಣೆಯ ಎಎಸ್‌ಐ ವಿವೇಕಾನಂದ ಬಿ. ಸಿಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ವಿಶಾಖಪಟ್ಟಣದ ಪಪ್ಪು ನಿಶಾಂತ್ ಎಂದು ಹೇಳಿದ್ದು ಆತ ಅಮಲಿನಲ್ಲಿರುವುದು ಕಂಡುಬಂದಿದೆ.
ಮಾದಕ ವಸ್ತು ಸೇವಿಸಿರುವ ಬಗ್ಗೆ ಅನುಮಾನದ ಮೇರೆಗೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದಕ ದ್ರವ್ಯ ಗಾಂಜಾ ಸೇವನೆ: ಇಬ್ಬರ ಬಂಧನ
ಉಡುಪಿ: ಮಾದಕ ದ್ರವ್ಯ ಗಾಂಜಾ ಸೇವನೆ ಪ್ರಕರಣ ಸಂಬಂಧ ಮಣಿಪಾಲ ಅಪರಾಧ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಮಣಿಪಾಲ ಠಾಣೆಯ ಎಎಸ್‌ಐ ವಿವೇಕಾನಂದ. ಬಿ. ಮತ್ತು ಸಿಬಂದಿ ರೌಂಡ್ಸ್‌ನಲ್ಲಿದ್ದಾಗ ಶಿವಳ್ಳಿ ಗ್ರಾಮದ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ದೇವಾಂಶ್ ಮಣಿಪಾಲ ಮತ್ತು ಕವಾಯ್ ಗೇರಾ ಎಂಬವರು ಅನುಮಾನಸ್ಪದವಾಗಿ ಅಮಲಿನಲ್ಲಿರುವುದು ಕಂಡುಬಂದಿದೆ. ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು ಗಾಂಜಾ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ
Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ
Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ
Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್
Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.