Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ
Team Udayavani, Nov 18, 2024, 10:10 PM IST
ಮಣಿಪಾಲ: ರೈಲು ಪ್ರಯಾಣದ ಸಂದರ್ಭ ಪ್ರಯಾಣಿಕರೋರ್ವರ ಒಡವೆ ಕಳವಾದ ಘಟನೆ ನ. 16ರಂದು ನಡೆದಿದೆ.
ಅವಿನಾಶ್ ಅವರು ನ. 15ರಂದು ಕುಟುಂಬದ ಸದಸ್ಯರೊಂದಿಗೆ ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಮುಂಬಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್ಕೇಸ್ಗಳನ್ನು ಬೀಗ ಹಾಕದೇ ಜಿಪ್ ಲಾಕ್ ಮಾಡಿ ಇಟ್ಟಿದ್ದು, ನ. 16ರಂದು ಇಂದ್ರಾಳಿ ನಿಲ್ದಾಣದಲ್ಲಿ ಇಳಿದು ಮನೆಗೆ ಹೋಗಿ ಸಂಜೆ ಬ್ಯಾಗ್ ತೆರೆದಾಗ 2 ಬ್ಯಾಗ್ಗಳಲ್ಲಿ ಇಟ್ಟಿದ್ದ 63 ಲಕ್ಷ ರೂ. ಬೆಲೆಬಾಳುವ 900 ಗ್ರಾಂ ಚಿನ್ನದ ಒಡವೆಗಳು ಕಳ್ಳತನವಾಗಿರುವುದು ಗೊತ್ತಾಗಿದೆ.
ಪ್ರಯಾಣದ ಮಧ್ಯೆ ಪನ್ವೇಲ್ನಿಂದ ಕಂಕಾವ್ಳಿ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರುವುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.