ಮನರೇಗಾ ಅನುದಾನ ಮೀಸಲು: ಕೇಂದ್ರ ಸ್ಪಷ್ಟನೆ
Team Udayavani, Feb 4, 2023, 6:35 AM IST
ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರೆ(ನರೇಗಾ) ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ 60,000 ಕೋಟಿ ರೂ. ಮೀಸಲಿಡಲಾಗಿದೆ. ಈ ಯೋಜನೆಗಾಗಿ 2022-23ನೇ ಸಾಲಿನ ಬಜೆಟ್‌ನಲ್ಲಿ 76,000 ಕೋಟಿ ರೂ. ಮೀಸಲಿರಿಸಲಾಗಿತ್ತು.
ಕಳೆದ ಸಾಲಿಗೆ ಹೋಲಿಸಿದರೆ ಈ ಸಾಲಿನಲ್ಲಿ ಅನುದಾನದಲ್ಲಿ ಶೇ.18ರಷ್ಟು ತಗ್ಗಿದೆ. ಇದರಿಂದ ಗ್ರಾಮೀಣ ಪ್ರದೇಶದವರ ಉದ್ಯೋಗದ ಮೇಲೆ ಹೊಡೆತ ಬೀಳಲಿದೆ ಎಂದು ಅನೇಕ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗೆ ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವಾಲಯ ಸ್ಟಷ್ಟನೆ ನೀಡಿದೆ.
ಅದರ ಪ್ರಕಾರ, 2014-15ರಿಂದ ಇಲ್ಲಿಯವರೆಗೂ ಬಜೆಟ್‌ನಲ್ಲಿ ಮೀಸಲಿಸಿರುವ ಅನುದಾನಕ್ಕಿಂತ ಹೆಚ್ಚಿನ ಅನುದಾನವನ್ನು ಮನರೇಗಾ ಯೋಜನೆಗೆ ಬಳಸಲಾಗಿದೆ. ಪ್ರಸಕ್ತ 2022-23ನೇ ಸಾಲಿನಲ್ಲಿ ಗ್ರಾಮೀಣ ಕುಟುಂಬಗಳಿಗೆ ಅವರ ಬೇಡಿಕೆಗೆ ಅನುಗುಣವಾಗಿ ಶೇ. 99.81ರಷ್ಟು ಉದ್ಯೋಗ ನೀಡಲಾಗಿದೆ.
ಕೇಂದ್ರದಿಂದ ಬಿಡುಗಡೆಯಾದ ಅನುದಾನ
ಹಣಕಾಸು ವರ್ಷ ಬಜೆಟ್‌ನಲ್ಲಿ ಮೀಸಲು(ಕೋಟಿ ರೂ.) ಪರಿಷ್ಕೃತ ಮೀಸಲು(ಕೋಟಿ ರೂ.) ಅನುದಾನ ಬಿಡುಗಡೆ(ಕೋಟಿ ರೂ.)
2018-19 55,000 61,830.09 61,829.55
2019-20 60,000 71,001.81 71,687.71
2020-21 61,500 1,11,500 1,11,170.86
2021-22 73,000 98,000 98,467.85
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.