ಬಿಜೆಪಿ ಸಂಪರ್ಕದಲ್ಲಿ ಕಾಂಗ್ರೆಸ್‌, ಜೆಡಿಎಸ್‌ನ ಹಲವು ಶಾಸಕರು : ಅರವಿಂದ ಲಿಂಬಾವಳಿ


Team Udayavani, Dec 3, 2019, 8:08 PM IST

aravind

ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ನ ಹಲವು ಶಾಸಕರು ಸಂಪರ್ಕದಲ್ಲಿದ್ದು, ಉಪಚುನಾವಣೆ ನಂತರ ರಾಜಕೀಯ ಬದಲಾವಣೆ ನಿಶ್ಚಿತ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ನ ಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಉಪಚುನಾವಣಾ ಉಸ್ತುವಾರಿ ಅರವಿಂದ ಲಿಂಬಾವಳಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಈಗಲೂ ಸಂಪರ್ಕದಲ್ಲಿದ್ದು, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ. ಸದ್ಯ ನಮಗೆ ಅಗತ್ಯವಿಲ್ಲ. ಆದರೆ ಬರುವವರನ್ನು ಬೇಡ ಎನ್ನಲಾಗದು. ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಲ್ಲ ಎನ್ನುವ ಮೂಲಕ ಉಪಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಗೆಲ್ಲಲಾಗದಿದ್ದರೆ ಮತ್ತಷ್ಟು ಶಾಸಕರನ್ನು ಸೆಳೆಯುವ ಪ್ರಯತ್ನವನ್ನು ಪರೋಕ್ಷವಾಗಿ ತಿಳಿಸಿದರು.

ಕೆಲ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲೂ ಇದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ನಮ್ಮ ಶಾಸಕರು ಕುಮಾರಸ್ವಾಮಿಯವರ ಸಂಪರ್ಕದಲ್ಲಿದ್ದರೆ ತೊಂದರೆ ಇಲ್ಲ. ನಮ್ಮ ಕಡೆ ಬರುತ್ತಾರೋ ಅವರ ಕಡೆ ಹೋಗುತ್ತಾರೋ ನೋಡೋಣ. ಡಿ.9ರ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ನ ಸ್ಥಿತಿ ಗಂಭೀರವಾಗಲಿವೆ.

ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ ಆ ಪಕ್ಷಗಳ ನಾಯಕರು ನೀಡಿರುವ ಗೊಂದಲದ ಹೇಳಿಕೆಗಳಿಂದ ಬಿಜೆಪಿಗೆ ಅನುಕೂಲವಾಗಲಿದೆಯೇ ಹೊರತು ಪ್ರತಿಕೂಲ ಪರಿಣಾಮ ಬೀರದು. ಇದಕ್ಕಾಗಿ ಆ ಪಕ್ಷಗಳ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇದೇ ಮೊದಲ ಬಾರಿಗೆ ಭಿನ್ನ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇನೆ. ಅವರೊಬ್ಬ ಅನುಭವಿ, ನುರಿತ ರಾಜಕಾರಣಿ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾದಾಗ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ.

ಕುಮಾರಸ್ವಾಮಿಯವರು ಅವಕಾಶವಾದಿತನದ ಹಿನ್ನೆಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ಮಾತನಾಡುತ್ತಾರೆ. ಆದರೆ ದೇವೇಗೌಡರು ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯ ತಂದಿದೆ. ಆ ನಾಯಕರ ಹೇಳಿಕೆಗಳಿಂದ ನಮ್ಮ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ಮುಕ್ತ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಕಾಂಗ್ರೆಸ್‌ ಮುಕ್ತವಾಗಬೇಕಾದರೆ ಅವರೆಲ್ಲಾ ಬರಲೇ ಬೇಕಲ್ಲ. ಅವರು ಜೆಡಿಎಸ್‌ಗೆ ಹೋಗಲು ಸಾಧ್ಯವಿಲ್ಲ. ನಮ್ಮ ಪಕ್ಷಕ್ಕೆ ಬರುವವರನ್ನು ನಾವು ನೆಂಟರಂತೆ ಕಾಣುವುದಿಲ್ಲ. ಬದಲಿಗೆ ಬರುವವರೆಲ್ಲಾ ಕುಟುಂಬದವರೇ ಎಂದು ಸೇರ್ಪಡೆ ಮಾಡಿಕೊಳ್ಳುತ್ತೇವೆ. ಹಾಗೆಂದು ಪಕ್ಷದ ಮೂಲ ನಾಯಕರು, ಮುಖಂಡರನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್‌, ಜೆಡಿಎಸ್‌ ನಾಯಕರು ರಾಜಕೀಯ ಹೇಳಿಕೆ ನೀಡುತ್ತಿದ್ದು, ನಾವು ಮುಖ್ಯಮಂತ್ರಿಯಾಗಬಹುದು ಎಂಬ ಆಸೆ ಕಾಂಗ್ರೆಸ್‌ ನಾಯಕರಲ್ಲಿ ಹುಟ್ಟುಕೊಂಡಿದೆ. ಬಿಜೆಪಿ ಸರ್ಕಾರ ಬೀಳಿಸಲು ಅವಕಾಶ ನೀಡುವುದಿಲ್ಲ ಎನ್ನುತ್ತಿದ್ದ ಜೆಡಿಎಸ್‌ ಮಹಾರಾಷ್ಟ್ರ ಬೆಳವಣಿಗೆ ಬಳಿಕ ರಾಗ ಬದಲಿಸಿತು. ಇದೀಗ ಉಭಯ ಪಕ್ಷಗಳು ಮೈತ್ರಿಯ ಮಾತುಗಳನ್ನಾಡುತ್ತಾ ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಿದವು. ಆದರೆ ಎರಡು ಪಕ್ಷಗಳ ನಾಯಕರೇ ಗೊಂದಲಕ್ಕೆ ಸಿಲುಕಿದಂತಾಗಿದೆ. ದಿನಕ್ಕೊಂದು ಹೇಳಿಕೆ ಬದಲಾಯಿಸುವ ಮೂಲಕ ಬಿಜೆಪಿಗೆ ಸಹಾಯ ಮಾಡಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಕೆಲವರೆಲ್ಲಾ ಹೊಸ ಬಟ್ಟೆ ಹೊಲಿಸಿಕೊಂಡು ಸಿದ್ದರಾಗುತ್ತಿದ್ದಾರೆ ಎಂಬ ಮಾತಿದೆ. ಅವರು ಇನ್ನು ಮೂರುವರೆ ವರ್ಷ ಕಾಲ ಆ ಬಟ್ಟೆಯನ್ನು ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರ ರಚಿಸುವದಾಗಿ ಹೇಳುವ ಉಭಯ ಪಕ್ಷಗಳ ನಾಯಕರಿಗೆ ರಾಜ್ಯಸಭಾ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗಿಲ್ಲ. 12 ಸ್ಥಾನ ಗೆಲ್ಲುವ ವಿಶ್ವಾಸವಿದ್ದಿದ್ದರೆ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಜನರನ್ನು ತಪ್ಪು ದಾರಿಗೆ ಎಳೆಯುವ ಸಲುವಾಗಿಯೇ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಕಾಂಗ್ರೆಸ್‌ನ ಉನ್ನತ ನಾಯಕರ ನಿಯೋಗ ಡಿ.6ರಂದು ವರಿಷ್ಠರನ್ನು ಭೇಟಿಯಾಗಲಿದೆ ಎಂಬ ಮಾಹಿತಿ ಇದೆ. ಇದು ನಿಜವಾಗಿದ್ದರೆ ಕಾಂಗ್ರೆಸ್‌ ಒಡೆದ ಮನೆ ಎಂಬುದರಲ್ಲಿ ಎರಡು ಮಾತಿಲ್ಲ. ಕಾಂಗ್ರೆಸ್‌ ಪರಿಸ್ಥಿತಿ ಹೀಗಿದ್ದರೆ ಉಪಚುನಾವಣೆ ಬಳಿಕ ಜೆಡಿಎಸ್‌ನ ಅನೇಕರು ಬಿಜೆಪಿ ಸೇರುತ್ತಾರೆ. ಈಗಾಗಲೇ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

School bag

ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.