ಮಾರಣಕಟ್ಟೆ ಮಕರ ಸಂಕ್ರಾಂತಿ ಉತ್ಸವ: “ಸೇವಂತಿಗೆ’ ಸೇವೆಗೆ ದಾಖಲೆ ಸಂಖ್ಯೆಯ ಭಕ್ತರು
Team Udayavani, Jan 16, 2024, 3:25 PM IST
ವಂಡ್ಸೆ: ಸೇವಂತಿಗೆ ಹೂಗಳನ್ನು ಬುಟ್ಟಿಗಳಲ್ಲಿ ತಲೆಯ ಮೇಲೆ ಹೊತ್ತು ದೇವರಿಗೆ ಹರಕೆಯ ರೂಪದಲ್ಲಿ ಸಮರ್ಪಿಸುವ ವಾಡಿಕೆ ಧಾರ್ಮಿಕ ಬದ್ಧತೆ ತಲಾತಲಾಂತರಗಳಿಂದಲೂ ನಡೆಯುತ್ತಾ ಬಂದಿದ್ದು, ಇಂದು ಕೂಡ ಪ್ರಚಲಿತವಾಗಿರುವುದು ಹಾಗೂ ಕ್ರಮಬದ್ಧವಾಗಿ ಚಾಚೂತಪ್ಪದೇ ಪಾಲಿಸುವ ಭಕ್ತರ ಸೇವಾ ಕೈಂಕರ್ಯ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.15ರಂದು ನಡೆದಿದೆ.
ಕಂಹಾಸುರ ಎಂಬ ರಾಕ್ಷಸನನ್ನು ಜಗಜ್ಜನನಿ ಮೂಕಾಂಬಿಕೆ ವಧಿಸಿದ ಸ್ಥಳ ಮಾರಣಕಟ್ಟೆ ಎಂಬುವುದು ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿರುವುದರಿಂದ ಕ್ಷೇತ್ರ ದರ್ಶನಕ್ಕೆ ಉಡುಪಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ 40 ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸಿರುವುದು ಇಲ್ಲಿನ ಧಾರ್ಮಿಕ ಶ್ರದ್ಧಾ ಭಕ್ತಿಯ ಪ್ರತೀಕವಾಗಿದೆ.
ಶಿಸ್ತುಬದ್ಧವಾಗಿ ಯಾವುದೇ ಲೋಪ ದೋಷವಾಗದಂತೆ ತಲೆಯ ಮೇಲೆ ಸೇವಂತಿಗೆ ಬುಟ್ಟಿ ಹೊತ್ತು ಸಾಗುತ್ತಿದ್ದ ಭಕ್ತರ ಸಾಲು ಉದ್ದಾನುದ್ದಕ್ಕೂ ಸುಮಾರು 2 ಕಿ.ಮೀ. ದೂರ ವ್ಯಾಪ್ತಿಯವರೆಗೆ ಸಾಗಿತ್ತು. ಸದ್ದುಗದ್ದಲವಿಲ್ಲದೇ ಭಯ ಭಕ್ತಿಯಿಂದ ದೇವರ ಸೇವೆಗೆ ವಿವಿಧ ಜಿಲ್ಲೆಗಳಿಂದ ಮುಖ್ಯವಾಗಿ ಉಡುಪಿ ತಾಲೂಕಿನಿಂದ ಆಗಮಿಸಿದ ಭಕ್ತರು ಸೇವೆಯ ಮಹತ್ವವನ್ನು ಸಾರಿದರು.
ಮಹಾಮಂಗಳಾರತಿ, ಕೆಂಡಸೇವೆ
ಅಪಾರ ಭಕ್ತರ ಸಮ್ಮುಖದಲ್ಲಿ ಮಹಾಮಂಗಳಾರತಿ ಹಾಗೂ ರಾತ್ರಿ ಕೆಂಡಸೇವೆ ನಡೆಯಿತು. ದೇಗುಲದ ಆಡಳಿತ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ ಅವರ ನೇತೃತ್ವದಲ್ಲಿ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.
ಜ. 16, 17: ಮಂಡಲ ಸೇವೆ
ದೇಗುಲದಲ್ಲಿ ಜ.16 ಹಾಗೂ 17 ರಂದು ಮಂಡಲ ಸೇವೆ ನಡೆಯಲಿದ್ದು, 17ರಂದು ರಾತ್ರಿ ಕಡಬು ನೈವೇದ್ಯ, ಮಹಾಮಂಗಳಾರತಿ, ಮಾರಣಕಟ್ಟೆ ದೇಗುಲದ ಯಕ್ಷಗಾನ ತಂಡದಿಂದ ಯಕ್ಷಗಾನ ಸೇವೆ ಆಟ ನಡೆಯಲಿದೆ.
ಭಕ್ತರ ಆರಾಧ್ಯ ಕ್ಷೇತ್ರ
ಧನು ಸಂಕ್ರಮಣದಂದು ಕ್ಷೇತ್ರದ ಚಿಕ್ಕು ದೇವರ ಪಾತ್ರಿ ಇಲ್ಲಿನ ಚಕ್ರಾ ಉಪನದಿಯನ್ನು ದಾಟಿ ತುಳುನಾಡಿನ ಭಕ್ತರ ಮನೆಯಲ್ಲಿ ದರ್ಶನ ಮಾಡುತ್ತಾ ಕೊನೆಗೆ ಮಕರ ಸಂಕ್ರಮಣದಂದು ಕ್ಷೇತ್ರಕ್ಕೆ ಆಗಮಿಸುವ ಪದ್ಧತಿ ಇಂದೂ ಕೂಡ ಮುಂದುವರಿದಿದೆ. ಆನುವಂಶೀಯ ಮೊಕ್ತೇಸರರ ಉಪಸ್ಥಿತಿಯಲ್ಲಿ ವಾಕ್ ತೀರ್ಮಾನದಲ್ಲಿ ಭಾಗವಹಿಸಿ ಹರಕೆಯನ್ನು ಸಲ್ಲಿಸಿ ದೇವರ ಉತ್ಸವದಲ್ಲಿ ಭಾಗಿಯಾಗುವುದು ಪದ್ಧತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.