ಮರವಂತೆಯ ಕರಾವಳಿ ಮಾರ್ಗ ತಾತ್ಕಾಲಿಕ ದುರಸ್ತಿ
Team Udayavani, May 24, 2021, 10:00 PM IST
ಉಪ್ಪುಂದ: ಚಂಡ ಮಾರುತದ ಪರಿಣಾಮ ಕಡಲ್ಕೊರೆತ ಉಂಟಾಗಿ ಸಂಪರ್ಕ ಕಡಿತಗೊಂಡ ಮರವಂತೆ ಕರಾವಳಿ ಮಾರ್ಗದ ತಾತ್ಕಾಲಿಕ ದುರಸ್ತಿ ಕಾಮಗಾರಿ ಈಗ ಭರದಿಂದ ಸಾಗಿದೆ. ಇನ್ನು ಒಂದು ವಾರದಲ್ಲಿ ಕೆಲಸ ಮುಗಿದು, ಜನ, ವಾಹನ ಸಂಚಾರ ಸುಗಮವಾಗಲಿದೆ.
ಮರವಂತೆಯಲ್ಲಿ ಅರ್ಧದಲ್ಲಿ ಸ್ಥಗಿತವಾಗಿರುವ ಮೀನುಗಾರಿಕಾ ಹೊರಬಂದರಿನ ಉತ್ತರ ತಡೆಗೋಡೆಯ ಉತ್ತರ ದಿಕ್ಕಿನ ತೀರದಲ್ಲಿ ಕಡಲ್ಕೊರೆತ ಸಂಭವಿಸಿತ್ತು. ಅದರ ಬೆನ್ನಲ್ಲಿ, ಕಳೆದ ವಾರ ಅಪ್ಪಳಿಸಿದ ಚಂಡಮಾರುತದ ಪರಿಣಾಮವಾಗಿ ಸುಮಾರು 350 ಮೀ. ಉದ್ದ, 50 ಮೀ. ಅಗಲದ ಭೂಭಾಗ, ನೂರಾರು ತೆಂಗಿನ ಮರಗಳು, ಹತ್ತಾರು ಮೀನುಗಾರಿಕಾ ಶೆಡ್‌ಗಳು ಕಡಲ ಪಾಲಾದುವು. ಅಷ್ಟೇ ಉದ್ದದ ಕಾಂಕ್ರೀಟ್ ರಸ್ತೆಯೂ ಛಿದ್ರಗೊಂಡಿತು. ಅದರೊಂದಿಗೆ ಮೀನುಗಾರರ ವಸತಿ ಪ್ರದೇಶದ ಏಕೈಕ ಸಂಪರ್ಕದ ಕೊಂಡಿ ಕಡಿತಗೊಂಡಿತು. ತೆರೆಗಳಿಗೆ ಒಂದು ಹಂತದ ತಡೆಯಾಗಿದ್ದ ರಸ್ತೆ ಕುಸಿದ ಕಾರಣ ತೆರೆಗಳು ತೀರದ ಮನೆಗಳಿಗೆ ನುಗ್ಗಲಾರಂಭಿಸಿತ್ತು. ದಿಕ್ಕು ತೋಚದಂತಾದ ಮೀನುಗಾರರು ತಾವೇ ಶ್ರಮ ವಹಿಸಿ, ಕಲ್ಲು, ಮರಳಿನ ಚೀಲಗಳ ತಡೆ ನಿರ್ಮಿಸಿ ಮನೆಗಳಿಗೆ ಹಾನಿಯಾಗುವುದನ್ನು ದೂರ ಮಾಡಿದರು.ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮತ್ತು ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಿದ ಮರುದಿನದಿಂದಲೇ ರಸ್ತೆ ಸಂಪರ್ಕ ಮರುಸ್ಥಾಪಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅದರಂತೆ ಈಗ ಇಲ್ಲಿ ಕುಸಿದು ಹೋದ ರಸ್ತೆಯ ಪಶ್ಚಿಮ ಮಗ್ಗುಲನ್ನು ಕಲ್ಲುಗಳಿಂದ ರಕ್ಷಿಸಿ, ಒಳಭಾಗದಲ್ಲಿ ಮರಳು ಮತ್ತು ಮಣ್ಣು ಸುರಿದು ಕಚ್ಚಾ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಈ ಪ್ರದೇಶದ ಸಮೀಪದ ಮಾರಸ್ವಾಮಿ ಎಂಬಲ್ಲಿ ಹೆದ್ದಾರಿ ರಕ್ಷಣೆಗೆ ರಚಿಸಿದ ಸುಸ್ಥಿರ ಕಡಲತೀರ ನಿರ್ವಹಣ ಯೋಜನೆ ಮಾದರಿಯ ಅಲೆ ತಡೆಗೋಡೆಗಳನ್ನು ನಿರ್ಮಿಸಬೇಕು ಎಂದು ಮೀನುಗಾರರು ಸಚಿವರು ಮತ್ತು ಶಾಸಕರಲ್ಲಿ ಆಗ್ರ ಹಿಸಿದ್ದಾರೆ.
ಶೀಘ್ರ ಶಾಶ್ವತ ಕಾಮಗಾರಿ
ಮರವಂತೆ ಕರಾವಳಿಯಲ್ಲಿ ಕಡಿತಗೊಂಡ ಸಂಪರ್ಕ ಮರುಸ್ಥಾಪನೆಗೆ ತತ್‌ಕ್ಷಣ ತಾತ್ಕಾಲಿಕ ಪರಿಹಾರ ಕಲ್ಪಿಸಲಾಗಿದೆ. ಬೈಂದೂರು ಕ್ಷೇತ್ರದ ವಿವಿಧೆಡೆ ಸಂಭವಿಸಿದ ಕಡಲ್ಕೊರೆತ ತಡೆಗೂ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಎಲ್ಲ ಕಡೆಗಳಲ್ಲಿ ಮಳೆಗಾಲದ ಬಳಿಕ ಶಾಶ್ವತ ಕಾಮಗಾರಿ ನಡೆಸಲಾಗುವುದು.
-ಬಿ. ಎಂ. ಸುಕುಮಾರ್ ಶೆಟ್ಟಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.