ಮಾರ್ಚ್ 2ನೇ ವಾರದಲ್ಲಿ 7ನೇ ಮೌಲ್ಯಾಂಕನ ಪರೀಕ್ಷೆ
Team Udayavani, Jan 30, 2020, 6:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 2ನೇ ವಾರದಲ್ಲಿ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್ಎಟಿಎಸ್)ಯಲ್ಲಿ ನಮೂದಿಸಲಾಗಿರುವ ವಿದ್ಯಾರ್ಥಿಗಳ ಮಾಹಿತಿಗೆ ಅನುಗುಣವಾಗಿ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ. ಮೌಲ್ಯಾಂಕನ ಪರೀಕ್ಷೆ ಸಂಬಂಧ ಶಾಲೆಯ ಮಾಧ್ಯಮ, ಭಾಷಾ ಸಂಯೋಜನೆ, ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಮತ್ತು ಎಸ್ಎಟಿಎಸ್ನಲ್ಲಿ ನೀಡಲಾಗಿರುವ ಇನ್ನಿತರ ವಿವರಗಳನ್ನು ಫೆ. 5ರೊಳಗೆ ಕಡ್ಡಾಯವಾಗಿ ಅಪ್ಡೇಟ್ ಮಾಡುವಂತೆ ಆಯಾ ಶಾಲಾ ಮುಖ್ಯ ಶಿಕ್ಷಕರು ಮತ್ತು ಎಲ್ಲ ಹಂತದ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.
ಫೆ.5ರ ಅನಂತರ ಎಸ್ಎಟಿಎಸ್ನಲ್ಲಿ ಅಪ್ಡೇಟ್ ಮಾಡಲಾದ ಯಾವುದೇ ಮಾಹಿತಿಯನ್ನೂ ಪರಿಗಣಿಸಲಾಗುವುದಿಲ್ಲ. ಎಸ್ಎಟಿಎಸ್ನಲ್ಲಿರುವ ಮಾಹಿತಿ ಆಧರಿಸಿಯೇ ಪ್ರಶ್ನೋತ್ತರ ಪತ್ರಿಕೆಗಳನ್ನು ಮುದ್ರಿಸಿ ಶಾಲೆಗಳಿಗೆ ಸರಬರಾಜು ಮಾಡಲಾಗುವುದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಿಗೆ ಸೂಕ್ತ ಮಾಹಿತಿ ಒದಗಿಸಿ ಫೆ.5ರೊಳಗೆ ಶಾಲೆಯ ಎಲ್ಲ ಮಾಹಿತಿಯನ್ನೂ ಅಪ್ಡೇಟ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.