ಹಾರ-ತುರಾಯಿ ಹಾಕಲು ಜೆಸಿಬಿ-ಕ್ರೇನ್ ಬಳಕೆ ನಿಷೇಧಿಸಿ
Team Udayavani, Feb 16, 2023, 5:40 AM IST
ಬೆಂಗಳೂರು: ವಿವಿಧ ಸಭೆ-ಸಮಾರಂಭಗಳಲ್ಲಿ ಗಣ್ಯ ವ್ಯಕ್ತಿಗಳು ಮತ್ತು ರಾಜಕಾರಣಿಗಳಿಗೆ ಹಣ್ಣು -ಹೂವು, ತರಕಾರಿ ಹಾರಗಳನ್ನು ಹಾಕಲು ಜೆಸಿಬಿ-ಕ್ರೇನ್ ಬಳಕೆಯನ್ನು ನಿಷೇಧಿಸಬೇಕೆಂದು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.
ಬುಧವಾರ ಕಲಾಪದ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾವಿಸಿದ ಮರಿತಿಬ್ಬೇಗೌಡ, ಸಮಾರಂಭ, ಮನರಂಜನೆ, ಜಾತ್ರೆ, ಮೆರವಣಿಗೆ ಮತ್ತು ಖಾಸಗಿ ಹಾಗೂ ವಿವಿಧ ಧಾರ್ಮಿಕ ಸಮಾರಂಭಗಳಲ್ಲಿ ಗಣ್ಯ ವ್ಯಕ್ತಿಗಳಿಗೆ ಹಾಗೂ ರಾಜಕಾರಣಿಗಳಿಗೆ ಅಭಿಮಾನಿಗಳು ಜೆಸಿಬಿ ಮತ್ತು ಕ್ರೇನ್‌ಗಳನ್ನು ಅನಧಿಕೃತವಾಗಿ ಬಳಸಿ ದಟ್ಟ ಜನಸಂದಣಿಯಲ್ಲಿ ಜೆಸಿಬಿ-ಕ್ರೇನ್‌ಗಳ ಮೇಲೆ ನಿಂತು ಅಲ್ಲಿಂದ ಹೂವು ಚೆಲ್ಲುವುದು, ಸೇಬು, ಮೂಸಂಬಿ, ಕಿತ್ತಲೆ ಇನ್ನಿತರ ಹಣ್ಣುಗಳಿಂದ ತಯಾರಿಸಿದ ದೊಡ್ಡ ಹಾರ-ತುರಾಯಿಗಳನ್ನು ಹಾಕುತ್ತಾರೆ.
ಜೆಸಿಬಿ-ಕ್ರೇನ್ ದುರ್ಬಳಕೆಯಿಂದ, ಅವಘಡಗಳು ಸಂಭವಿಸುತ್ತಿದೆ. ಜತೆಗೆ, ನಗರ ಮತ್ತು ಪಟ್ಟಣ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ ಇದೇ ರೀತಿಯ ದೊಡ್ಡ ಗಾತ್ರದ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಹಾಕುವುದರಿಂದ ಸಂಘರ್ಷಗಳು, ಅಪಘಾತಗಳು ಹಾಗೂ ಪರಿಸರ ಮಾಲಿನ್ಯದಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸರಕಾರಿ ಆದೇಶ ಹೊರಡಿಸಿ ಎಂದು ಆಗ್ರಹಿಸಿದರು.
ಮುಖ್ಯಮಂತ್ರಿಯವರಿಂದ ಇದಕ್ಕೆ ಉತ್ತರ ಕೊಡಿಸುವುದಾಗಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.