ಮಸ್ಕಿ ಪೊಲೀಸರ ಕಾರ್ಯಾಚರಣೆ : ನಾಲ್ವರು ಕಳ್ಳರ ಸಹಿತ 4 ಲಕ್ಷ ಮೌಲ್ಯದ ಮೊಬೈಲ್, ಬೈಕ್ ಜಪ್ತಿ
Team Udayavani, Aug 7, 2021, 5:57 PM IST
ಮಸ್ಕಿ: ಮಸ್ಕಿ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ ಮಸ್ಕಿ ಠಾಣೆ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4,06,944 ರೂ. ಮೌಲ್ಯದ ಮೊಬೈಲ್ ಮತ್ತು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಮಸ್ಕಿ ಪಟ್ಟಣದ ಹಳೆ ಬಸ್‌ನಿಲ್ದಾಣದ ಬಳಿ ಇದ್ದ ಕಿರಣ್ ಮೊಬೈಲ್ಸ್ ಅಂಗಡಿ ಇತ್ತೀಚೆಗೆ ಕಳ್ಳತನವಾಗಿತ್ತು. ಅಲ್ಲಿರುವ ಲಕ್ಷಾಂತರ ಮೌಲ್ಯದ ಸ್ಮಾರ್ಟ್ಫೋನ್, ಸಿಸಿಟಿವಿ ಸಹಿತ ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ಮಸ್ಕಿ ಸಿಪಿಐ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚನೆ ಮಾಡಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ವೀರೇಶ ಅಲಿಯಾಸ್ ಗುಂಡಗಿ, ಬಸವರಾಜ ಜಾಲಗಾರ, ಪ್ರಕಾಶ ಪೋತ್ನಾಳ, ರಾಜಶೇಖರ ಸುಂಕನೂರು ಎನ್ನುವ ಆರೋಪಿಗಳನ್ನು ಬಂಧಿಸಲಾಗಿದೆ.
ಬಂದಿರೆಲ್ಲರೂ ಮಸ್ಕಿ ಪಟ್ಟಣದ ನಿವಾಸಿಗಳಾಗಿದ್ದು, ವಿಚಾರಣೆ ಬಳಿಕ ಇವರು ಕೇವಲ ಮೊಬೈಲ್ ಅಂಗಡಿ ಕಳ್ಳತನದ ಮಾತ್ರವಲ್ಲದೇ, ಎರಡು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಡಿವೈಎಸ್ಪಿ ಎಸ್.ಎಸ್.ಹುಲ್ಲೂರು ತಿಳಿಸಿದ್ದು, ಬಂಧಿತರಿಂದ ಒಟ್ಟು 3,೧೬,೯೪೪ ಮೌಲ್ಯದ ಮೊಬೈಲ್ ಫೋನ್, ೫೦ಸಾವಿರ ಮೌಲ್ಯದ ಎಚ್‌ಎಫ್ ಡಿಲಕ್ಸ್, ೪೦ಸಾವಿರ ರೂ. ಮೌಲ್ಯದ ಹೋಂಡಾ ಶೈನ್ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣ ಪತ್ತೆ ಹಚ್ಚಿದ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಪ್ರಶಂಶಿಸಿದ್ದಾರೆ ಎಂದು ಡಿವೈಎಸ್ಪಿ ತಿಳಿಸಿದ್ದಾರೆ.
ಇದನ್ನೂ ಓದಿ :ಬಂಗಾರದ ಬರ ನೀಗಿಸಿದ ನೀರಜ್: ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.