Rajya Sabha: ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಅಸ್ತು
Team Udayavani, Dec 13, 2023, 11:16 PM IST
ನವದೆಹಲಿ: ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ವಿಧೇಯಕವು ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು. ಧ್ವನಿ ಮತದೊಂದಿಗೆ “ಕೇಂದ್ರೀಯ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕ, 2023” ಅನ್ನು ಮೇಲ್ಮನೆಯಲ್ಲಿ ಅಂಗೀಕಾರಿಸಲಾಯಿತು.
ಇದೇ ವೇಳೆ, ಹಳತಾದ ಹಾಗೂ ಬಳಕೆಯಲ್ಲಿ ಇಲ್ಲದ 76 ಕಾನೂನುಗಳನ್ನು ರದ್ದುಪಡಿಸಲು ಸಲುವಾಗಿ ಮಂಡಿಸಿರುವ “ರದ್ದತಿ ಮತ್ತು ತಿದ್ದುಪಡಿ ವಿಧೇಯಕ, 2023” ಧ್ವನಿಮತದೊಂದಿಗೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು.
ಇನ್ನೊಂದೆಡೆ, ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರ ವಯೋಮಿತಿ ಹೆಚ್ಚಳ ನಿಟ್ಟಿನಲ್ಲಿ “ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ), 2023” ವಿಧೇಯಕವನ್ನು ಲೋಕಸಭೆಯಲ್ಲಿ ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು.
ಇದೇ ವೇಳೆ, ಬಜೆಟ್‌ನಲ್ಲಿ ಘೋಷಿಸಲಾದ ಕಸ್ಟಮ್ಸ್ ಮತ್ತು ಅಬಕಾರಿ ಸುಂಕದಲ್ಲಿ ಬದಲಾವಣೆಗಾಗಿ “ತಾತ್ಕಲಿಕ ತೆರಿಗೆಗಳ ಸಂಗ್ರಹ ವಿಧೇಯಕ, 2023” ಅನ್ನು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.