ಮೇ 31-ಜೂ. 4: ಮೀನುಗಾರಿಕೆ ನಿಷೇಧ
ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ
Team Udayavani, May 31, 2020, 6:36 AM IST
ಮಂಗಳೂರು/ಉಡುಪಿ: ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಜೂ. 14ರ ವರೆಗೆ ಕೇಂದ್ರ ಸರಕಾರ ಮುಂದೂಡಿದರೂ ಅದರ ಪ್ರಯೋಜನ ಮೀನುಗಾರರಿಗೆ ಸಿಗುವುದು ಅನುಮಾನ.
ಮೇ 31ರಿಂದ ಜೂ. 4ರ ವರೆಗೆ ಅರಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕಾ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿಷೇಧ ಅವಧಿಯನ್ನು ಪರಿಷ್ಕರಿ ಸಿದ್ದು, ಅದರಂತೆ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆಯನ್ನು ಜೂ. 15ರಿಂದ ಜು. 31ರ ವರೆಗೆ (ಉಭಯದಿನಗಳು ಸೇರಿ) ಒಟ್ಟು 47 ದಿನಗಳ ನಿಷೇಧವನ್ನು ಹೇರಿ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.