ಖಾಸಗಿಯವರೊಂದಿಗೆ ಪೈಪೋಟಿ ನಡೆಸಿ ಮುನ್ನುಗ್ಗುತ್ತಿರುವ ಎಂಸಿಎ: ಸಿಎಂ ಶ್ಲಾಘನೆ

Team Udayavani, Jan 4, 2023, 10:58 PM IST

tdy-48

ಬೆಂಗಳೂರು: ಮಾರ್ಕೆಟಿಂಗ್‌ ಕಮ್ಯೂನಿಕೇಶನ್‌ ಆ್ಯಂಡ್‌ ಅಡ್ವರ್ಟೈಸ್‌ಮೆಂಟ್‌ ಸಂಸ್ಥೆ ಖಾಸಗಿಯವರೊಂದಿಗೆ ಪೈಪೋಟಿ ನಡೆಸಿ ಮುನ್ನುಗ್ಗುತ್ತಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾ ಸಿದರು.

ಸಂಪರ್ಕ, ಸಂವಹನ, ಸೃಜನಶೀಲ ಸೇವೆಯಲ್ಲಿ ಐವತ್ತು ವರ್ಷ ಸೇವೆ ಪೂರೈಸಿದ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಅಂಡ್‌ ಅಡ್ವರ್ಟೈಸ್‌ಮೆಂಟ್‌ ಲಿಮಿಟೆಡ್‌ನ‌ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಒಂದು ಸಂಸ್ಥೆಗೆ ಐವತ್ತು ವರ್ಷ ಆಗುವುದು ಮಹತ್ವದ ಘಟ್ಟ. ಈ ಐವತ್ತು ವರ್ಷದಲ್ಲಿ ಎಂಸಿಎ ತನ್ನದೇ ಆದ ವಿಶೇಷ ರೀತಿಯಲ್ಲಿ ಸೇವೆ ಸಲ್ಲಿಸಿದೆ ಎಂದು ಹೇಳಿದರು.

ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ತಂತ್ರಜ್ಞಾನವೂ ಬದಲಾಗಿದೆ. ಒಂದು ಸರಕಾರಿ ಸಂಸ್ಥೆ ವಾಣಿಜ್ಯೋದ್ಯಮ ವ್ಯವಹಾರ ಮಾಡುವುದು ಸವಾಲಿನ ಕೆಲಸ. ಎಂಸಿಎ ಖಾಸಗಿಯವರೊಂದಿಗೆ ಪೈಪೋಟಿ ನಡೆಸಿ ಮುನ್ನುಗ್ಗುತ್ತಿರುವುದು ಹೆಮ್ಮೆಯ ವಿಷಯ. 1990ರಲ್ಲಿ ಖಾಸಗಿಕರಣ, ಉದಾರಿಕರಣ, ಜಾಗತೀಕರಣವಾಗಿ ಎಲ್ಲವೂ ಬದಲಾಯಿತು. ಸರಕಾರಿ ವ್ಯವಸ್ಥೆಯಲ್ಲಿ ಸರಿಯಾಗಿ ಕೆಲಸ ಮಾಡದಿ¨ªಾಗ ಖಾಸಗಿಯವರ ಮೇಲೆ ವಿಶ್ವಾಸ ಹೆಚ್ಚುತ್ತದೆ. ಒಂದು ಸಂಸ್ಥೆ ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೂ ಅನುಕೂಲವಾಗಲಿದೆ. ಹೊಸ ಹೊಸ ತಂತ್ರಜ್ಞಾನ ಬಂದಿದೆ. ಮಾರ್ಕೆಟಿಂಗ್‌ ವ್ಯವಸ್ಥೆ ಬದಲಾಗಿದೆ ಎಂದು ಹೇಳಿದರು. ನನಗೂ ಎಂಸಿಎ ಜತೆ ಸಾಕಷ್ಟು ಸಂಬಂಧ ಇದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನೀರಾವರಿ ಸಚಿವ, ಗೃಹ ಸಚಿವ, ಕಾನೂನು ಸಚಿವನಾಗಿ ಸಾಕಷ್ಟು ಕ್ರಿಯೆಟಿವ್‌ ಜಾಹೀರಾತು ಮಾಡಿಸಿದ್ದೇನೆ ಎಂದು ಸ್ಮರಿಸಿದರು.

ಎಂಸಿಎ ನೂತನ ಲಾಂಛನ ಅನಾವರಣ ಜತೆಗೆ ಸುವರ್ಣ ಮಹೋತ್ಸವದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ರಾಜ್ಯ ಸರಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಅಡ್ವಟೈìಸಿಂಗ್‌ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ. ಸಂಸ್ಥೆಯು ರಾಜ್ಯ ಸರಕಾರದ ಎಲ್ಲ ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಕೇಂದ್ರ ಸರಕಾರದ ಕೆಲ ಇಲಾಖೆಗಳ ಯೋಜನೆಗಳು, ಕಾರ್ಯಕ್ರಮಗಳು ಸೇರಿ ಇನ್ನಿತರ ವಿಷಯಗಳ ಕುರಿತು ಜಾಹೀರಾತು ಸಿದ್ಧಪಡಿಸಿ ಎಲ್ಲ ಬಗೆಯ ಮಾಧ್ಯಮಗಳಲ್ಲಿ ಪ್ರಚುರಪಡಿಸುವ ಕೆಲಸ ಮಾಡುತ್ತಿದೆ. ಕಳೆದ 5 ದಶಕಗಳಿಂದ ತನ್ನ ಕಾರ್ಯವನ್ನು ಯಶಸ್ವಿಯಾಗಿ ಮತ್ತು ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

ಸಂಸ್ಥೆಯು ಆರಂಭದಲ್ಲಿ ಕೆಲವೇ ಕೆಲ ಗ್ರಾಹಕರನ್ನು ಹೊಂದಿತ್ತು. ಆದರೀಗ 350ಕ್ಕೂ ಹೆಚ್ಚಿನ ಗ್ರಾಹಕರು, 400ಕ್ಕೂ ಹೆಚ್ಚಿನ ವೆಂಡರ್‌ಗಳನ್ನು ಹೊಂದಿದ್ದು ನೂರಾರು ಕೋಟಿ ರೂ. ವಹಿವಾಟು ಮಾಡುತ್ತಿದೆ. ಇದು ಸಂಸ್ಥೆಯ ಪ್ರಗತಿ ಹಾಗೂ ಕಾರ್ಯವೈಖರಿಗೆ ನಿದರ್ಶನವಾಗಿದೆ. ಸರಕಾರದ ಎಲ್ಲ ಇಲಾಖೆಗಳು ಇದೇ ರೀತಿ ಕಾರ್ಯನಿರ್ವಹಿಸಿದರೆ ರಾಜ್ಯವು ದೇಶದಲ್ಲೇ ಪ್ರಗತಿಪರ ಹಾಗೂ ಸಂಪದ್ಭರಿತ ರಾಜ್ಯವಾಗಲಿದೆ ಎಂದು ತಿಳಿಸಿದರು.

ಸ್ಮರಣ ಸಂಚಿಕೆ ಬಿಡುಗಡೆ:

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿಶೇಷ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಮಂಗಳೂರು ಸೇರಿದಂತೆ ಐದು ಕಡೆ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ವರ್ಚುಯಲ್‌ ಮೂಲಕ ಶಂಕು ಸ್ಥಾಪನೆ ನೆರವೇರಿಸಿರು.

406.03 ಕೋಟಿ ರೂ. ವಹಿವಾಟು ದಾಖಲೆ : 

1972-73ನೇ ಹಣಕಾಸು ವರ್ಷದಲ್ಲಿ ರೂ.78,747 ರೂ. ವಹಿವಾಟು ನಡೆಸುವುದರ ಮೂಲಕ ಶುಭಾರಂಭ ಮಾಡಿದ ಎಂಸಿಎ ಸಂಸ್ಥೆಯು ಕೇವಲ ಮೂರು ವರ್ಷಗಳಲ್ಲಿ ಅಂದರೆ 1975ರ ಮಾರ್ಚ್‌ ವೇಳೆಗೆ ರೂ. 20.31 ಲಕ್ಷ ವಹಿವಾಟು ನಡೆಸಿ ದಾಖಲೆ ಮಾಡಿದೆ. 2021-22 ನೇ ಹಣಕಾಸು ವರ್ಷದಲ್ಲಿ 406.03 ಕೋಟಿ ರೂ. ವಹಿವಾಟು ನಡೆಸಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.