ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಸಭೆ
Team Udayavani, Sep 16, 2019, 3:36 PM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ ಹಾಗೂ ಶಿವಮೊಗ್ಗ ಕ್ಷೇತ್ರದ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸೋಮವಾರ ಸಭೆ ನಡೆಯಿತು.
ಸಭೆಯಲ್ಲಿ ಪ್ರಸ್ತಾಪವಾಗಿರುವ ಪ್ರಮುಖ ಅಂಶಗಳು
– ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು ಖಾಸಗಿ ಕಂಪನಿಗಳ ಜೊತೆಗೂಡಿ ಹೆಚ್ಚಿನ ಟವರ್ ಗಳನ್ನು ಮಲೆನಾಡು ಭಾಗದಲ್ಲಿನ ನಿರ್ಮಾಣ ಮಾಡಬೇಕು.
– ಮಲೆನಾಡು ಭಾಗದಲ್ಲಿ ಹೆಚ್ಚಿನ ಭಾಗದಲ್ಲಿ ಬಿಎಸ್ ಎನ್ ಎಲ್ ಇದ್ದು ಖಾಸಗಿ ಕಂಪನಿಗಳು ಜೊತೆಗೂಡಬೇಕು ಇದರಿಂದ ಬೆಂಗಳೂರಿನಿಂದ ರಜೆ ಸಂದರ್ಭದಲ್ಲಿ ಬರುವ ಯುವಕರಿಗೆ ಸಹಾಯವಾಗಲಿದೆ.
-ಈ ಸಂದರ್ಭದಲ್ಲಿ ಹಾಜರಿದ್ದ ಖಾಸಗಿ ಟೆಲಿಕಾಮ್ ಕಂಪನಿಗಳಿಗೆ ಮಲೆನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್‌ವರ್ಕ್ ಸಮಸ್ಯೆ ತಲೆದೂರುದಂತೆ ಟವರ್ ಗಳನ್ನು ಅಳವಡಿಸಬೇಕು ಹಾಗು ಇದಕ್ಕೆ ಬೇಕಾದ ನೆರವನ್ನು ನೀಡಲು ಸಿದ್ದ ಅಂತ ಕಂಪನಿಗಳಿಗೆ ಭರವಸೆ ನೀಡಲಾಯಿತು.
– ತುಮಕೂರು -ಶಿವಮೊಗ್ಗ ಹೈವೇ ಯೋಜನೆಗೆ ತೊಡಕಾಗಿರೋ ತುಮಕೂರು ಪಟ್ಟಣದ ಭೂ ಸ್ವಾದೀನ ಪ್ರಕ್ರಿಯೆಗೆ ಇದ್ದ ಸಮಸ್ಯೆಗಳನ್ನು ಬಗೆಹರಿಸಲಾಯಿತು .
-ಹೈವೆ ಯಲ್ಲಿ ಹಾದು ಹೋಗುವ ಜಾಗದಲ್ಲಿರೋ ಕರೆಗಳನ್ನು ಹೂಳೆತ್ತಿ ಅದರ ಮಣ್ಣನ್ನು ರಸ್ತೆ ನಿರ್ಮಾಣ ಕ್ಕೆ ಬಳಸಿಕೊಳ್ಳಲು ತೀರ್ಮಾನ ಮಾಡಲಾಯಿತು.
-ಹೈವೇ ನಿರ್ಮಾಣ ಕಾಮಗಾರಿಗಳುನ್ನು ತ್ವರಿತವಾಗಿ ಮುಗಿಸಲು ಹೆಚ್ಚಿನ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
-ಇನ್ನು ಸಿಗಂಧೂರು ಸೇತುವೆ ನಿರ್ಮಣ ಒಟ್ಟು ಉದ್ದ 2.4 ಕಿಲೋಮೀಟರ್ ಇದ್ದು ಈ ಸೇತುವೆಯನ್ನು ಪ್ರವಾಸಿ ತಾಣಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಆದಷ್ಟು ಬೇಗ ಕೆಲಸ ಆರಂಭ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
-ಶಿವಮೊಗ್ಗ ಸುತ್ತ ಉದ್ದೇಶಿಸಲಾಗಿರೋ 2 ಲೈನ್ ರಿಂಗ್ ರಸ್ತೆಗೆ ಸಂಬಂಧಿಸಿದಂತೆ ಇದ್ದ ರೈಲ್ವೇ ಭೂಸ್ವಾಧೀನಕ್ಕೆ ಇದ್ದ ಸಮಸ್ಯೆ ಬಗೆಹರಿಸಲಾಯಿತು. ಆದಷ್ಟು ಬೇಗ ರಿಂಗ್ ರಸ್ತೆ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.