Melkar: ಟ್ರಯರ್‌ಗೆ ಕೊಂಡು ಹೋದ ದ್ವಿಚಕ್ರ ವಾಹನ ವಂಚನೆ
Team Udayavani, Aug 22, 2024, 9:05 PM IST
ಬಂಟ್ವಾಳ: ಮೆಲ್ಕಾರಿನ ಸೆಂಕೆಡ್ ಹ್ಯಾಂಡ್ ವಾಹನಗಳ ಮಾರಾಟದ ಮಳಿಗೆಯಿಂದ ವ್ಯಕ್ತಿಯೋರ್ವ ದ್ವಿಚಕ್ರ ವಾಹನವನ್ನು ಟ್ರಯಲ್ ನೋಡಲು ತೆಗೆದುಕೊಂಡು ಹೋಗಿ ಮರಳಿ ಬಾರದೆ ವಂಚಿಸಿದ ಘಟನೆ ನಡೆದಿದೆ.
ಪುದು ಗ್ರಾಮದ ನಿವಾಸಿ ಮಹಮ್ಮದ್ ಶಮೀರ್ ಅವರು ಮೆಲ್ಕಾರಿನಲ್ಲಿ ಬೈಕ್ ಪಾಯಿಂಟ್ ಹೆಸರಿನ ಅಂಗಡಿಯಲ್ಲಿ ಸುಮಾರು 2 ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಖರೀದಿಸಿ ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದರು. ಅವರು ಸುಮಾರು 2 ತಿಂಗಳ ಹಿಂದೆ ಟಿವಿಎಸ್ ದ್ವಿಚಕ್ರ ವಾಹನವನ್ನು ಖರೀದಿ ಮಾಡಿ ತನ್ನ ಮಳಿಗೆಯಲ್ಲಿ ಮಾರಾಟಕ್ಕಿಟ್ಟಿದ್ದರು.
ಆ. 13ರಂದು ಮಳಿಗೆಗೆ ಆಗಮಿಸಿದ ಅಪರಿಚಿತ ವ್ಯಕ್ತಿಯೋರ್ವ ದ್ವಿಚಕ್ರ ವಾಹನವನ್ನು ಖರೀದಿಸುವುದಾಗಿ ಹೇಳಿ ಟ್ರಯಲ್ ನೋಡಿ ಬರುವುದಾಗಿ ಹೋಗಿದ್ದಾರೆ. ಆದರೆ ಆತ ಈವರೆಗೂ ಮರಳಿ ಬಾರದೆ, ವಾಹನವನ್ನು ಹಿಂದಿರುಗಿಸದೆ ವಂಚಿಸಿದ್ದಾಗಿ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.