ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ


Team Udayavani, Apr 19, 2020, 5:30 AM IST

ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ

ಸಾಂದರ್ಭಿಕ ಚಿತ್ರ.

ಒಬ್ಬ ಮನುಷ್ಯನು ತನ್ನ ಜೀವನದ 70% ಕಾಲವನ್ನು ಕೆಲಸದಲ್ಲಿ ತೊಡಗಿಸುತ್ತಾನೆ. ಕೆಲಸ ಅಥವಾ ಉದ್ಯೋಗವೆಂಬುದು ಒಬ್ಬ ಮನುಷ್ಯನಿಗೆ ಅಗತ್ಯವಾದ ಚಟುವಟಿಕೆ. ಈ ಕೆಲಸದಿಂದಾಗಿ ನಮಗೆ ಸಂಪಾದನೆಯ ಹೊರತು ಹಲವಾರು ಉಪಯೋಗಗಳಿವೆ. ಉದಾಹರಣೆಗೆ ಕೆಲಸದಿಂದಾಗಿ ನಮಗೆ ನಮ್ಮ ವೈಯಕ್ತಿಕ ಧ್ಯೇಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ. ಅಲ್ಲದೆ, ನಮ್ಮ ಸಾಮಾಜಿಕ ಜಾಲ ಹೆಚ್ಚಾಗುತ್ತದೆ ಹಾಗೂ ನಾವು ನಮ್ಮ ವೃತ್ತಿ ಮತ್ತು ಸಮುದಾಯಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ.

ನಮ್ಮ ಮಾನಸಿಕ ಆರೋಗ್ಯ ಚೆನ್ನಾಗಿದ್ದಲ್ಲಿ ನಾವು ಕೆಲಸದಲ್ಲಿ ಉತ್ಸುಕರಾಗಿರಲು, ಫ‌ಲದಾಯಕರಾಗಿರಲು ಸಾಧ್ಯವಾಗುತ್ತದೆ. ಜಾಗತಿಕ ಸ್ಪರ್ಧಾತ್ಮಕ ಪ್ರಕ್ರಿಯೆಗಳಿಂದಾಗಿ ಉದ್ಯೋಗ ಸಂಸ್ಥೆಗಳು, ಸಹೋದ್ಯೋಗಿಗಳೊಡನೆ ಇರುವ ಸಂಬಂಧಗಳು ಹಾಗೂ ಉದ್ಯೋಗ ಮಾದರಿಗಳು ಕೆಲಸದೊತ್ತಡವಾಗಿ ಪರಿವರ್ತನೆಯಾಗಿದೆ. ಇದರಿಂದಾಗಿ ಮಾನಸಿಕ ಒತ್ತಡ ಹಾಗೂ ಮಾನಸಿಕ ಸಮಸ್ಯೆಗಳು ಹೆಚ್ಚಾಗಿವೆ. ಜಾಗತಿಕ ಸ್ಪರ್ಧೆ ಹಾಗೂ ತ್ವರಿತ ಸಂವಹನದಿಂದಾಗಿ ಕೆಲಸ ಹಾಗೂ ಜೀವನವನ್ನು ಪ್ರತ್ಯೇಕಿಸಲು ಕಷ್ಟವಾಗುತ್ತಿದೆ. ನಾವೆಲ್ಲರೂ ಇತ್ತೀಚೆಗೆ ಅನುಭವಿಸಿದ ಜಾಗತಿಕ ಆರ್ಥಿಕ ಬಿಕ್ಕಟ್ಟು ಹಾಗೂ ಹಿಂಜರಿತದಿಂದಾಗಿ ಬಹಳಷ್ಟು ಉದ್ಯಮಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ವಿಲೀನಗೊಳಿಸುವಿಕೆ, ಹೊರಗುತ್ತಿಗೆ, ಉಪಗುತ್ತಿಗೆಗಳ ಮುಖಾಂತರ ನಡೆಸುತ್ತಿವೆ. ಹೀಗಾಗಿ ಕೆಲಸದ ತಾಣಗಳಲ್ಲಿ ಸ್ಪರ್ಧೆಗಳು ಹೆಚ್ಚಿವೆ, ಉದ್ಯೋಗ ನೀಡಿರುವವರಿಂದ ನಿರೀಕ್ಷೆಗಳು, ವೇಗದ ರೀತಿಯ ತೀವ್ರ ಕೆಲಸ, ಅನಿಯಮಿತ ಕೆಲಸದ ಸಮಯ, ಕೆಲಸದ ಹೆಚ್ಚುತ್ತಿರುವ ಬೇಡಿಕೆಗಳು, ಉದ್ಯೋಗದ ಅಭದ್ರತೆ, ಕೆಲಸದ ವಿಷ‌ಯಗಳ ಬಗ್ಗೆ ನಿಯಂತ್ರಣದ ಕೊರತೆ, ಕೆಲಸದ ಸಂಘಟಣೆ ಹಾಗೂ ಕುಸಿಯುತ್ತಿರುವ ಉದ್ಯೋಗಾವಕಾಶಗಳು, ಇವೆಲ್ಲ ಕಾರಣಗಳಿಂದಾಗಿ ಕೆಲಸ ಮಾಡುವವರಲ್ಲಿರುವ ಪ್ರೇರಣೆ, ತೃಪ್ತಿ ಹಾಗೂ ಸೃಜನಶೀಲತೆ ಕುಂಠಿತವಾಗಿದೆ.
ಉದ್ಯೊಗದಿಂದ ಉಂಟಾಗುವ ದೀರ್ಘ‌ಕಾಲದ ಒತ್ತಡಗಳು ನಮ್ಮ ದೈಹಿಕ ಆರೋಗ್ಯವನ್ನು ಕೆಡಿಸುತ್ತಿದೆ. ಕೆಲಸದ ಜವಾಬ್ದಾರಿಗಳ ಬಗ್ಗೆ ನಿರಂತರವಾದ ಮುಂದಾಲೋಚನೆಯಿಂದಾಗಿ ಅನಿಯಮಿತ ಆಹಾರ ಸೇವಿಸುವ ಅಭ್ಯಾಸಗಳು, ಅಧಿಕ ರಕ್ತದೊತ್ತಡ, ಸಾಕಷ್ಟು ವ್ಯಾಯಾಮದ ಕೊರತೆ, ದೇಹದ ತೂಕ ಹೆಚ್ಚುವಿಕೆ, ಇತ್ಯಾದಿಗಳು ಉಂಟಾಗಿವೆ. ಬರ್ನ್ ಔಟ… ಎಂಬ ಸಮಸ್ಯೆ ಉಂಟಾಗಿ ಉದ್ಯೋಗಿಗಳಲ್ಲಿ ಮಾನಸಿಕ ಖನ್ನತೆ ಉದ್ಭವಿಸುತ್ತಿದೆ. ಅತೀಯಾದ ಹಾಗೂ ದೀರ್ಘ‌ಕಾಲದ ಒತ್ತಡದಿಂದಾಗಿ ಉಂಟಾಗುವ ಭಾವನಾತ್ಮಕ, ಮಾನಸಿಕ ಹಾಗೂ ದೈಹಿಕ ಬಳಲಿಕೆಯನ್ನು ಬರ್ನ್ ಔಟ… ಎನ್ನುವರು. ಇದರಿಂದಾಗಿ ಹ್ರದಯಕ್ಕೆ ಸಂಭಂದಪಟ್ಟ ಕಾಯಿಲೆಗಳು, ಸ್ಟ್ರೋಕ್‌, ಸ್ಥೂಲಕಾಯತೆ, ತಿನ್ನುವ ಅಸ್ವಸ್ಥತೆಗಳು, ಸಕ್ಕರೆ ಕಾಯಿಲೆ ಮುಂತಾದುವುಗಳು ಉಂಟಾಗಬಹುದು. ಬಹುಕಾಲದ ಖನ್ನತೆಯಿಂದಾಗಿ ವಿನಾಯತಿ ಕಡಿಮೆಯಾಗಿ ಇನ್ನಿತರ ಕಾಯಿಲೆಗಳು ಉಂಟಾಗಬಹುದು. ಇವೆಲ್ಲವುಗಳಿಂದ ಕೆಲಸದ ಅಪಘಾತಗಳು ಹೆಚ್ಚಬಹುದು ಹಾಗೂ ಓರ್ವ ಉದ್ಯೋಗಿಯ ಕೆಲಸಕ್ಕೆ ಗೈರುಹಾಜರಿ ಹೆಚ್ಚಾಗಬಹುದು.

ಕೆಲಸದ ಸ್ಥಳಗಳಲ್ಲಿ ಉಂಟಾಗುವ ಒತ್ತಡಗಳಿಗೆ ಹಲವಾರು ಕಾರಣಗಳಿರಬಹುದು. ಉದಾಹರಣೆಗೆ: ಕೆಲಸದಲ್ಲಿ ಬೆದರಿಕೆ, ಕಿರುಕುಳ, ಅತಿಯಾದ ಕೆಲಸ, ಗುರುತಿಸಲಾಗದ ಅಥವಾ ಕಳಪೆ ನಿರ್ವಹಣೆ, ಅಧಿಕ ಕೆಲಸದ ಹೊರೆ, ಕೆಲಸದಲ್ಲಿ ಸಂಕೀರ್ಣತೆ, ಸಮಯದ ಒತ್ತಡ, ಕೆಲಸದ ಸಂಘರ್ಷಗಳು, ನಾಯಕತ್ವ ಹಾಗೂ ಸಹಯೋಗದ ಕೊರತೆ, ಇತ್ಯಾದಿ. ಇಂತಹ ಮಾನಸಿಕ ಆರೋಗ್ಯಕ್ಕೆ ಹಾನಿಕಾರಕವಾದ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ನಿವಾರಿಸುವ ಪ್ರಯತ್ನಪಡುವುದು ಮುಖ್ಯವಾಗಿದೆ.

ಉದ್ಯೋಗದಲ್ಲಿ ಸದ್ಯಕ್ಕೆ ಇರುವ ಪರಿಸ್ಥಿತಿಯನ್ನು ಹತೋಟಿಯಲ್ಲಿರಿಸಲು ಈ ಕೆಳಗೆ ಕಾಣಿಸಲಾದ ಕೆಲವು ವಿಧಾನಗಳನ್ನು ಪ್ರಯತ್ನಿಸಬಹುದು
 ನಿಮಗೆ ಯಾವ ರೀತಿಯ ಕೆಲಸ ಇಷ್ಟ ಅಥವ ಇಷ್ಟವಿಲ್ಲ ಎಂಬುದನ್ನು ಗುರುತಿಸಿ
 ಈವಾಗ ನಿಮಗೆ ಇರುವ ಅಗತ್ಯಗಳನ್ನು ಪರಿಶೀಲಿಸಿ
 ನಿಮ್ಮಲ್ಲಿ ಯಾವ ಯಾವ ಕಲೆಗಳನ್ನು ಕಲಿತು ಬೆಳೆಸಬಹುದೆಂದು ಗುರುತಿಸಿ
 ಸ್ವ ಇಚ್ಛೆಯಿಂದ ಕೆಲಸಕ್ಕೆ ಬೇಕಾದ ಶಿಕ್ಷಣವನ್ನು ಪಡೆದುಕೊಳ್ಳಿ
 ಸದ್ಯಕ್ಕೆ ಇರುವ ಕೆಲಸವನ್ನು ಮುಂದುವರಿಸಲು ಸಾಧ್ಯವೇ ಆಗದಿ¨ªಾಗ ಹೊಸ ಕೆಲಸವನ್ನು ಹುಡುಕಲು ಪ್ರಯತ್ನಿಸಿ
 ಮಾನಸಿಕ ತೊಂದರೆಗಳು ಇದ್ದಲ್ಲಿ ಮಾನಸಿಕ ತಜ°ರನ್ನು ಭೇಟಿಯಾಗಲು ಹಿಂಜರಿಯದಿರಿ

ಒಳ್ಳೆಯ ಮಾನಸಿಕ ಆರೋಗ್ಯವು ಒಬ್ಬ ಮನುಷ್ಯನ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು, ಜೀವನದ ಸಮಸ್ಯೆಗಳನ್ನು ಬಗೆಹರಿಸಲು, ಕೆಲಸದ ಉತ್ಪಾದಕ ಫ‌ಲಿತಾಂಶವನ್ನು ಹೆಚ್ಚಿಸಲು ಹಾಗೂ ಸಮಾಜಕ್ಕೆ ಒಳಿತನ್ನು ಮಾಡಲು ಬಹು ಸಹಕಾರಿಯಾಗಿದೆ. ಹಾಗಾಗಿ ನಮ್ಮ ಮಾನಸಿಕ ಆರೋಗ್ಯವನ್ನು ಪ್ರಬಲಗೊಳಿಸುವ ಪ್ರಯತ್ನವನ್ನು ಮಾಡೋಣ.

-ಶಾಲಿನಿ ಕ್ವಾಡ್ರಸ್‌,
ಅಸಿಸ್ಟೆಂಟ್‌ ಪ್ರೊಫೆಸರ್‌,
ಅಕ್ಯುಪೇಶನಲ್‌ ಥೆರಪಿ ವಿಭಾಗ, ಕೆಎಂಸಿ ಆಸ್ಪತ್ರೆ, ಮಣಿಪಾಲ.

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mental health: ತಾಯಂದಿರ ಮಾನಸಿಕ ಆರೋಗ್ಯ

1

Dentistry: ನಿಮ್ಮ ಆತ್ಮವಿಶ್ವಾಸದ ನಗುಮುಖಕ್ಕೆ ಡೆಂಟಲ್‌ ಇಂಪ್ಲಾಂಟ್‌

7

fasting- ಆತ್ಮದ ಶಕ್ತಿ; ಆಧುನಿಕ ಪ್ರಾಚೀನ ಹಾಗೂ ಪರಿಕಲ್ಪನೆಯ ಸಂಯೋಗ

4

Health: ಮೊಣಕಾಲಿನ ಅಸ್ಥಿಸಂಧಿವಾತ; ಸಾಮಾನ್ಯ ಸಮಸ್ಯೆಯನ್ನು ಮಾಡಿಕೊಳ್ಳುವುದು

1

Tobacco Cessation Centre: ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ತಂಬಾಕು ವರ್ಜನ ಕೇಂದ್ರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.