Metaverse Game: ಬಾಲಕಿಯ ಮೇಲೆ ವರ್ಚುವಲ್ ಗ್ಯಾಂಗ್ ರೇಪ್!
Team Udayavani, Jan 3, 2024, 11:31 PM IST
ಲಂಡನ್: ಮೆಟಾವರ್ಸ್ ಗೇಮ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ವರ್ಚುವಲ್ ಆಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಲಂಡನ್‌ನಲ್ಲಿ ವರದಿಯಾಗಿದೆ. ಈ ಸಂಬಂಧ ಬ್ರಿಟನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ರೀತಿಯ ಘಟನೆ ದಾಖಲಾಗಿರುವುದು ಇದೇ ಮೊದಲು. ಮಾಲ್‌ವೊಂದರಲ್ಲಿ ಬಾಲಕಿ ವರ್ಚುವಲ್ ರಿಯಾಲಿಟಿ(ವಿಆರ್) ಹೆಡ್‌ಸೆಟ್ ಹಾಕಿ ಕೊಂಡು, ಅದರಲ್ಲೇ ಸಂಪೂರ್ಣವಾಗಿ ತಲ್ಲೀನವಾಗುವ ಆಟ ಆಡುತ್ತಿದ್ದಳು.
ಈ ವೇಳೆ ಆಟದಲ್ಲಿ ಅವಳ “ಅವತಾರ್’ ಪಾತ್ರದ ಮೇಲೆ ಹಲವು ಪುರುಷ “ಅವತಾರ್’ ಪಾತ್ರಗಳು ಲೈಂಗಿಕ ದೌರ್ಜನ್ಯ ನಡೆಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. “ತಂತ್ರಜ್ಞಾನ ವ್ಯಾಪಕವಾಗಿ ಬೆಳೆಯುತ್ತಿರುವ ಈ ಹೊತ್ತಿನಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಬಾಲಕಿಯ ಮೇಲೆ ದೈಹಿಕವಾಗಿ ಅತ್ಯಾಚಾರ ನಡೆಯದಿದ್ದರೂ, ಆಕೆ ಮಾನಸಿಕ ಹಿಂಸೆ ಅನುಭವಿಸಿದ್ದಾಳೆ. ಮಾನಸಿಕವಾಗಿ ಜರ್ಜರಿತಳಾಗಿದ್ದಾಳೆ. ಈ ರೀತಿಯ ಗೇಮ್‌ಗಳು ಆರೋಗ್ಯಕರವಲ್ಲ. ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.