ಖನಿಜ ರಕ್ಷಣಾ ಪಡೆಯ ಗಸ್ತು ವಾಹನಗಳಿಗೆ ಸಚಿವ ಹಾಲಪ್ಪ ಆಚಾರ್ ಚಾಲನೆ
Team Udayavani, Dec 27, 2022, 4:09 PM IST
ಸುವರ್ಣಸೌಧ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದುಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ‘ಖನಿಜ ರಕ್ಷಣಾ ಪಡೆ’ ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೋಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿ ಆಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ:ಚೆಂಡೆ ವಾದನ ಬಡಿಯುತ್ತಾ ಮದುವೆ ಮಂಟಪಕ್ಕೆ ಬಂದ ವಧು: ವಿಡಿಯೋ ವೈರಲ್
ಮೊದಲ ಹಂತದಲ್ಲಿ ಖನಿಜ ರಕ್ಷಣಾ ಪಡೆಯನ್ನು ಹೆಚ್ಚಿನ ಖನಿಜ/ ಉಪಖನಿಜ ಗಣಿಗಾರಿಕೆ ಇರುವ ಎಂಟು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಇದರ ನಿರ್ವಹಣೆಗೆ ಪ್ರತಿ ಜಿಲ್ಲೆಗೆ ಹವಾಲ್ದಾರ್ ದರ್ಜೆಯ 03 ನಿವೃತ್ತ ಸೈನಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.