Hampi: ಜನತಾ ಪ್ಲಾಟ್ ನಿವಾಸಿಗಳ ಸಮಸ್ಯೆ ಆಲಿಸಿದ ಸಚಿವ ಜಮೀರ್
Team Udayavani, Aug 9, 2023, 5:45 PM IST
ಹೊಸಪೇಟೆ: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಬುಧವಾರ ಹಂಪಿಗೆ ಭೇಟಿ ನೀಡಿ, ಜನತಾ ಪ್ಲಾಟ್ ನಿವಾಸಿಗಳ ಸಮಸ್ಯೆ ಆಲಿಸಿದರು.
ನ್ಯಾಯಾಂಗ ನಿಂದನೆ ಕೇಸ್ ಹೆಸರಲ್ಲಿ ಕಳೆದ ಎರಡು ತಿಂಗಳ ಹಿಂದೆ ವಿಜಯನಗರ ಜಿಲ್ಲಾಡಳಿತ ಇಲ್ಲಿನ ಹೋಂ ಸ್ಟೇ, ಅಂಗಡಿ ಮುಂಗಟ್ಟು ಹಾಗೂ ಹೊಟೇಲ್ ಗಳಿಗೆ ಬೀಗಮುದ್ರೆ ಹಾಕಿತ್ತು. ಇದರಿಂದ ಕಳೆದ ಎರಡು ತಿಂಗಳಿಂದ ಹಂಪಿಗೆ ಬರುವ ಯಾತ್ರಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ವಸತಿ ಸೌಲಭ್ಯ ಇರಲಿ ಆಹಾರ, ನೀರೂ ಸಹ ದೊರಕದೆ ಸಮಸ್ಯೆಯಾಗಿತ್ತು. ಇನ್ನು ಸ್ಥಳೀಯರೂ ಸಹ ಯಾವುದೇ ಸರಕು ಬೇಕಾದರೂ ಸಮೀಪದ ಗ್ರಾಮಗಳಿಗೆ ತೆರಳುವ ಪರಿಸ್ಥಿತಿ ಬಂದೊದಗಿದೆ.
ಈ ಎಲ್ಲಾ ವಿಷಯವನ್ನು ಸ್ಥಳೀಯರು ಭೇಟಿ ನೀಡಿದ ಸಚಿವ ಜಮೀರ್ ಅಹಮದಗ ಅವರ ಗಮನಕ್ಕೆ ತಂದರು. ಮಹಿಳೆಯರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲು ಸಲ್ಲಿಸಿದರು. ಈ ವೇಳೆ ಸಚಿವರೊಂದಿಗೆ ಮಾತನಾಡಿದ ಗ್ರಾಮಸ್ಥ ಕಿರಣ್ ಹಂಪಿ ಜನರ ಮೇಲಿರುವ ಗಾಂಜಾ ಮಾರಾಟ, ವೇಷ್ಯಾವಾಟಿಕೆ ಆರೋಪದ ಕುರಿತು ಇರುವ ವಾಸ್ತವತೆ, ಹಂಪಿ ಜನರ ಮೇಲೆ ಕೇಳಿ ಬಂದ ಆರೋಪಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಎಲ್ಲರು ಆರೋಪಿಸುವಂತೆ ಇಲ್ಲಿ ಯಾವುದೇ ರೆಸಾರ್ಟ್ ಗಳಿಲ್ಲ. ಇರುವುದೆಲ್ಲವೂ ಹೋಂ ಸ್ಟೇಗಳು. ಈ ಹೋಂಸ್ಟೇಗಳು ವಾಣಿಜ್ಯ ವಹಿವಾಟಿನ ಅಡಿಯಲ್ಲಿ ಬರುವುದೇ ಇಲ್ಲ. ಆದರೂ ಅನಧಿಕೃತ ವ್ಯವಹಾರ ಎಂದು ಆರೋಪಿಸಿ ಜನರ ಜೀವನ ನಡೆಸಲೂ ಸಹ ತೊಂದರೆ ಮಾಡಿದ್ದಾರೆ ಎಂದು ಸ್ಥಳೀಯರು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಮೀರ್ ಅಹಮದ್ ನಿಮ್ಮಗಳ ಬಗ್ಗೆ ಇರುವ ತಪ್ಪು ಗ್ರಹಿಕೆ ನನಗೀಗ ನಿವಾರಣೆಯಾಯಿತು ಎಂದರು.
ಜನರ ಅಹವಾಲು ಸ್ವೀಕರಿಸಿದ ಸಚಿವ ಜಮೀರ್ ಅಹಮದ್ ಖಾನ್ ನಂತರ ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿಯ ದರ್ಶನ ಪಡೆದರು.
ಹಂಪಿ ಜನರು ಗಾಂಜಾ ಮಾರಾಟ ಮಾಡುತ್ತಾರೆ ವೇಷ್ಯಾವಾಟಿಕೆ ನಡೆಸುತ್ತಾರೆ ಎನ್ನುವ ಆರೋಪಗಳು ಹುರುಳಿಲ್ಲದವು ಎನ್ನುವುದನ್ನು ಸಚಿವರ ಗಮನಕ್ಕೆ ತರಲಾಗಿದೆ. ನ್ಯಾಯಾಂಗದ ಆದೇಶ ಆಗುವವರೆಗಾದರೂ ಜನರ ಜೀವನೋಪಾಯಕ್ಕೆ ಯಾವುದೇ ತೊಂದರೆ ಮಾಡದಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ. ಎಂದು ನಿವಾಸಿ ಕಿರಣ್ ಕುಮಾರ್ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.