ಪ್ಯಾರಾ ಓಲಂಪಿಕ್ ನಲ್ಲಿ ಚಿನ್ನ ಗೆದ್ದರೆ 5 ಕೋಟಿ ಬಹುಮಾನ : ಸಚಿವ ಡಾ. ನಾರಾಯಣಗೌಡ


Team Udayavani, Aug 16, 2021, 7:22 PM IST

deew

ಬೆಂಗಳೂರು: ಜಪಾನ್‍ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್‍ ನಲ್ಲಿ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿದ್ದು, ಅವರು ಚಿನ್ನದ ಪದಕ ಗೆದ್ದರೆ ರಾಜ್ಯ ಸರ್ಕಾರದಿಂದ ರೂ. 5 ಕೋಟಿ , ಬೆಳ್ಳಿ ಗೆದ್ದರೆ ರೂ. 3 ಕೋಟಿ ಹಾಗೂ ಕಂಚಿನ ಪದಕ ಗೆದ್ದರೆ ರೂ. 2 ಕೋಟಿ ಬಹುಮಾನ ನೀಡಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.

ಈ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್‍ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ ಹಾರಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇಬ್ಬರೂ ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷದ ಚೆಕ್ ವಿತರಿಸಿದರು. ಇದೇ ವೇಳೆ ಶಿಖರದಿಂದ ಸಾಗರ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಸಾಹಸ ಯಾತ್ರೆಗೆ ಸಚಿವರು ಹಸಿರು ನಿಶಾನೆ ತೋರಿಸಿದರು.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರತಿ ದಿನ ಒಂದು ಗಂಟೆ ದೈಹಿಕ ಶಿಕ್ಷಣಕ್ಕೆ ಸಮಯ ಮೀಸಲಿಡಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ಅಲ್ಲದೆ ಪ್ರತಿಯೊಂದು ಶಾಲೆಗೂ ಕಡ್ಡಾಯವಾಗಿ ಮೈದಾನ ಇರಬೇಕು. ಒಂದು ವೇಳೆ ಮೈದಾನ ಇಲ್ಲದಿದ್ದಲ್ಲಿ ಬಾಡಿಗೆ ಆಧಾರದಲ್ಲಾದರೂ ಮೈದಾನ ಪಡೆದು, ಮಕ್ಕಳಿಗೆ ದೈಹಿಕ ಶಿಕ್ಷಣ ನೀಡಬೇಕು. ವ್ಯಾಯಾಮ, ಕ್ರೀಡೆ ಮಕ್ಕಳಿಗೆ ಅತ್ಯವಶ್ಯಕ. ಈ ಬಗ್ಗೆ ಪತ್ರದಲ್ಲಿ ಮನವಿ ಮಾಡಿದ್ದೇನೆ. ಶಾಲೆಗಳು ಸರ್ಕಾರದ ಆದೇಶ ಪಾಲಿಸದಿದ್ದಲ್ಲಿ ಪರವಾನಿಗೆಯನ್ನೇ ರದ್ದು ಮಾಡುವಂತೆಯೂ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿರುವುದಾಗಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ” ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಇದು ಒಂದು ಐತಿಹಾಸಿಕ ಯಾನವಾಗಿದ್ದು, ಕರ್ನಾಟಕಕ್ಕೆ ಸೇರಿದ 5 ಯುವತಿಯರು ಕಾಶ್ಮೀರದಲ್ಲಿ kolhoi (5425 ಮೀ) ಶಿಖರವನ್ನು ಏರುವ ಮೂಲಕ ಶುರುವಾಗಿ, ತದನಂತರ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿ, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಾ ಮಂಗಳೂರು ತಲುಪಿ ಈ ಯಾನವನ್ನು ಮುಕ್ತಾಯಗೊಳಿಸಲಾಗುವುದು.

ಇದು ಸುಮಾರು 45 ದಿನಗಳ ಅಭಿಯಾನ ಆಗಿದ್ದು, ಸ್ತ್ರೀ ಶಕ್ತಿ ಸಾಹಸ, ಧೈರ್ಯ, ನಾರಿಯ ಪುರುಷರ ವಿಕಾಸ ಎನ್ನುವಂತಹ ತತ್ವವನ್ನು ಬಿಂಬಿಸುವಂತಹ ವಿಭಿನ್ನವಾದ ಒಂದು ಕಾರ್ಯಕ್ರಮವಾಗಿರುತ್ತದೆ. ಭಾರತೀಯ ಪರ್ವತರೋಹಣ ಸಂಸ್ಥೆಯ ದಕ್ಷಿಣ ವಲಯ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಹಯೋಗದೊಂದಿಗೆ ನಡೆಸುತ್ತಿರುವ ಈ ಯಾನಕ್ಕೆ ಸಚಿವರು ಚಾಲನೆ ನೀಡಿದರು. ಸರ್ಕಾರದಿಂದ ಸಾಹಸ ಕ್ರೀಡೆಗಳಿಗೆ ಅತಿ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಯುವ ಜನತೆ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಓಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ, ಎಮ್‍ಎಲ್‍ಸಿ ಗೋವಿಂದರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಲಾಖೆ ಆಯುಕ್ತ ವೆಂಕಟೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.