Mahalingapura: ಘಟಪ್ರಭಾ ಎಡದಂಡೆ ಕಾಲುವೆಗೆ ಸಚಿವ ಸತೀಶ ಜಾರಕಿಹೋಳಿ ಭೇಟಿ
ಘಟಪ್ರಭಾ ಮುಖ್ಯಕಾಲುವೆ ಕೊನೆ ಹಂತದವರೆಗೆ ನೀರು ಹರಿಸಲು ಅಧಿಕಾರಿಗಳಿಗೆ ನಿರ್ದೇಶನ
Team Udayavani, Jan 7, 2024, 7:59 PM IST
ಮಹಾಲಿಂಗಪುರ: ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಹತ್ತಿರದ ಘಟಪ್ರಭಾ ಎಡದಂಡೆ ಕಾಲುವೆಯ ಚಿಮ್ಮಡ ಚೌಕಿಗೆ ರವಿವಾರ ಘಟಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಬಿಎಲ್‌ಬಿಸಿಯ ಘಟಪ್ರಭಾ, ಜಮಖಂಡಿ, ಬೀಳಗಿ ವಿಭಾಗದ ಅಧಿಕಾರಿಗಳೊಂದಿಗೆ ಮತ್ತು ರೈತರೊಂದಿಗೆ ಮಾತನಾಡಿದ ಅವರು ಈ ವರ್ಷ ಬರಗಾಲ ಇರುವ ಕಾರಣ ಪ್ರತಿವರ್ಷದಂತೆ ಹಿಡಕಲ್ ಜಲಾಶಯದಿಂದ ನಿಗದಿತ ಪ್ರಮಾಣದಲ್ಲಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದೇ ಜನವರಿ 1 ರಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಘಟಪ್ರಭಾ ಎಡದಂಡೆ ಕಾಲುವೆಗೆ ಸಂಬಂಧಿಸಿದ ಅಕಾರಿಗಳು ಆದ್ಯತೆಯ ಮೇರೆಗೆ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮಗಳಲ್ಲಿನ ಕೆರೆಗಳನ್ನು ತುಂಬಿಸುವದರ ಜೊತೆಗೆ ಘಟಪ್ರಭಾ ಎಡದಂಡೆ ಮುಖ್ಯಕಾಲುವೆಯ ಕೊನೆಯ ಹಂತ (ಬೀಳಗಿ ವಿಭಾಗ) ದವರೆಗೂ ನೀರನ್ನು ಹರಿಸಲು ಅಧಿಕಾರಿಗಳೊಂದಿಗೆ ರೈತರು ಸಹಕಾರ ನೀಡಬೇಕಾಗಿದ್ದು ಅವಶ್ಯವಾಗಿದೆ ಎಂದರು.
ಸದ್ಯ ಹಿಡಕಲ್ ಜಲಾಶಯದಲ್ಲಿ 34 ಟಿಎಂಸಿ ನೀರು ಲಭ್ಯವಿದ್ದು, ಬೆಳಗಾವಿ ನಗರ ಸೇರಿದಂತೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನ-ಜಾನುವಾರುಗಳಿಗೆ ಬೆಸುಗೆ ಕಾಲದಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಬೇಕಾಗಿದೆ. ಸಾರ್ವಜನಿಕರು ಸಹ ಅನಾವಶ್ಯಕವಾಗಿ ನೀರು ಪೋಲಾಗದಂತೆ ನೀರನ್ನು ಮಿತವಾಗಿ ಬಳಸುವದು ಅನಿವಾರ್ಯವಾಗಿದೆ ಎಂದರು.
ಕುಡಿಯುವ ಉದ್ದೇಶಕ್ಕಾಗಿ ಈಗ ಘಟಪ್ರಭಾ ಎಡದಂಡೆ ಹರಿಸುತ್ತಿರುವ ನೀರನ್ನು ಜ.15 ರವರೆಗೆ ಹರಿಸಲಾಗುವದು. ಜಿಎಲ್‌ಬಿಸಿ ಜಮಖಂಡಿ ವೃತ್ತದ ಅಡಿಯಲ್ಲಿ ಬರುವ ಎಲ್ಲಾ ವಿಭಾಗದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಬೀಳಗಿ ಕೊಣೆಯ ಭಾಗದವರೆಗೆ ಸಮರ್ಪಕ ನೀರು ಪೋರೈಸುವ ಕಾರ್ಯವನ್ನು ಅಧಿಕಾರಿಗಳು ಕೈಗೊಳ್ಳಬೇಕು ಅವಶ್ಯವೆನಿಸಿದರೆ ಇತರೆ ಇಲಾಖೆಗಳ ಸಹಕಾರ ಪಡೆದು ಎಲ್ಲ ಭಾಗಗಳ ಕೆರೆ, ಬಾಂದಾರ, ಚೆಕ್ ಡ್ಯಾಂಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಈ ಭಾಗದಲ್ಲಿ ಹಲವು ಕೆರೆಗಳು ಭರ್ತಿಯಾಗಿವೆ ಇನ್ನು ಕೆಲವು ಕೆರೆಗಳಿಗೆ ನೀರು ಪೋರೈಕೆಯಾಗುತ್ತಿಲ್ಲ ರಾಯಭಾಗ ಭಾಗದಿಂದ ಈ ಕೆಳಗಿನ ಭಾಗಕ್ಕೆ ನೀರು ಸಮರ್ಪಕವಾಗಿ ಬರುತ್ತಿಲ್ಲ ಹೀಗಾಗಿ ಬೀಳಗಿ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಹಲವು ರೈತರು ಅಧಿಕಾರಿಗಳು ಸಚಿವರಿಗ ಮನವರಿಕೆ ಮಾಡಿದರು.
ಈ ಸಂದರ್ಭದಲ್ಲಿ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಮಾತನಾಡಿ ನೀರು ತಲುಪಿದ ಭಾಗದಲ್ಲಿ ನೀರು ಹರಿಸುವುದನ್ನು ನಿಲ್ಲಿಸಿ, ತಲುಪದ ಕಡೆ ಮಾತ್ರ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತೇರದಾಳ ಮತಕ್ಷೇತ್ರದ ಮುಖಂಡ ಸಿದ್ದು ಕೊಣ್ಣುರ, ಬೆಳಗಾವಿಯ ನೀರಾವರಿ ಉತ್ತರ ವಲಯದ ಮುಖ್ಯ ಅಭಿಯಂತರ ಬಿ.ಆರ್.ರಾಠೋಡ, ಜಿಎಲ್‌ಬಿಸಿ ಜಮಖಂಡಿ ವೃತ್ತದ ಅಧಿಕ್ಷಕ ಅಭಿಯಂತರ ಪ್ರಶಾಂತ ಗಿಡಪ್ಪನವರ, ಜಮಖಂಡಿ ಕಾರ್ಯನಿರ್ವಾಹಕ ಅಭಿಯಂತರ ಶ್ರೀಶೈಲ ಕಲ್ಯಾಣಿ, ರಬಕವಿ ಜಿಎಲ್‌ಬಿಸಿ ಎಇಇ ಚೇತನ ಅಬ್ಬಿಗೇರಿ, ಮಹಾಲಿಂಗಪುರ ಜಿಎಲ್‌ಬಿಸಿ ಎಇಇ ವೆಂಕಟೇಶ ಬೆಳಗಲ್, ಬೀಳಗಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಎಚ್.ಆರ್.ಮಾರಡ್ಡಿ, ಘಟಪ್ರಭಾ ವಿಭಾಗದ ಕಾರ್ಯ ನಿರ್ವಾಹಕ ಅಧಿಕಾರಿ ನಾಗೇಶ ಕೋಲಕರ, ರಬಕವಿ ಎಇ ಶ್ರೀಧರ ನಂದಿಹಾಳ, ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪಾ ಸಿಂಗಾಡಿ, ಲಕ್ಷ್ಮಣ ದೇಸಾರಟ್ಟಿ, ಉಮೇಶ ಪೂಜಾರಿ, ಅಶೋಕ ಧಡೂತಿ, ಭೀಮಸಿ ಸಸಾಲಟ್ಟಿ, ಕಿರಣ ಕರಲಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ರೈತ ಮುಖಂಡರು, ಜಿಎಲ್‌ಬಿಸಿ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.