ಐಐಎಸ್ ಸಿಯಿಂದ ಕಡಿಮೆ ವೆಚ್ಚದ, ದಕ್ಷತೆಯ ಆಕ್ಸಿಜನ್ ಕಾನ್ಸಂಟ್ರೇಟರ್: ಸುಧಾಕರ್ ಜೊತೆ ಚರ್ಚೆ


Team Udayavani, May 13, 2021, 4:43 PM IST

ಐಐಎಸ್ ಸಿಯಿಂದ ಕಡಿಮೆ ವೆಚ್ಚದ, ದಕ್ಷತೆಯ ಆಕ್ಸಿಜನ್ ಕಾನ್ಸಂಟ್ರೇಟರ್: ಸಚಿವ ಸುಧಾಕರ್ ಜೊತೆ ಚರ್ಚೆ

ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್‍ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.

30 ಡಿಗ್ರಿ ಸೆಲ್ಸಿಯಸ್ ತಾಪಮಾನದದಲ್ಲೂ ದಾಸ್ತಾನು ಮಾಡಬಹುದಾದ ಲಸಿಕೆ, ಹೆಚ್ಚು ದಕ್ಷತೆಯಿಂದ ಕೂಡಿರುವ ಆಕ್ಸಿಜನ್ ಕಾನ್ಸಂಟ್ರೇಟರ್ ಸೇರಿದಂತೆ ಕೋವಿಡ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಆವಿಷ್ಕಾರಗಳನ್ನು ಐಐಎಸ್ ಸಿ ವಿಜ್ಞಾನಿಗಳು ನಡೆಸುತ್ತಿರುವ ಕುರಿತು ಪ್ರೊ.ರಂಗರಾಜನ್ ಸಚಿವರಿಗೆ ವಿವರಿಸಿದರು.

ಆಕ್ಸಿಜನ್ ಕಾನ್ಸಂಟ್ರೇಟರ್: 10 ಎಲ್ ಪಿಎಂ ಸಾಮರ್ಥ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಐಐಎಸ್ ಸಿ ಅಭಿವೃದ್ಧಿಪಡಿಸಿದ್ದು, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕ್ಲಿನಿಕಲ್ ಪರೀಕ್ಷೆ ನಡೆಸಲಾಗಿದೆ. ಚೈನೀಸ್ ಕಾನ್ಸಂಟ್ರೇಟರ್ ಗಳು 40-50% ಆಕ್ಸಿಜನ್ ನೀಡುತ್ತಿದ್ದರೆ, ಐಐಎಸ್ ಸಿಯ ಕಾನ್ಸಂಟ್ರೇಟರ್ ಗಳು 90% ರಷ್ಟು ಆಕ್ಸಿಜನ್ ನೀಡುತ್ತವೆ. ಹೆಚ್ಚು ದಕ್ಷತೆಯಿಂದ ಕೂಡಿರುವ ಈ ಕಾನ್ಸಂಟ್ರೇಟರ್ ನ ಕ್ಲಿನಿಕಲ್ ಪರೀಕ್ಷೆಗೆ ಹಾಗೂ ತುರ್ತು ಬಳಕೆಗೆ ಸೆಂಟ್ರಲ್ ಡ್ರಗ್ಸ್ ಸ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‍ಸಿಒ) ನಿಂದ ಅನುಮೋದನೆ ದೊರೆಯಲು ಸಹಕರಿಸಬೇಕು ಎಂದು ಪ್ರೊ.ರಂಗರಾಜನ್ ಸಚಿವರಿಗೆ ಮನವಿ ಮಾಡಿದರು.

ಈ ಬಗ್ಗೆ ಭರವಸೆ ನೀಡಿದ ಸಚಿವ ಡಾ.ಕೆ.ಸುಧಾಕರ್, ಈ ಕೂಡಲೇ ಈ ಆವಿಷ್ಕಾರದ ಕುರಿತು ಆರ್ ಜಿಯುಎಚ್‍ಎಸ್ ಕುಲಪತಿಯವರೊಡನೆ ಚರ್ಚಿಸಲಾಗುವುದು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಕೋವಿಡ್-19 ಲಸಿಕೆ: ಇದೇ ವೇಳೆ ಪ್ರೊ.ರಂಗರಾಜನ್ ಅವರು, ಸಂಸ್ಥೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕೆ ಅಭಿವೃದ್ಧಿ ಕುರಿತು ವಿವರಿಸಿದರು. ಇದು ಹೆಚ್ಚು ನ್ಯೂಟ್ರಲೈಜ್ ಆಗಿರುವ ಲಸಿಕೆಯಾಗಿದ್ದು, ಮಾನವ ದೇಹದ ಮೇಲಿನ ಪ್ರಯೋಗ ಇನ್ನಷ್ಟೇ ಆರಂಭವಾಗಬೇಕಿದೆ. 30 ಡಿಗ್ರಿ ಸೆಲ್ಸಿಯಸ್ ಕೊಠಡಿ ತಾಪಮಾನದಲ್ಲೂ ಸಂಗ್ರಹಿಸಬಹುದಾದ ಗುಣ ಹೊಂದಿರುವ ಈ ಲಸಿಕೆ ಭಾರತದಲ್ಲಿ ಕೋವಿಡ್ ವಿರುದ್ಧದ ಹೋರಾಟದಲ್ಲಿ ಒಂದು ಮೈಲಿಗಲ್ಲಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಲಸಿಕೆ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಸರ್ಕಾರ ಈ ಲಸಿಕೆಯನ್ನು ವೇಗವಾಗಿ ಹಾಗೂ ಬಹಳ ಸುಲಭವಾಗಿ ವಿತರಿಸಬಹುದಾಗಿದೆ ಎಂದರು.

ಆಕ್ಸಿಜನ್ ಜನರೇಟರ್ ಘಟಕ: ಕೈಗಾರಿಕಾ ಘಟಕ ಹಾಗೂ ಆಸ್ಪತ್ರೆಗಳಲ್ಲಿ ಆಕ್ಸಿಜನ್ ತುಂಬಿಸುವಾಗ ವ್ಯರ್ಥವಾಗುವುದನ್ನು ಕಡಿಮೆ ಮಾಡುವುದು ಮತ್ತು ಲಭ್ಯವಿರುವ ಆಕ್ಸಿಜನ್ ಅನ್ನು ಬೇಡಿಕೆಗೆ ತಕ್ಕಷ್ಟೇ ಸಮರ್ಪಕವಾಗಿ ಬಳಸುವ ಕುರಿತು ಸೂಕ್ತ ತಾಂತ್ರಿಕ ಸಲಹೆ ನೀಡಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಕೋರಿದರು. ಈ ಸಮಸ್ಯೆ ಪರಿಹರಿಸಲು ಎಲ್ಲ ಬಗೆಯ ತಾಂತ್ರಿಕ ಸಹಕಾರ ಹಾಗೂ ಎಂಜಿನಿಯರಿಂಗ್ ನೆರವು ನೀಡಲಾಗುವುದು ಎಂದು ಪ್ರೊ.ರಂಗರಾಜನ್ ಆಶ್ವಾಸನೆ ನೀಡಿದರು.

ಟಾಪ್ ನ್ಯೂಸ್

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.