ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಚಿವ ಸುಧಾಕರ್ ಚರ್ಚೆ
Team Udayavani, May 3, 2020, 6:15 AM IST
ಬೆಂಗಳೂರು: ಲಾಕ್‌ಡೌನ್ ತೆರವಿನ ಬಳಿಕ ಎದುರಾಗುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಮಾರ್ಗೋಪಾಯಗಳ ಬಗ್ಗೆ ವಿವಿಧ ಗಣ್ಯರ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸಮಾಲೋಚನೆ ನಡೆಸಿದರು.
ಮೊದಲ ಹಂತದಲ್ಲಿ ಕನ್ನಡ ಚಿತ್ರರಂಗ ಮತ್ತು ಕ್ರೀಡಾಲೋಕದ ದಿಗ್ಗಜರ ಜತೆ ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೋವಿಡ್-19 ವೈರಾಣು ಜತೆಗೆ ಮುಂಬರುವ ದಿನಗಳಲ್ಲಿ ಬದುಕು ನಡೆಸುವ ಅನಿವಾರ್ಯ ಎದುರಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಯಿತು.
2 ತಾಸುಗಳ ಕಾಲ ನಡೆದ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ಸರಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಜನತೆಯ ಸುರಕ್ಷತೆ ಮತ್ತು ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.